ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಮಂಗಳವಾರ ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಹಿಂದೆ ಮುಖ್ಯಮಂತ್ರಿಗಳಾಗಿದ್ದ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ , ಬೊಮ್ಮಾಯಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಈ ಕೆಲಸ ಮಾಡಿದ್ದರಾ? ಬಸವಣ್ಣನನ್ಮು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಸಿದ್ದರಾಮಯ್ಯ ಸರ್ಕಾರ ಎಂದರು.ದಲಿತಾಸ್ತ್ರ ಪ್ರಯೋಗಿಸಿದ ಸಿಎಂ ಸಿದ್ದರಾಮಯ್ಯ:ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯನ್ನೆ ಅಸ್ತ್ರವಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ, ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತ ವರ್ಗದವರು ಉಳಿಯುತ್ತಾರೆ. ಆದರೆ ಸಂವಿಧಾನ ಬದಲಾವಣೆ ಮಾಡ್ತೀನಿ ಅಂತ ಹೊರಟಿದ್ದವರಿಗೆ ತಕ್ಕ ಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕ ಬೇಡಿ. ಸಮಾನತೆ ಅಂತ ಏನಾದ್ರು ಇದ್ರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಎಂದು ಹೇಳುವ ಮೂಲಕ ದಲಿತಾಸ್ತ್ರ ಪ್ರಯೋಗಿಸಿದರು.ಚಾಮರಾಜನಗರಕ್ಕೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ:
ಚಾಮರಾಜನಗರಕ್ಕೆ ಬಂದ್ರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳ್ತಾರೆ. ಯಾಕೆ ಚಾಮರಾಜನಗರದವರು ಮನುಷ್ಯರಲ್ವಾ..? ನಾನು ಈ ಹಿಂದೆ 12 ಬಾರಿ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದೆ. ಈ ಬಾರಿ ಸರ್ಕಾರ ರಚನೆಯಾದ ಬಳಿಕ ಮತ್ತೆ ಎರಡನೇ ಬಾರಿ ಬಂದಿದ್ದೇನೆ. ನಾನು ಇಲ್ಲಿಗೆ ಬಂದಷ್ಟು ಅಧಿಕಾರ ಗಟ್ಟಿಯಾಗುತ್ತದೆ. ಮತ್ತೇ ಬರ್ತೇನೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕುವ ಮೂಲಕ ನನ್ನ ಕೈ ಬಲಪಡಿಸಿ ಎಂದು ಮನವಿ ಮಾಡಿದರು.