ಕೆ.ಎನ್. ರಾಜಣ್ಣ ಸಚಿವ ಸ್ಥಾನ ಬೇಡ ಎಂದಿರುವುದು ನನಗೆ ಗೊತ್ತಿಲ್ಲ : ಸಂಸದ ಶ್ರೇಯಸ್ ಪಟೇಲ್

| N/A | Published : Feb 21 2025, 12:48 AM IST / Updated: Feb 21 2025, 12:39 PM IST

ಕೆ.ಎನ್. ರಾಜಣ್ಣ ಸಚಿವ ಸ್ಥಾನ ಬೇಡ ಎಂದಿರುವುದು ನನಗೆ ಗೊತ್ತಿಲ್ಲ : ಸಂಸದ ಶ್ರೇಯಸ್ ಪಟೇಲ್
Share this Article
  • FB
  • TW
  • Linkdin
  • Email

ಸಾರಾಂಶ

ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರು ನನಗೆ ಸಚಿವ ಸ್ಥಾನ ಬೇಡವೆಂದು ಹೇಳಿಕೆ ನೀಡಿರುವ ಮಾಹಿತಿ ನನಗೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

  ಹಾಸನ : ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರು ನನಗೆ ಸಚಿವ ಸ್ಥಾನ ಬೇಡವೆಂದು ಹೇಳಿಕೆ ನೀಡಿರುವ ಮಾಹಿತಿ ನನಗೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ನಗರಸಭೆಯಲ್ಲಿ ಸಭೆಯ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ನಮಗೆ ವೈಯಕ್ತಿಕವಾಗಿ ಆ ರೀತಿ ಹೇಳಿಲ್ಲ. ಉಸ್ತುವಾರಿ ಸಚಿವರು ಬಂದಾಗಿನಿಂದಲೂ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಕೆಲಸಗಳು ಆಗುತ್ತಿವೆ. ಫ್ಲೈಓವರ್‌ಗೆ ಹಣ ಬಿಡುಗಡೆಗೆ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಕೊಡಿಸಿದರು. 

ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಿದ್ರು. ನನ್ನ ಗಮನಕ್ಕೆ ಬಂದ ಹಾಗೆ ಅವರು ಹಾಸನ ಉಸ್ತುವಾರಿ ಬೇಡ ಎಂದು ಯಾವತ್ತೂ ಹೇಳಿಲ್ಲ. ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಯಲಿ ಎಂದರು. ದಲಿತರ ಸಮಾವೇಶ ವಿಚಾರ ಕುರಿತ ಪ್ರಶ್ನೆಗೆ ಪಕ್ಷ, ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ಪಕ್ಷದ ಹಿತದೃಷ್ಟಿಯಿಂದ ಸಮಾವೇಶ ಮಾಡಬಹುದು. ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಎಷ್ಟು ಸಮಾವೇಶ ಮಾಡಿದ್ರೂ ನಾವು ಒಪ್ಪಿಕೊಳ್ಳಬೇಕೆಂದರು. ನಮ್ಮ ಪಕ್ಷದಲ್ಲಿ ತತ್ವ ಸಿದ್ಧಾಂತದ ಮೇಲೆ ತೀರ್ಮಾನ ಮಾಡ್ತಾರೆ, ಪಕ್ಷದ ಅಡಿಯಲ್ಲಿ ಯಾವುದೇ ಸಮಾವೇಶ ನಡೆದರೂ ತಪ್ಪಲ್ಲ. ಪಕ್ಷ ಸಂಘಟನೆಗೆ ಒತ್ತು ಕೊಟ್ಟು ಸಮಾವೇಶ ಮಾಡ್ತಾರೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ತೊಂದರೆ ಆಗಲು ಬಿಡಲ್ಲ:

ಹಾಸನ ಸೇರಿ ರಾಜ್ಯದ ೯ ವಿಶ್ವವಿದ್ಯಾನಿಲಯ ಮುಚ್ಚುವ ವಿಚಾರ ಕ್ಯಾಬಿನೆಟ್ ತೀರ್ಮಾನ, ಜನರಿಗಾಗಲಿ, ವಿದ್ಯಾರ್ಥಿಗಳಿಗೆ ತೊಂದರೆ ಕೊಡಲು ಈ ತೀರ್ಮಾನ ತೆಗೆದುಕೊಂಡಿರುವುದಿಲ್ಲ. ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರ ಬಳಿ ಮಾತನಾಡಿದ್ದೇನೆ. ವಿದ್ಯಾರ್ಥಿಗಳಿಗೆ ತೊಂದರೆ ಆಗಲು ನಾನು ಬಿಡುವುದಿಲ್ಲ ಎಂದರು. ಸಚಿವರು ಉತ್ತಮ ತೀರ್ಮಾನ ಮಾಡುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಭಯ, ಗಾಬರಿ ಪಡುವುದು ಬೇಡ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ಬರುವಂತೆ ನಾವ್ಯಾರೂ ನಡೆದುಕೊಳ್ಳಲ್ಲ. ಅನಾವಶ್ಯಕವಾಗಿ ಹಣ ಪೋಲಾಗುತ್ತಿದೆ. ಹಾಸನ ವಿವಿಯಲ್ಲಿ ಉಪನ್ಯಾಸಕರು, ಸಿಬ್ಬಂದಿ ಕೊರತೆ ಇದೆ ಎಂದು ಸಮಿತಿ ವರದಿ ನೀಡಿದೆ. ಇದೆಲ್ಲವನ್ನು ಗಮನಿಸಿ ಸರ್ಕಾರ ತೀರ್ಮಾನಕ್ಕೆ ಬಂದಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಜೊತೆ ನಾನು ಮಾತನಾಡಿ ಮನವರಿಕೆ ಮಾಡುತ್ತೇನೆ ಎಂದು ಹೇಳಿದರು.