ಸಾರಾಂಶ
ಚಿವ ಸಂಪುಟ ವಿಸ್ತರಣೆ ಕುರಿತು ನನಗೆ ಏನೂ ಗೊತ್ತಿಲ್ಲ. ನಾನು ಸಹ ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ನೋಡಿದ್ದೇನೆ. ನವೆಂಬರ್‌ನಲ್ಲಿ ಕ್ರಾಂತಿಯೂ ಇಲ್ಲ ಏನೂ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಚಿಕ್ಕಮಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ನನಗೆ ಏನೂ ಗೊತ್ತಿಲ್ಲ. ನಾನು ಸಹ ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ನೋಡಿದ್ದೇನೆ. ನವೆಂಬರ್‌ನಲ್ಲಿ ಕ್ರಾಂತಿಯೂ ಇಲ್ಲ ಏನೂ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು. ಪ್ರಧಾನಿಯನ್ನು ಭೇಟಿ ಮಾಡಿ ಕಬ್ಬಿಗೆ ದರನಿಗದಿ ಹಾಗೂ ಪರಿಹಾರದ ವಿಷಯದ ಬಗ್ಗೆ ಮಾತನಾಡಿದ್ದಾರೆ ಎಂದರು.ಮುಖ್ಯಮಂತ್ರಿ ದೆಹಲಿಗೆ ಹೋದಾಗ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡುವುದು ಸಹಜ. ಹೀಗಾಗಿಯೇ ದೆಹಲಿಗೆ ಹೋದ ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲಿ ಏನೆಲ್ಲಾ ಚರ್ಚೆ ನಡೆದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.ಸಾರಿಗೆ ನೌಕರರ ವೇತನ ಪರಿಷ್ಕರಣೆ ಹೊರತುಪಡಿಸಿದರೆ ಇಲಾಖೆಯಲ್ಲಿ ಯಾವುದೇ ಸಮಸ್ಯೆಗಳು ಇಲ್ಲ. ವೇತನ ಪರಿಷ್ಕರಣೆ ಸಂಬಂಧಿಸಿದಂತೆ ಐದು ದಿನಗಳ ಹಿಂದೆಯೇ ಸಿಎಂ ಭೇಟಿ ಮಾಡಿದ್ದೆ. ಅಧಿವೇಶನಕ್ಕೂ ಮೊದಲು ಸಭೆ ಕರೆಯುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ ಎಂದು ಹೇಳಿದರು.;Resize=(128,128))
;Resize=(128,128))
;Resize=(128,128))
;Resize=(128,128))