ಚಿಕ್ಕಮಗಳೂರುಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗದ ನೋವಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಹೇಳಿದರು.
- ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ ಸಚಿವ ಯು.ಟಿ. ಖಾದರ್ ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗದ ನೋವಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಹೇಳಿದರು.
ಶನಿವಾರ ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ ಸಚಿವ ಯು.ಟಿ. ಖಾದರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಬಳಿಕ ನಡೆದ ಚಿಂತನ ಸಭೆಯಲ್ಲಿ ಮಾತನಾಡಿ ಯುವ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ದಿನಗಳಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಇದೀಗ ಜಿಲ್ಲಾ ಮಟ್ಟದ ಸಭೆ ಯಲ್ಲಿ ಕಾರ್ಯಕರ್ತರೊಂದಿಗೆ ವಿಚಾರ ವಿನಿಮಯ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು.ಪಕ್ಷದ ಬಲವರ್ಧನೆಗೆ ಬೂತ್ ಮಟ್ಟದ ಸಂಘಟನೆ ಅತ್ಯಂತ ಮುಖ್ಯ. ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಸಭೆಗಳಿಗೆ ಸೀಮಿತ ವಾಗದೆ ಪ್ರತಿ ಬೂತ್ನಲ್ಲೂ ಪಕ್ಷದ ಚಟುವಟಿಕೆ ನಿರಂತರವಾಗಿ ನಡೆಯಬೇಕು. ಕನಿಷ್ಠ 15 ದಿನಗಳಿಗೊಮ್ಮೆ ಬೂತ್ ಸಮಿತಿ ಸಭೆಯಲ್ಲಿ ಸ್ಥಳೀಯ ಸಮಸ್ಯೆ, ಪಕ್ಷದ ಕಾರ್ಯಕ್ರಮ,ಸರ್ಕಾರದ ಯೋಜನೆಗಳನ್ನು ಚರ್ಚಿಸಬೇಕೆಂದು ಸಲಹೆ ನೀಡಿದರು.ಕಾರ್ಯಕರ್ತರು ಜನರ ಸುಖ-ದುಃಖಗಳಲ್ಲಿ ಭಾಗಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿ. ನಿರಂತರ ಸಂಪರ್ಕದ ಮೂಲಕ ವಿಶ್ವಾಸ ಗಳಿಸಿ. ಪಕ್ಷದ ಇತಿಹಾಸ, ದೇಶಕ್ಕೆ ನೀಡಿದ ಕೊಡುಗೆ ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಿ ಪಕ್ಷದ ಹಿತದೃಷ್ಟಿ ಯಿಂದ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಾಯಕರು ಮತ್ತು ಜನಪ್ರತಿನಿಧಿಗಳ ವಿರುದ್ಧ ವೈಯಕ್ತಿಕ ಅಸಮಾಧಾನದಿಂದ ಸಾರ್ವಜನಿಕವಾಗಿ ಟೀಕೆ ಮಾಡಿದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ. ಭಿನ್ನಾಭಿಪ್ರಾಯಗಳನ್ನು ಚರ್ಚಿಸಿ ಪರಿಹರಿಸಬೇಕು ಎಂದು ಕಿವಿಮಾತು ಹೇಳಿದರು.ಯುವ ಕಾಂಗ್ರೆಸ್, ಎನ್ಎಸ್ಯುಐ, ಮಹಿಳಾ ಕಾಂಗ್ರೆಸ್ ಸೇರಿದಂತೆ ಎಲ್ಲ ಘಟಕಗಳಿಗೂ ಸಮಾನ ಪ್ರೋತ್ಸಾಹ ನೀಡ ಬೇಕು. ಪಕ್ಷಕ್ಕಾಗಿ ದುಡಿದ ಹಿರಿಯ ಮತ್ತು ಕಿರಿಯ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಹಾಗೂ ಅವಕಾಶ ಕಲ್ಪಿಸಬೇಕು. ನಿಗಮ-ಮಂಡಳಿಗಳ ನೇಮಕಾತಿಯಲ್ಲೂ ಪಕ್ಷದ ಸಂಘಟನೆಗೆ ಶ್ರಮಿಸಿದವರನ್ನು ಗುರುತಿಸಬೇಕು ಎಂದು ತಿಳಿಸಿದರು.ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಬೇಕು. ವಿರೋಧ ಪಕ್ಷಗಳ ಆರೋಪಗಳಿಗೆ ವಾಸ್ತವಾಂಶಗಳ ಆಧಾರದಲ್ಲಿ ಉತ್ತರಿಸಲು ಸಿದ್ಧರಾಗಿರಬೇಕು. ಕಸ್ತೂರಿ ರಂಗನ್ ವರದಿ, ಅರಣ್ಯ ಮತ್ತು ಪರಿಸರ ಪ್ರದೇಶಗಳಲ್ಲಿ ವಾಸಿಸುವ ಜನರ ಸಮಸ್ಯೆ ಹಾಗೂ ವಿದ್ಯುತ್ ಸಂಪರ್ಕ ಸಂಬಂಧ ಸರ್ಕಾರ ಕೈಗೊಂಡ ಕ್ರಮಗಳನ್ನು ಜನರಿಗೆ ವಿವರಿಸಿ. ಚಿಕ್ಕಮಗಳೂರಲ್ಲಿ ಕಾರ್ಯಕರ್ತರ ಪರಿಶ್ರಮದಿಂದ ಕಾಂಗ್ರೆಸ್ಗೆ ಮಹತ್ವದ ರಾಜಕೀಯ ಯಶಸ್ಸು ದೊರೆತಿದೆ. ಗೆಲುವು ಕಷ್ಟವೆಂದು ಭಾವಿಸಿದ್ದ ಕ್ಷೇತ್ರಗಳಲ್ಲಿಯೂ ಕಾರ್ಯಕರ್ತರು ಶ್ರಮಿಸಿ ಜಯ ಸಾಧಿಸಿರುವುದು ಶ್ಲಾಘನೀಯ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ ವಿಧಾನಸಭಾ ಅಧ್ಯಕ್ಷ ಹಾಗೂ ಸಚಿವರಾಗಿ ವಿವಿಧ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಯು.ಟಿ. ಖಾದರ್ ಜನಪರ ಆಡಳಿತದ ಮೂಲಕ ಸಾರ್ವಜನಿಕರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.ಶಾಸಕರಾದ ಎಚ್.ಡಿ. ತಮ್ಮಯ್ಯ, ಟಿ.ಡಿ. ರಾಜೇಗೌಡ, ವಿಪ ಸದಸ್ಯೆ ಗಾಯತ್ರಿ ಶಾಂತೇಗೌಡ, ಶಿವಾನಂದ ಸ್ವಾಮಿ, ಮಾಜಿ ಅಧ್ಯಕ್ಷ ಅಂಶುಮಂತ್ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.