ಸಾರಾಂಶ
ರಾಮನಗರ: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳ ಮೀಸಲು ಅರಣ್ಯ ಪ್ರದೇಶದಲ್ಲಿದೆ. ಆದ್ದರಿಂದ ಸರ್ವೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳು ಹಾಗೂ ಅರಣ್ಯಾಧಿಕಾರಿಗಳಿಗೆ ಕೇಳಿದ್ದೇವೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವೆ ವರದಿ ಬಂದ ಮೇಲೆ ಸರ್ಕಾರದ ಮಟ್ಟದಲ್ಲಿ ಸಂಬಂಧ ಪಟ್ಟ ಸಚಿವರೊಂದಿಗೆ ಚರ್ಚಿಸುತ್ತೇವೆ. ಆನಂತರ ಯಾವ ರೀತಿ ಅಭಿವೃದ್ಧಿ ಮಾಡಬೇಕು ಎಂಬುದನ್ನು ತೀರ್ಮಾನಿಸುತ್ತೇವೆ ಎಂದರು.ಬಿಜೆಪಿಯವರು ರಾಮದೇವರ ಬೆಟ್ಟದಲ್ಲಿ ಏನು ಮಾಡಿದ್ದಾರೊ ನನಗೆ ಗೊತ್ತಿಲ್ಲ. ಸದ್ಯದ ಮಾಹಿತಿ ಪ್ರಕಾರ ಅಲ್ಲಿ ಅವರು ಏನನ್ನು ಮಾಡಿಲ್ಲವೆಂದು ಗೊತ್ತಾಗಿದೆ. ಏನಾದರು ಮಾಡಿದ್ದರೆ ದಾಖಲೆ ಕೊಡಲಿ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಸುರೇಶ್ , ಪ್ರಜಾಪ್ರಭುತ್ವದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಯಾರೂ ಎಲ್ಲಿಬೇಕಾದರೂ ಸ್ಪರ್ಧೆ ಮಾಡಬಹುದು.ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿಯೂ ಸ್ಫರ್ದೆ ಮಾಡಲಿ. ಹೋರಾಟ ಶುರುವಾಗಿದೆ. ನಾನು ತಯಾರಾಗಿಲ್ಲ ವೇದಿಕೆ ಸಿದ್ಧವಾಗಿದೆ ಎಂದು ಉತ್ತರಿಸಿದರು.