ಬಿಜೆಪಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ: ರಾಜೂಗೌಡ

| Published : May 09 2024, 12:46 AM IST

ಸಾರಾಂಶ

ಹುಣಸಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರ ಜೊತೆಗೆ ಬಿಜೆಪಿ ಅಭ್ಯರ್ಥಿ ರಾಜೂಗೌಡ ಮಾತುಕಥೆ

ಕನ್ನಡಪ್ರಭ ವಾರ್ತೆ ಹುಣಸಗಿ

ಸುರಪುರ ಮತಕ್ಷೇತ್ರದ ಉಪ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ನರಸಿಂಹನಾಯಕ (ರಾಜೂಗೌಡ) ಹೇಳಿದರು.

ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೇ 7 ರಂದು ಮಂಗಳವಾರ ನಡೆದ ಸುರಪುರ ಮತಕ್ಷೇತ್ರದ ಉಪ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆ ಸುಡು ಬಿಸಿಲು ಲೆಕ್ಕಿಸದೆ ಪ್ರತಿ ಮತಗಟ್ಟೆಯಲ್ಲಿ ಶಾಂತಿಯುತವಾಗಿ ಸರದಿ ಸಾಲಿನಲ್ಲಿ ನಿಂತು ಮತಚಲಾಯಿಸಿ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಗಳಿರುಳು ಎನ್ನದೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಸುರಪುರ ವಿಧಾನಸಭೆ ಕ್ಷೇತ್ರದ ಮುಖಂಡರು, ಕಾರ್ಯಕರ್ತರಿಗೆ ಹಾಗೂ ತಾಯಂದರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂಗಣ್ಣ ಸಾಹು ವೈಲಿ, ವಿರೇಶ ಸಾಹು ಚಿಂಚೋಳಿ, ಬಸವರಾಜ ಸ್ಥಾವರಮಠ, ಗುರಲಿಂಗಪ್ಪ ಸಜ್ಜನ್, ಬಸಣ್ಣ ದೇಸಾಯಿ, ಮೇಲಪ್ಪ ಗುಳಗಿ, ಸೋಮಶೇಖರ ಸ್ಥಾವರಮಠ, ವಿರುಪಾಕ್ಷಿ ಸ್ಥಾವರಮಠ, ವಿಜಯಕುಮಾರ ಬಂಡೋಳಿ, ಶಿವರುದ್ರ ದೇಸಾಯಿ, ರವಿ ಪುರಾಣಿಕಮಠ ಸೇರಿದಂತೆ ಇತರರಿದ್ದರು.