ಸಾರಾಂಶ
ಆರ್‌ಎಸ್‌ಎಸ್ ಚಟುವಟಿಕೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ನಗರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ‘ಐ ಲವ್ ಆರ್‌ಎಸ್‌ಎಸ್’ ಪೋಸ್ಟರ್ ಅಭಿಯಾನ ನಡೆಸಿದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಆರ್‌ಎಸ್‌ಎಸ್ ಚಟುವಟಿಕೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ನಗರದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ‘ಐ ಲವ್ ಆರ್‌ಎಸ್‌ಎಸ್’ ಪೋಸ್ಟರ್ ಅಭಿಯಾನ ನಡೆಸಿದರು.ನಗರದ ಪ್ರಧಾನ ಅಂಚೆ ಕಚೇರಿ ಬಳಿ ಸೇರಿದ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪೋಸ್ಟರ್‌ಗಳನ್ನು ಅಂಗಡಿ ಮುಂಗಟ್ಟುಗಳ ಮುಂದೆ, ವಾಹನಗಳಿಗೆ ಅಂಟಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಗತ್ತಿನ ದೊಡ್ಡ ದೇಶಭಕ್ತ ಸಂಘಟನೆಯಾದ ಆರ್‌ಎಸ್‌ಎಸ್ ಸುಮಾರು 80 ಸಾವಿರ ಶಾಖೆಗಳು, ಕೋಟ್ಯಂತರ ಸ್ವಯಂ ಸೇವಕರನ್ನು ಹೊಂದಿದೆ. ಆರ್‌ಎಸ್‌ಎಸ್ ಇಲ್ಲದಿದ್ದರೆ ನೆರೆಯ ಶ್ರೀಲಂಕಾ, ಬಾಂಗ್ಲಾ ಹಾಗೂ ನೇಪಾಳ ದೇಶಗಳಲ್ಲಿ ಆದ ಗಲಭೆಗಳು ನಡೆಯುತ್ತಿದ್ದವು ಎಂದು ಕಿಡಿಕಾರಿದರು.ಭಾರತವನ್ನು ಮತ್ತೊಮ್ಮೆ ವಿಭಜನೆ ಮಾಡಲು ಬಾಹ್ಯ ಶಕ್ತಿಗಳು ‘ಘಜ್ವಾ ಏ ಹಿಂದ್’ ಹೆಸರಿನಲ್ಲಿ ಜಾಗತಿಕ ಮಟ್ಟದಲ್ಲಿ ಪಿತೂರಿ ನಡೆಯುತ್ತಿದೆ. ಬಾಂಗ್ಲಾ ದೇಶದ ಯುನಿವರ್ಸಿಟಿಗಳಲ್ಲಿ ಈ ಬಗ್ಗೆ ಹತ್ತಾರು ವರ್ಷದಿಂದ ಸಂಶೋಧನೆ ನಡೆಯುತ್ತಿದೆ. 2050ರ ವೇಳೆಗೆ ಮತ್ತೊಮ್ಮೆ ಭಾರತವನ್ನು ಧರ್ಮದ ಹೆಸರಿನಲ್ಲಿ ಭಾಗ ಮಾಡುವ ಪಿತೂರಿ ನಡೆಯುತ್ತಿದೆ. ಅದಕ್ಕೆ ಇಂದು ತಡೆಗೋಡೆಯಾಗಿ ನಿಂತಿರುವುದು ಆರ್‌ಎಸ್‌ಎಸ್ ಸಂಘಟನೆ ಎಂದರು.