I was given a ministerial position for the second term out of trust in me: Madhu Bangarappa
ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ
ಪಕ್ಷ ನನ್ನ ಮೇಲಿನ ಭರವಸೆಯಿಂದ ಎರಡನೇ ಅವಧಿಯ ಸಚಿವ ಸ್ಥಾನ ನೀಡಿದೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರವನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿ, ರಾಜ್ಯ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷ, ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ಜವಾಬ್ದಾರಿ ಹೊರಿಸಿತ್ತು. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ ಎಂದರು.
1990 ರಲ್ಲಿ ಕೇವಲ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿತ್ತು. ಇದೀಗ 1.24 ಎಕರೆ ಪ್ರದೇಶಕ್ಕೆ ಅಡಿಕೆ ಬೆಳೆ ವಿಸ್ತರಿಸಿದೆ. ಎಸ್.ಬಂಗಾರಪ್ಪ ಉಚಿತ ವಿದ್ಯುತ್ ನೀಡಿದ್ದರಿಂದ ಅಡಕೆ ಬೆಳೆಗಾರರಿಗೆ ವರದಾನವಾಗಿದೆ. 36 ವರ್ಷದಲ್ಲಿ 10 ಪಟ್ಟು ತೋಟದ ಅಭಿವೃದ್ಧಿಯಾಗಿದೆ ಎಂದು ತಿಳಿಸಿದರು.ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಗ್ರಾಪಂ ಮೀಸಲಾತಿ ಮರು ಪರಿಶೀಲಿಸುವ ಅಗತ್ಯ ಇದೆ. ಕೆಲವು ಸಮುದಾಯ ಇಲ್ಲದಿದ್ದರು ಆ ಭಾಗಕ್ಕೆ ಮೀಸಲಾತಿ ನೀಡಿದೆ. ಅದನ್ನು ಸರಿಪಡಿಸುವ ಅಗತ್ಯ ಇದೆ. ಬಾಳೇಬೈಲಿನಲ್ಲಿ ಶಾಸಕರ ಆಪ್ತ ಬಡವರ ಮನೆ ನೆಲಸಮ ಮಾಡಲು ಹೊಂಚು ಹಾಕುತ್ತಿದ್ದಾರೆ. ನಮಗೆ ತೊಂದರೆ ಕೊಡುವ ಅವಶ್ಯಕತೆ ಇಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.
ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ನೆರೆ ಪೀಡಿತ ಭಾಗದ ಜನರಿಗೆ ಸರ್ಕಾರದ ಅನುದಾನ ಕೊಡಿಸಲು ಪ್ರಯತ್ನಿಸಲಾಗುವುದು.ಕಸ್ತೂರಿ ರಂಗನ್ ವರದಿ ಜಾರಿಗೆ ನಮ್ಮ ವಿರೋಧ ಇದೆ. ಅದಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಅವೈಜ್ಞಾನಿಕ ಮೀಸಲಾತಿಯನ್ನು ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದರು.
ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಮುಡುಬ ರಾಘವೇಂದ್ರ, ಪ್ರಮುಖರಾದ ಮೈಥಿಲಿ, ಗೀತಾ, ಪೂರ್ಣೇಶ್ ಕೆಳಕೆರೆ, ಶ್ರೇಯಸ್ ರಾವ್, ರವಿ ಹೊಸ್ಕೆರೆ, ಆದರ್ಶ ಹುಂಚದಕಟ್ಟೆ ಇದ್ದರು.