ಮುಂದಿನ ಜನ್ಮದಲ್ಲೂ ದಲಿತನಾಗಿಯೇ ಹುಟ್ಟಿ ಅವರ ಪರ ಹೋರಾಡುತ್ತೇನೆ. ಶೋಷಣೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ನನ್ನ ನಿಲುವು ಹಾಗೂ ಸಂಕಲ್ಪ ಎಂದು ಅವರು ಹೇಳಿದ್ದಾರೆ.
ಬೇರೆಯವರಿಗೆ ಮುಂದಿನ ಚುನಾವಣೆ ಮುಖ್ಯ । ನನಗೆ ಮುಂದಿನ ಪೀಳಿಗೆ ಮುಖ್ಯ । ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಎಕ್ಸ್ ವಾರ್
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರಮುಂದಿನ ಜನ್ಮ ಎಂಬುದು ಇದ್ದರೆ ದಲಿತನಾಗಿ, ದಲಿತರ ಮನೆಯಲ್ಲಿಯೇ ಹುಟ್ಟುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡಿದ್ದಾರೆ.
ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಿಸುವಂತಹ ಘಟನೆಗಳನ್ನು ಸಹಿಸಲು ನನಗೆ ಸಾಧ್ಯವಿಲ್ಲ. ಬೇರೆಯವರಿಗೆ ಮುಂದಿನ ಚುನಾವಣೆ ಮುಖ್ಯವಾಗಿರಬಹುದು, ನನಗೆ ಮುಂದಿನ ಪೀಳಿಗೆ ಮುಖ್ಯ. ಬಾಬಾಸಾಹೇಬ್ ಅಂಬೇಡ್ಕರ್ ಅವರೇ ನನ್ನ ದೇವರು ಹಾಗೂ ಸರ್ವಸ್ವ. ಅವರ ಆದರ್ಶಗಳನ್ನು ಪಾಲಿಸಿಕೊಂಡು ದಲಿತರು ಹಾಗೂ ಹಿಂದುಳಿದ ಸಮುದಾಯಗಳ ಪರವಾಗಿ ಹೋರಾಟ ಮಾಡುತ್ತಿದ್ದೇನೆ. ಮುಂದಿನ ಜನ್ಮದಲ್ಲೂ ದಲಿತನಾಗಿಯೇ ಹುಟ್ಟಿ ಅವರ ಪರ ಹೋರಾಡುತ್ತೇನೆ. ಶೋಷಣೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ನನ್ನ ನಿಲುವು ಹಾಗೂ ಸಂಕಲ್ಪ ಎಂದು ಅವರು ಹೇಳಿದ್ದಾರೆ.ಕ್ಷೇತ್ರದ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ಕ್ಯೂಆರ್ ಕೋಡ್ ಮೂಲಕ ದೂರು ಸ್ವೀಕರಿಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ವಿವಿಧ ಸಮಸ್ಯೆಗಳನ್ನು ಕ್ಯೂಆರ್ ಕೋಡ್ ಮೂಲಕ ದಾಖಲಿಸಿದ್ದು, ರಸ್ತೆ, ಕಸ ವಿಲೇವಾರಿ, ಕುಡಿಯುವ ನೀರು, ನೀರಿನ ಟ್ಯಾಪ್ ದುರಸ್ತಿ, ಪಿಂಚಣಿ, ವಿಧವಾ ವೇತನ ಹಾಗೂ ಬೀದಿ ದೀಪ ಸೇರಿದಂತೆ ಹಲವು ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.
ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ. ರಸ್ತೆ ನಿರ್ಮಾಣ, ಕುಡಿಯುವ ನೀರಿನ ಸಮಸ್ಯೆ, ಚರಂಡಿ ಹಾಗೂ ವಿವಿಧ ಸಾರ್ವಜನಿಕ ಮೂಲಸೌಕರ್ಯ ಗಳ ಕುರಿತು ಬಂದ ಮನವಿಗಳನ್ನು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗಿದೆ. ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳಲು ಕಾರ್ಯಕರ್ತರ ಮೂಲಕವೂ ಮಾಹಿತಿ ಸಂಗ್ರಹಿಸಲಾಗುತ್ತಿದೆ .ಆರೋಗ್ಯ ಸೇವೆಗೆ ಆದ್ಯತೆ:
ಕ್ಷೇತ್ರದ ಜನರಿಗೆ ತುರ್ತು ಆರೋಗ್ಯ ಸೇವೆ ದೊರೆಯುವಂತೆ ಆ್ಯಂಬುಲೆನ್ಸ್ ಸೇವೆಯನ್ನು ಬಳಸಿ ಕೊಳ್ಳಲಾಗುತ್ತಿದೆ. ಆ್ಯಂಬುಲೆನ್ಸ್ ಮೂಲಕ ರೋಗಿಗಳನ್ನು ಅವರ ಮನೆಗಳಿಂದ ಆಸ್ಪತ್ರೆಗೆ ಕರೆದೊ ಯ್ಯುವ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 15 ನಿಮಿಷಗಳೊಳಗೆ ರೋಗಿಗಳ ನೆರವಿಗೆ ಧಾವಿಸುವ ರೀತಿಯಲ್ಲಿ ಸೇವೆ ಒದಗಿಸಲಾಗುತ್ತಿದೆ. ಈ ಸೇವೆಯ ನಿರ್ವಹಣೆಗೆ ಕಾಲ್ ಸೆಂಟರ್ ವ್ಯವಸ್ಥೆ ರೂಪಿಸಲಾಗಿದ್ದು, ರಾತ್ರಿ ಪಾಳಿಯಲ್ಲಿ ಇಬ್ಬರು ಹಾಗೂ ಹಗಲು ಪಾಳಿಯಲ್ಲಿ ಇಬ್ಬರು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದುವರೆಗೆ ಸುಮಾರು 15 ಸಾವಿರ ರೋಗಿಗಳು ಈ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು. ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ಬರುವ ರೋಗಿಗಳ ಯೋಗಕ್ಷೇಮ ವಿಚಾರಿಸುವ ಕೆಲಸವೂ ನಡೆಯುತ್ತಿದೆ ಎಂದರು.ಶಿಕ್ಷಣ ಕ್ಷೇತ್ರಕ್ಕೂ ಒತ್ತು:
ಕ್ಷೇತ್ರದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ನೀಟ್ ಮತ್ತು ಜೆಇಇ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜು ಗೊಳಿಸಲು ತರಬೇತಿ ನೀಡಲಾಗುತ್ತಿದ್ದು ಪ್ರತಿ ಗ್ರಾಮದಿಂದ ಇಬ್ಬರು ಅಥವಾ ಮೂವರು ವಿದ್ಯಾರ್ಥಿಗಳಿಗೆ ತರಬೇತಿ ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆಗ್ರಾಮೀಣ ಸಾರಿಗೆ ವ್ಯವಸ್ಥೆ:
ಕ್ಷೇತ್ರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಳೆದ ಮೂರು ವರ್ಷಗಳಲ್ಲಿ ಸುಮಾರು 40 ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ತೆರಳುವವರಿಗೆ ಸಾರಿಗೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.ಯುವಜನರೊಂದಿಗೆ ಸಂವಾದ:
ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಯುವಕರೊಂದಿಗೆ ಸಂವಾದ ನಡೆಸಲಾಗುತ್ತಿದೆ.ಗ್ರಾಮದಲ್ಲಿ ಎಷ್ಟು ಮಂದಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ, ವಿದ್ಯಾರ್ಥಿಗಳ ಶೈಕ್ಷಣಕ ಪರಿಸ್ಥಿತಿ ಹೇಗಿದೆ ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಬಗ್ಗೆ ಯುವಕರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದಾರೆ.ಕ್ಷೇತ್ರದ ಜನರು ಕೇಳುವ ''''''''ಏನು ಕೆಲಸ ಮಾಡಿದ್ದೀರಿ?'''''''' ಎಂಬ ಪ್ರಶ್ನೆಗೆ ದಾಖಲೆಗಳ ಮೂಲಕ ಉತ್ತರ ನೀಡಲು ಸಿದ್ಧವಿದ್ದೇನೆ. ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು, ಸಾರ್ವಜನಿಕರಿಗೆ ಮಾಹಿತಿ ನೀಡಲು ಸಿದ್ಧ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.ಸಿಕೆಬಿ-3 ಶಾಸಕ ಪ್ರದೀಪ್ ಈಶ್ವರ್