ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರುಇನ್ನು ಎರಡು ಮೂರು ತಿಂಗಳಿನಲ್ಲಿ ಹಲವಾರು ಯೋಜನೆ ತರುವ ಭರವಸೆಯನ್ನು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ನೀಡಿದ್ದಾರೆ.ಅವರು ತುಮಕೂರಿನಲ್ಲಿ ಮೆಮು ರೈಲಿಗೆ ಚಾಲನೆ ನೀಡಿ ಮಾತನಾಡಿದರು.ಅನಿರೀಕ್ಷಿತವಾಗಿ ಬಂದ ನನ್ನನ್ನು ತುಮಕೂರು ಜಿಲ್ಲೆಯ ಜನತೆ ಲಕ್ಷಾಂತರ ಮತಗಳಿಂದ ಗೆಲ್ಲಿಸಿದರು. ಹಾಗಾಗಿ ಅದರ ಋಣ ತೀರಿಸುವುದಾಗಿ ತಿಳಿಸಿದರು. ಶಿವಮೊಗ್ಗದ ಜನ ಬಿವೈ ರಾಘವೇಂದ್ರ ಅವರನ್ನು ನಾಲ್ಕು ಬಾರಿ ಗೆಲ್ಲಿಸಿದ್ದಾರೆ. ಅವರ ಕ್ಷೇತ್ರದ ಚಿತ್ರಣ ನೋಡಿದರೆ ಎಲ್ಲಾ ಸಂಸದರು ಕೇಂದ್ರದ ಜೊತೆ ಕೈಜೊಡಿಸಿದರೆ ಏನು ಬೇಕಾದರೂ ಮಾಡಬಹುದು. ಎನ್ನುವ ಮೂಲಕ ರಾಘವೇಂದ್ರ ಅವರನ್ನು ಹೊಗಳಿದರು. ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಒಪ್ಪಿಗೆ ಪಡೆಯುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ ಅವರು ಸಿದ್ದರಾಮಯ್ಯನವರು ಅವರ ಕಾಲ ಮೇಲೆ ಅವರೇ ಕಲ್ಲು ಹಾಕಿಕೊಳ್ಳುತ್ತಿದ್ದಾರೆ ಎಂದರು. ರಾಜ್ಯ ಸರ್ಕಾರದ ಅಧಿಕಾರವನ್ನು ಅವರೇ ಬೇಡ ಅಂದಾಗ ನ್ಯಾಯಾಂಗವಿದೆ. ಅದರ ಮೇಲುಗಡೆ ಇನ್ನೊಂದು ಇದೆ. ಇದು ಹೀಗೆ ಆಗಬಾರದಿತ್ತು. ಅದ್ಯಾಕೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ ಎಂದರು. ಒಂದು ತಪ್ಪು ಮುಚ್ಚಲು ಹೋಗಿ ನೂರಾರು ತಪ್ಪು ಮಾಡುತ್ತಿದ್ದಾರೆ. ಇದು ಒಳ್ಳೆಯದಲ್ಲ. ಸಿದ್ದರಾಮಯ್ಯನಂತಹ ನುರಿತ ರಾಜಕಾರಣಿ ಕೂಡ ಹಠಕ್ಕೆ ಬೀಳುತ್ತಾರೆ ಅಂದರೆ ಸ್ವಲ್ಪ ಕಷ್ಟವಾಗುತ್ತದೆ. ಅವರು ಅರ್ಥ ಮಾಡಿಕೊಂಡರೆ ಒಳ್ಳೆಯದು ಅನ್ನುವುದು ನನ್ನ ಭಾವನೆ ಎಂದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))