ಸಾರಾಂಶ
ಜಾತಿ ಆಧಾರಿತ ಜನಗಣತಿ ಕುರಿತಂತೆ ನನ್ನ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ವ್ಯಕ್ತಪಡಿಸುತ್ತೇನೆ. ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಸರ್ಕಾರದಿಂದ ನೋಡಿಕೊಳ್ಳಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಸಿಟಿಗೆ ಕಡ್ಡಾಯ...
ಕನ್ನಡಪ್ರಭ ವಾರ್ತೆ ಬೆಂಗಳೂರುಜಾತಿ ಆಧಾರಿತ ಜನಗಣತಿ ಕುರಿತಂತೆ ನನ್ನ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ವ್ಯಕ್ತಪಡಿಸುತ್ತೇನೆ. ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಸರ್ಕಾರದಿಂದ ನೋಡಿಕೊಳ್ಳಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಆಧಾರಿತ ಜನಗಣತಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆ ಕುರಿತು ಸಚಿವ ಸಂಪುಟ ಸಭೆಯಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಯಾವುದೇ ಸಮುದಾಯಕ್ಕೂ ಅನ್ಯಾಯವಾಗದಂತೆ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಹೇಳಿದರು.ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದ ಸಚಿವ
ಸುದ್ದಿಗೋಷ್ಠಿಗೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಅವರಿಂದ ಅಹವಾಲು ಸ್ವೀಕರಿಸಿದರು. ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯಕರ್ತರು ನೀಡಿದ ಅಹವಾಲು ಹಾಗೂ ಪಕ್ಷಕ್ಕೆ ಸಂಬಂಧಿಸಿಂತೆ ಮನವಿಗಳನ್ನು ಸ್ವೀಕರಿಸಿ ಅವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಇ. ಸುಧೀಂದ್ರ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))