ಸಾರಾಂಶ
ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಜಿ.ಹೆಚ್.ಶ್ರೀನಿವಾಸ್ ಹುಟ್ಟುಹಬ್ಬ ಆಚರಣೆ
ಕನ್ನಡಪ್ರಭ ವಾರ್ತೆ, ತರೀಕೆರೆಜನತೆ ಮತ್ತು ಕಾರ್ಯಕರ್ತರ ನಂಬಿಕೆಯನ್ನು ಪ್ರಾಮಾಣಿಕವಾಗಿ ಉಳಿಸಿಕೊಳ್ಳುತ್ತೇನೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಬುಧವಾರ ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ಸಮೀಪದ ರಂಗೇನಹಳ್ಳಿ ಶ್ರೀ ಆಂಬಾಭವಾನಿ ಸಮುದಾಯ ಭವನದಲ್ಲಿ ನಡೆದ ಶಾಸಕ ಜಿ.ಎಚ್. ಶ್ರೀನಿವಾಸ್ ಹುಟ್ಟಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತರೀಕೆರೆ ವಿಧಾನಸಭಾ ಕ್ಷೇತ್ರದಾದ್ಯಂತ ಎಲ್ಲ ಕಡೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸ್ವಯಂಪ್ರೇರಿತರಾಗಿ ಅತ್ಯಂತ ಉತ್ಸಾಹದಿಂದ ನನ್ನ ಹುಟ್ಟಹಬ್ಬ ಅಚರಿಸುತ್ತಿರುವುದು ನನಗೆ ಸಂತೋಷ ತಂದಿದೆ. ಇದರಿಂದ ನನ್ನ ಜವಾಬ್ದಾರಿ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಇನ್ನೂ ಹೆಚ್ಚು, ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುವುದಾಗಿ ತಿಳಿಸಿದರು.ಕೆ.ಪಿ.ಸಿ.ಸಿ.ಸದಸ್ಯ ಎಚ್.ವಿಶ್ವನಾಥ್ ಮಾತನಾಡಿ ಶಾಸಕ ಜಿ.ಎಚ್.ಶ್ರೀನಿವಾಸ್ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕುರಿತು ಹೆಚ್ಚು ಕಾಳಜಿ ವಹಿಸಿ ಅನೇಕ ಅಬಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಕಾರ್ಯಕರ್ತರಿಂದ ಆಚರಿಸುತ್ತಿರುವ ಹುಟ್ಟುಹಬ್ಬ ಹೆಚ್ಚು ಅರ್ಥಪೂರ್ಣವಾಗಿದೆ ಎಂದ ಅವರು ಶಾಸಕ ಜಿ.ಎಚ್. ಶ್ರೀನಿವಾಸ್ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಸಿದರು.
ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್ ಮಾತನಾಡಿ ಶಾಸಕರದು ಅತ್ಯಂತ ಸರಳ ವ್ಯಕ್ತಿತ್ವ, ಎಲ್ಲರನ್ನು ವಿಶ್ವಾಸದಿಂದ ಜೊತೆಗೆ ಕರೆದುಕೊಂಡು ಹೋಗುತ್ತಾರೆ. ತರೀಕೆರೆ ಕ್ಷೇತ್ರದಾದ್ಯಂತ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದರು.ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.
ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಫಾರೂಕ್, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಜಿಲ್ಲಾ ಕೆಡಿಪಿ ಸದಸ್ಯ ಎ.ಜೆ.ಸಿರಾಜ್, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ರವಿಕಿಶೋರ್, ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ನಂದ ಕುಮಾರ್, ಸೆನೆಟ್ ಸದಸ್ಯ ಅರವಿಂದ್ ಮತ್ತಿತರರು ಮಾತನಾಡಿದರು.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ತರೀಕೆರೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹನೀಫ್, ಎಂ.ರಂಗಪ್ಪ, ಸೇವಾದಳ ತಾಲೂಕು ಅಧ್ಯಕ್ಷ ಜಗದೀಶ್, ಪವನ್ ಕಿಶೋರ್, ಶಾಂತಿಪುರ ರವಿ, ಗ್ರಾಪಂ ಸದಸ್ಯ ಶಿವಕುಮಾರ್, ಬಾವಿಕೆರೆ ವೆಂಕಟೇಶ್, ಸೀತಾರಾಮ್, ರಾಜೇಶ್ ಶೆಟ್ಟಿ, ಮುಡುಗೋಡು ಗ್ರಾಪಂ ಅಧ್ಯಕ್ಷೆ ರೂಪಾದೇವಿ ಪಾರ್ವತಮ್ಮ, ಸುನೀತಾ, ಪ್ರೇಮಾ, ಆಶಾ ಮತ್ತಿತರರು ಭಾಗವಹಿಸಿದ್ದರು.
30ಕೆಟಿಆರ್.ಕೆ.1ತರೀಕೆರೆ ಸಮೀಪದ ಲಕ್ಕವಳ್ಳಿಯಲ್ಲಿ ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ಶಾಸಕ ಜಿ.ಎಚ್.ಶ್ರೀನಿವಾಸ್ ಹುಟ್ಟಹಬ್ಬ ಕಾರ್ಯಕ್ರಮ
ದಲ್ಲಿ ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್, ಕೆ.ಪಿ.ಸಿ.ಸಿ.ಸದಸ್ಯ ಎಚ್.ವಿಶ್ವನಾಥ್ ಮತ್ತಿತರರು ಇದ್ದರು.