ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮದ್ದೂರು ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.ಸಮೀಪದ ಕೆ.ಶೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಗ್ರಾಮಗಳಲ್ಲಿನ ಮೂಲ ಸೌಕರ್ಯಗಳನ್ನು ಗುರುತಿಸಿ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಮದ ಮುಖಂಡರ ಸಮ್ಮುಖದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.
ಗ್ರಾಮಗಳ ಪರಿಮಿತಿ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನೀಲಿ ನಕ್ಷೆ ತಯಾರಿಸಿ ಅದರಂತೆ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು. ಪ್ರತಿ ಗ್ರಾಮಗಳು ಸಹ ಮಾದರಿಯಾಗಿಸಲು ನನ್ನ ಉದ್ದೇಶವಾಗಿದೆ ಎಂದರು.ಯಾವುದೇ ಅಭಿವೃದ್ಧಿ ಕಾಮಗಾರಿಗಳಲ್ಲೂ ಸಹ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ಕಾಮಗಾರಿಗಳನ್ನು ಅವರಿಗೆ ಯಾವುದೇ ಕಾರಣಕ್ಕೂ ನೀಡುವುದಿಲ್ಲ. ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.
ಈ ವೇಳೆ ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಜಿಪಂ ಮಾಜಿ ಸದಸ್ಯ ಎ.ಎಸ್. ರಾಜೀವ್, ನಿವೃತ್ತ ಉಪ ತಹಸೀಲ್ದಾರ್ ಸಿದ್ದೇಗೌಡ, ಡೈರಿ ಅಧ್ಯಕ್ಷ ಸುನೀಲ್, ಸೊಸೈಟಿ ನಿರ್ದೇಶಕ ನಂಜುಂಡೇಗೌಡ, ಸಿದ್ದರಾಮೇಗೌಡ, ಮುಖಂಡರಾದ ರುದ್ರಯ್ಯ, ಸಿದ್ದೇಗೌಡ, ಚಿಕ್ಕಮರೀಗೌಡ, ರಘುಬೋರೇಗೌಡ, ಗಿರೀಶ್, ಮಂಜು, ಕರಡಕೆರೆ ಮನು, ಬಸವರಾಜು ಸೇರಿದಂತೆ ಮತ್ತಿತರಿದ್ದರು.ಬಜೆಟ್‌ನಲ್ಲಿ ಎಲ್ಲಾ ಜನರ ಗಮನದಲ್ಲಿಟ್ಟುಕೊಂಡು ಅನುದಾನ ಘೋಷಣೆ
ಮದ್ದೂರು:ಪ್ರಸಕ್ತ ಸಾಲಿನ ಆಯವ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ವಿಶೇಷ ಅನುದಾನ ಘೋಷಣೆ ಮಾಡಿಲ್ಲ. ರಾಜ್ಯದ ಎಲ್ಲಾ ಜನರ ಗಮನದಲ್ಲಿಟ್ಟುಕೊಂಡು ಅನುದಾನ ಘೋಷಣೆ ಮಾಡಿದ್ದಾರೆ ಎಂದು ಶಾಸಕ ಉದಯ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಕೇವಲ 4.5 ಕೋಟಿ ರು. ಅನುದಾನ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಒತ್ತು ನೀಡಿಲ್ಲ ಎಂದು ರೈತ ನಾಯಕಿ ಸುನಂದ ಜಯರಾಮ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕರು, ಬಜೆಟ್‌ನಲ್ಲಿ ಕೃಷಿ ವಿವಿಗೆ 25 ಕೋಟಿ ಅನುದಾನ ನೀಡಲಾಗಿದೆ. ಕಳೆದ ಬಾರಿ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿತ್ತು ಎಂದು ಸಮರ್ಥಿಸಿಕೊಂಡರು.
;Resize=(128,128))
;Resize=(128,128))
;Resize=(128,128))
;Resize=(128,128))