ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಹಲವರು ಟಕೆಟ್‌ ಆಕಾಂಕ್ಷಿಗಳಿದ್ದರು. ಆದರೆ, ಶಾಸಕರು, ಕಾರ್ಯಕರ್ತರ ಅಭಿಪ್ರಾಯ ಪಡೆದು ನಾಯಕರು ನನಗೆ ಅವಕಾಶ ನೀಡಿದ್ದಾರೆ. ಉಳಿದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ ಎಂದು ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಮೋಹನ ಲಿಂಬಿಕಾಯಿ ಹೇಳಿದರು.

ಹಾವೇರಿ: ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಹಲವರು ಟಕೆಟ್‌ ಆಕಾಂಕ್ಷಿಗಳಿದ್ದರು. ಆದರೆ, ಶಾಸಕರು, ಕಾರ್ಯಕರ್ತರ ಅಭಿಪ್ರಾಯ ಪಡೆದು ನಾಯಕರು ನನಗೆ ಅವಕಾಶ ನೀಡಿದ್ದಾರೆ. ಉಳಿದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ ಎಂದು ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಮೋಹನ ಲಿಂಬಿಕಾಯಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಆಕಾಂಕ್ಷಿಗಳಲ್ಲಿ ಅಸಮಾಧಾನ ಹಾಗೂ ಅಭ್ಯರ್ಥಿ ಬದಲಾವಣೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ವರಿಷ್ಠರು ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ, ಸಮೀಕ್ಷೆ ನಡೆಸಿ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಆಕಾಂಕ್ಷಿಗಳಾಗಿದ್ದ ರಾಘವೇಂದ್ರ ಬಾಸೂರ, ಆರ್.ಎಂ. ಕುಬೇರಪ್ಪ, ಬಸವರಾಜ ಗುರಿಕಾರ ಜತೆಗೆ ರಾಜ್ಯ ಹೈಕಮಾಂಡ ನಾಯಕರು ಮಾತನಾಡಿ ಮನವೊಲಿಸುತ್ತಾರೆ. ಬರುವ ದಿನಗಳಲ್ಲಿ ಎಲ್ಲರೂ ಒಟ್ಟಿಗೆ ಸೇರಿಕೊಂಡು ಚುನಾವಣೆ ಎದುರಿಸುತ್ತೇವೆ. ಆಕಾಂಕ್ಷಿಗಳ ಸೇವೆ, ತ್ಯಾಗ ಗಮನಿಸಿ ಪಕ್ಷ ಸೂಕ್ತ ಸ್ಥಾನಮಾನ ನೀಡುತ್ತದೆ ಎಂದು ತಿಳಿಸಿದರು.

ಮತದಾರರ ನೋಂದಣಿ: ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಈವರೆಗೆ ೮೮,೦೮೭ ಪದವೀಧರ ಮತದಾರರು ನೋಂದಣಿ ಮಾಡಿಸಿಕೊಂಡಿದ್ದಾರೆ. ನೋಂದಣಿಗೆ ಇನ್ನೂ ಕಾಲಾವಕಾಶವಿದ್ದು, ಅರ್ಹ ಪದವೀಧರರು ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲಾತಿಗಳನ್ನು ದ್ವಿಪ್ರತಿಯಲ್ಲಿ ಹಾಗೂ ಗೆಜೆಟೆಡ್ ಅಧಿಕಾರಿಗಳ ಸಹಿಯೊಂದಿಗೆ ಸಲ್ಲಿಸಿ ನೋಂದಾವಣೆ ಮಾಡಬೇಕೆಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮಹದೇವಪ್ಪ ಗಾಜೀಗೌಡ್ರ, ಶ್ರೀಧರ ರೆಡ್ಡಿ, ಶಂಕರ ಮೆಹರವಾಡೆ, ವಿನಯ ಪಾಟೀಲ, ನಾಗರಾಜ ಪ್ಯಾಟಿ ಇದ್ದರು.