ಸಾರಾಂಶ
ದೇಶದ ಬೆನ್ನೆಲುಬಾದ ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಅವರ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿರುವುದಾಗಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಗೋಕಾಕ
ದೇಶದ ಬೆನ್ನೆಲುಬಾದ ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಅವರ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿರುವುದಾಗಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.ಗೋಕಾಕ ಹೊರವಲಯದ ಬಸವೇಶ್ವರ ಸಭಾಂಗಣದಲ್ಲಿ ಗೋಕಾಕ ಮತಕ್ಷೇತ್ರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರ ಮತ್ತು ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನನ್ನ 27 ವರ್ಷಗಳ ಅಧಿಕಾರ ಅವಧಿಯಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ನೀರಾವರಿ ಸೌಲಭ್ಯ ಕಲ್ಪಿಸಲು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇನೆ. ಈ ಹಿಂದೆ ಡಿ.ಸಿ.ಸಿ ಬ್ಯಾಂಕನಿಂದ ರೈತರಿಗೆ ಸಿಗಬೇಕಾದ ಸೌಲಭ್ಯ ನಿರೀಕ್ಷಿತ ಮಟ್ಟದಲ್ಲಿ ದೊರೆತ್ತಿಲ್ಲ. ಬರುವ ದಿನಗಳಲ್ಲಿ ಡಿ.ಸಿ.ಸಿ ಬ್ಯಾಂಕಿನಿಂದ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಕಲ್ಪಿಸಲಾಗುವುದು. ರೈತರು ಕೃಷಿಯಲ್ಲಿ ಆಧುನಿಕ ಪದ್ಧತಿ ಹಾಗೂ ಯಂತ್ರಗಳ ಅಳವಡಿಕೆಯಿಂದ ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಿರಿ. ಕ್ಷೇತ್ರದ ಪ್ರತಿ ಸೊಸೈಟಿಗೆ ಕಬ್ಬು ಕಟಾವು ಯಂತ್ರಗಳನ್ನು ಪೂರೈಸಿ ಇತಿಹಾಸ ನಿರ್ಮಿಸಲು ನೀವೆಲ್ಲರೂ ಸಹಕಾರ ನೀಡುವಂತೆ ಕೋರಿದರು.ಈ ಸಂದರ್ಭದಲ್ಲಿ ಮಾಜಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಯುವ ಧುರೀಣ ಅಮರನಾಥ ಜಾರಕಿಹೊಳಿ, ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ಸುರೇಶ್ ಕಾಡದವರ, ಸಿದ್ದಗೌಡ ಪಾಟೀಲ, ಭೀಮಗೌಡ ಪೊಲೀಸ್ ಗೌಡರ, ಅಡಿವೆಪ್ಪ ನಾವಲಗಟ್ಟಿ, ಬಸಪ್ಪ ಅಮಿಣಿ, ಕಲಪ್ಪ ಚೌಗಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.