ಅಂಗವಿಕಲರ ಶ್ರೇಯಸ್ಸಿಗಾಗಿ ಶ್ರಮಿಸುವೆ: ವೈ.ಎಂ. ಸತೀಶ್

| Published : Feb 15 2025, 12:31 AM IST

ಅಂಗವಿಕಲರ ಶ್ರೇಯಸ್ಸಿಗಾಗಿ ಶ್ರಮಿಸುವೆ: ವೈ.ಎಂ. ಸತೀಶ್
Share this Article
  • FB
  • TW
  • Linkdin
  • Email

ಸಾರಾಂಶ

ಅಂಗವಿಕಲರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಮರ್ಪಕ ಅನುಷ್ಠಾನಕ್ಕಾಗಿ ಶ್ರಮಿಸಲಾಗುವುದು.

ಬಳ್ಳಾರಿ: ಅಂಗವಿಕಲರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಮರ್ಪಕ ಅನುಷ್ಠಾನಕ್ಕಾಗಿ ಶ್ರಮಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ತಿಳಿಸಿದರು.

ಅಂಗವಿಕಲರ ಸಮಸ್ಯೆಗಳ ಕುರಿತು ವಿಧಾನಪರಿಷತ್‌ನಲ್ಲಿ ಧ್ವನಿ ಎತ್ತಿದ ವೈ.ಎಂ. ಸತೀಶ್ ಅವರನ್ನು ಕರ್ನಾಟಕ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ವೇಳೆ ಮಾತನಾಡಿದ ಶಾಸಕ ವೈ.ಎಂ.ಸತೀಶ್, ಅಂಗವಿಕರಿಗೆ ಸಾಕಷ್ಟು ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ. ಸರ್ಕಾರ ಗುರುತಿಸಿರುವ 21 ರೀತಿಯ ಅಂಗವಿಕಲರಿಗೆ ಸರ್ಕಾರ ಸಕಾಲದಲ್ಲಿ ಸೌಲಭ್ಯಗಳನ್ನು ನೀಡಬೇಕಿದೆ. ಕರ್ನಾಟಕ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಅಂಗವಿಕಲರ ಅನುದಾನದ ಬಳಕೆ, ಮೀಸಲಾದ ಹುದ್ದೆಗಳ ಭರ್ತಿ ಮತ್ತು ಸ್ವ-ಉದ್ಯೋಗ ಇನ್ನಿತರೆ ಸೌಕರ್ಯಗಳನ್ನು ಕಲ್ಪಿಸುವ ನೆಲೆಯಲ್ಲಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಆಯುಕ್ತ ದಾಸ್ ಸೂರ್ಯವಂಶಿ ಮಾತನಾಡಿ, ಅಂಗವಿಕಲರ ಕುರಿತು ವಿಧಾನಪರಿಷತ್ತಿನಲ್ಲಿ ವಿಷಯ ಪ್ರಸ್ತಾಪ ಮಾಡಿ, ವಿಕಲಚೇತನರ ಸೌಲಭ್ಯಗಳು ಮತ್ತು ಅನುದಾನದ ಬಳಕೆ ಕುರಿತು ಧ್ವನಿಯಾಗಿದ್ದೀರಿ. ಇದರಿಂದ ಅಂಗವಿಕರಿಗೆ ಸರ್ಕಾರ ಸೌಲಭ್ಯಗಳ ದಕ್ಕುವ ವಿಶ್ವಾಸ ಮೂಡಿದೆ ಎಂದರಲ್ಲದೆ, ಕರ್ನಾಟಕ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ''''''''ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ-೨೦೧೬'''''''' ಅನ್ನು ರಾಜ್ಯಾದ್ಯಂತ ಕಡ್ಡಾಯವಾಗಿ ಅನುಷ್ಠಾನ ಮಾಡಿ, ಅಂಗವಿಕಲರಿಗೆ ನೆರವಾಗುವಂತೆ ಕೋರಿದರು. ಅಂಗವಿಕರ ಕಲ್ಯಾಣ ಅಧಿಕಾರಿ ಗೋವಿಂದಪ್ಪ ಮತ್ತಿತರರಿದ್ದರು.14ಬಿಆರ್‌ವೈ2

ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ವಿಪ ಸದಸ್ಯ ವೈ.ಎಂ. ಸತೀಶ್ ಅವರನ್ನು ಭೇಟಿ ಮಾಡಿ, ಅಂಗವಿಕಲರ ಪರ ಪರಿಷತ್ತಿನಲ್ಲಿ ಧ್ವನಿ ಎತ್ತಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.