ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ ಕೆ.ಎಂ.ಉದಯ್

| Published : Feb 21 2025, 11:45 PM IST

ಸಾರಾಂಶ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಆಶಯದಂತೆ ತಾಲೂಕಿನ ಸವಾಂಗೀಣ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸಲಾಗಿದೆ. ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಅನುದಾನ ತಂದು ಸಮುದಾಯಕ್ಕೆ ಸದ್ಬಳಕೆ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕ್ಷೇತ್ರದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಮದ್ದೂರು ತಾಲೂಕಿನ ಅಭಿವೃದ್ಧಿ ಶ್ರಮಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಮೀಪದ ಮೆಣಸಗೆರೆ ಗ್ರಾಪಂ ವ್ಯಾಪ್ತಿಯ ಮಡೇನಹಳ್ಳಿ ಗ್ರಾಮದ ಪರಿಶಿಷ್ಟ ಕಾಲೋನಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸುಮಾರು 30 ಲಕ್ಷ ರು. ವೆಚ್ಚದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಆಶಯದಂತೆ ತಾಲೂಕಿನ ಸವಾಂಗೀಣ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸಲಾಗಿದೆ. ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಅನುದಾನ ತಂದು ಸಮುದಾಯಕ್ಕೆ ಸದ್ಬಳಕೆ ಮಾಡುವುದಾಗಿ ಭರವಸೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಮುಂದಿನ ಬಜೆಟ್‌ನಲ್ಲಿ ವಿಶೇಷವಾಗಿ ಪರಿಶಿಷ್ಟ ಜಾತಿ/ಪಂಗಡಗಳ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಗಳಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಲೋಕೋಪಯೋಗಿ ಇಲಾಖೆ ಎಇಇ ದೇವಾನಂದ್ , ಮುಖಂಡರಾದ ಹರೀಶ್ ಪಾಪಣ್ಣ, ಸಿದ್ದಲಿಂಗಸ್ವಾಮಿ, ಒಡೆಯರ್, ಸಂತೋಷ್ , ಶ್ರೀಕಂಠೇಗೌಡ, ಆನಂದ್, ಸ್ವಾಮಿ, ಪುಟ್ಟಸ್ವಾಮಿ, ಚಿಕ್ಕಹೈದಯ್ಯ, ಸಿದ್ದಯ್ಯ, ಮಹೇಶ್ ಸುರೇಶ್, ವೀರೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.