ಸಾರಾಂಶ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಹಾಗೂ ಐಎಎಸ್ ಅಧಿಕಾರಿಯಾಗಿರುವ ಪತ್ನಿ ಪ್ರಿಯಾಂಗಾ ಜತೆಗೆ ಆಗಮಿಸಿ ಪುತ್ರಿಗೆ ಲಸಿಕೆ ಹಾಕಿಸಿದರು.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಐಎಎಸ್ ಅಧಿಕಾರಿಗಳಾಗಿರುವ ಎಸ್. ಭರತ್ ಹಾಗೂ ಪ್ರಿಯಾಂಗಾ ದಂಪತಿ ಇಲ್ಲಿನ ಗೋಕುಲ ರಸ್ತೆಯಲ್ಲಿನ ಬಸ್ ನಿಲ್ದಾಣದಲ್ಲಿ ತಮ್ಮ ಪುತ್ರಿಗೆ ಪೊಲಿಯೋ ಲಸಿಕೆ ಹಾಕಿಸಿದರು.ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಹಾಗೂ ಐಎಎಸ್ ಅಧಿಕಾರಿಯಾಗಿರುವ ಪತ್ನಿ ಪ್ರಿಯಾಂಗಾ ಜತೆಗೆ ಆಗಮಿಸಿ ಪುತ್ರಿಗೆ ಲಸಿಕೆ ಹಾಕಿಸಿದರು. ಈ ಮೂಲಕ ಸಂಸ್ಥೆಯ 21 ಸಾವಿರಕ್ಕೂ ಹೆಚ್ಚಿನ ಸಾರಿಗೆ ನೌಕರರು, ಅವರ ಕುಟುಂಬದವರು ಹಾಗೂ ಸಾರ್ವಜನಿಕರಿಗೆ ಪೊಲಿಯೋ ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ಇತರರಿಗೆ ಲಸಿಕೆ ಹಾಕಿಸಲು ಪ್ರೇರಣೆ ನೀಡಿದರು.
ಆರೋಗ್ಯ ಇಲಾಖೆ, ಜಿಲ್ಲಾಡಳಿತ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ಎಲ್ಲ ಬಸ್ ನಿಲ್ದಾಣಗಳಲ್ಲಿ ಪಲ್ಸ್ ಪೊಲಿಯೋ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೆಗ್ಗೇರಿಯ ನಗರ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಗೀತಾ ಬಡಿಗೇರ ಹಾಗೂ ನಾಜಮೀನ, ಆಶಾ ಕಾರ್ಯಕರ್ತೆ ರತ್ನಾ, ನರ್ಸಿಂಗ್ ವಿದ್ಯಾರ್ಥಿಗಳಾದ ಕೀರ್ತಿ ಹಾಗೂ ಗಂಗಾಧರ ಮತ್ತಿತರರು ಇದ್ದರು.ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆಕನ್ನಡಪ್ರಭ ವಾರ್ತೆ ಹುಬ್ಬಳ್ಳಿಇಲ್ಲಿನ ಚಿಟಗುಪ್ಪಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ 5 ವರ್ಷದೊಳಗಿನ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಲಾಯಿತು.ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಪ್ರಸಾದ ಅಬ್ಬಯ್ಯ, ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್ ವೀಣಾ ಬರದ್ವಾಡ, ಪಾಲಿಕೆಯ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಚಿಟಗುಪ್ಪಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ಡಿ. ದಂಡಪ್ಪನವರ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 0-5 ವರ್ಷದೊಳಗಿನ 1.25 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದ್ದು, ಸುಮಾರು 1700 ಅರೋಗ್ಯ ಕಾರ್ಯಕರ್ತರು ಈ ಗುರಿ ತಲುಪುವುದಕ್ಕೆ ಶ್ರಮಿಸಲಿದ್ದಾರೆ. ಈ ಕಾರ್ಯಕ್ರಮ ಮಾ. 3ರಿಂದ 6ರ ವರೆಗೆ 4ದಿನಗಳ ಕಾಲ ನಡೆಯಲಿದೆ. ಪಲ್ಸ್ ಫೋಲಿಯೋ ಕಾರ್ಯಕ್ರಮಕ್ಕೆ ರೋಟರಿ ಕ್ಲಬ್, ಲಾಯನ್ಸ್ ಕ್ಲಬ್, ಅಗರವಾಲ್ ಕಣ್ಣಿನ ಆಸ್ಪತ್ರೆ, ವಿವಿಧ ನರ್ಸಿಂಗ್ ಕಾಲೇಜುಗಳು ಸಾಥ್ ನೀಡಿವೆ.ಧಾರವಾಡದಲ್ಲಿನ ಪಾಲಿಕೆಯ ಹೆರಿಗೆ ಆಸ್ಪತ್ರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ, ಆರೋಗ್ಯಾಧಿಕಾರಿ ಡಾ. ಅಶ್ವಿನಿ ಅನಂತಯ್ಯಾ, ಆರ್.ಸಿ.ಎಚ್. ಅಧಿಕಾರಿ ಡಾ.ಸುಜಾತಾ ಹಸವಿಮಠ, ನೋಡಲ್ ಅಧಿಕಾರಿ ಡಾ.ಅನೀಲಕುಮಾರ ಚಾಲನೆ ನೀಡಿದರು.