ಸಾರಾಂಶ
ಜೇಸಿ ಭವನದಲ್ಲಿ ರಕ್ತದಾನ ಶಿಬಿರದ ಬ್ಯಾನರ್, ಕರಪತ್ರ ಬಿಡುಗಡೆ
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರುಪಟ್ಟಣದ ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಯಿಂದ ಮೇ.28ರಂದು ಜೇಸಿ ಭವನದಲ್ಲಿ ಬಹೃತ್ ರಕ್ತದಾನ ಶಿಬಿರ ಆಯೋಜಿಸಿದ್ದು, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರ ಯಶಸ್ವಿಗೊಳಿಸಬೇಕು ಎಂದು ಜೇಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ ಕೋರಿದ್ದಾರೆ.ಪಟ್ಟಣದ ಜೇಸಿ ಭವನದಲ್ಲಿ ರಕ್ತದಾನ ಶಿಬಿರದ ಬ್ಯಾನರ್, ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಕ್ತದಾನ ಮಹಾದಾನ ಹಾಗೂ ಅತ್ಯಂತ ಶ್ರೇಷ್ಠ ದಾನವಾಗಿದೆ. ಇತ್ತೀಚಿನ ದಿನಗಳಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು, ಹೆಚ್ಚಿನ ಬೇಡಿಕೆ ಬರುತ್ತಿದೆ ಎಂದರು.ಅತ್ಯಂತ ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಕೊರತೆ ಕಂಡುಬರುತ್ತಿದ್ದು, ಇದನ್ನು ನೀಗಿಸಲು ರಕ್ತದಾನ ಶಿಬಿರಗಳ ಅವಶ್ಯ ಕತೆಯಿದೆ. ಈ ಹಿನ್ನೆಲೆಯಲ್ಲಿ ಜೇಸಿ ಸಂಸ್ಥೆಯಿಂದ ಈ ಬಾರಿ ಶೃಂಗೇರಿ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಮೇ.28ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.ಶಿಬಿರದಲ್ಲಿ 150ಕ್ಕೂ ಹೆಚ್ಚಿನ ರಕ್ತದಾನಿಗಳಿಂದ ರಕ್ತ ಸಂಗ್ರಹಿಸುವ ನಿರೀಕ್ಷೆಯಿದ್ದು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಇದಕ್ಕೆ ಸಹಕಾರ ನೀಡಲಿದ್ದಾರೆ. ಆಸಕ್ತರು ಆ ದಿನ ರಕ್ತದಾನ ಮಾಡುವ ಮೂಲಕ ವಿಶೇಷ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಸೋಮೇಶ್‌ಗೌಡ, ಶ್ರೀಧರ್, ವೇದರಾಜ್ ಭಂಡಾರಿ, ಜೇಸಿಐ ನಿಕಟಪೂರ್ವ ಅಧ್ಯಕ್ಷ ಎನ್.ಶಶಿಧರ್, ಕಾರ್ಯದರ್ಶಿ ವಿ.ಅಶೋಕ್, ಕಾರ್ಯಕ್ರಮ ನಿರ್ದೇಶಕ ಸಿ.ವಿ.ಸುನೀಲ್, ಜ್ಯೂನಿಯರ್ ಜೇಸಿ ಅಧ್ಯಕ್ಷ ನಿಶ್ಚಿತ್ ಹಿಲರಿ ಮಿಸ್ಕಿತ್ ಮತ್ತಿತರರು ಹಾಜರಿದ್ದರು.೨೫ಬಿಹೆಚ್‌ಆರ್ ೨:
ಬಾಳೆಹೊನ್ನೂರಿನ ಜೇಸಿಐ ಸಂಸ್ಥೆಯಿಂದ ನಡೆಯಲಿರುವ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಬ್ಯಾನರನ್ನು ಜೇಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ ಬಿಡುಗಡೆಗೊಳಿಸಿದರು. ಸೋಮೇಶ್‌ಗೌಡ, ವೇದರಾಜ್ ಭಂಡಾರಿ, ಶ್ರೀಧರ್, ಶಶಿಧರ್, ಅಶೋಕ್ ಇದ್ದರು.