ಆರೋಗ್ಯ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪ: ರಂಭಾಪುರಿ ಶ್ರೀ

| Published : Aug 03 2024, 12:31 AM IST

ಆರೋಗ್ಯ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪ: ರಂಭಾಪುರಿ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಮನುಷ್ಯ ಜೀವನದಲ್ಲಿ ಬದಲಾವಣೆ ಹಾಗೂ ಬೆಳವಣಿಗೆ ಎರಡೂ ಅವಶ್ಯಕ. ಶ್ರಮದ ಬೆವರಿನ ಫಲ ಶಾಶ್ವತ ಮತ್ತು ಸುಖದಾಯಕ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ದಾವಣಗೆರೆಯಲ್ಲಿ ನುಡಿದಿದ್ದಾರೆ.

- ಕೈಗಾರಿಕೋದ್ಯಮಿ ಶಿವಗಂಗ ಶ್ರೀನಿವಾಸ ಅವರಿಗೆ ''''''''ಶ್ರಮ ಸೇವಾ ಸಂಜೀವಿನಿ'''''''' ಪ್ರಶಸ್ತಿ ಪ್ರದಾನ - - - ಕನ್ನಡಪ್ರಭ ವಾರ್ತೆ ದಾವಣಗೆರೆ ಮನುಷ್ಯ ಜೀವನದಲ್ಲಿ ಬದಲಾವಣೆ ಹಾಗೂ ಬೆಳವಣಿಗೆ ಎರಡೂ ಅವಶ್ಯಕ. ಶ್ರಮದ ಬೆವರಿನ ಫಲ ಶಾಶ್ವತ ಮತ್ತು ಸುಖದಾಯಕ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ನುಡಿದರು.

ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಭವನದಲ್ಲಿ ಶುಕ್ರವಾರ ಶ್ರೀಮದ್‌ ವೀರಶೈವ ಸದ್ಬೋಧನ ಸಂಸ್ಥೆ ಸಂಘಟಿಸಿದ ಜನಜಾಗೃತಿ ಧರ್ಮ ಸಮಾವೇಶದ 4ನೇ ದಿನದ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಆರೋಗ್ಯ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪ. ಪ್ರಗತಿಪರವಾದ ಧ್ಯೇಯೋದ್ದೇಶಗಳು ಮಾನವ ಜೀವನದ ಉನ್ನತಿಗೆ ಸಹಕಾರಿಯಾಗಿವೆ. ಸಂಪತ್ತು ಬೆಳೆದಂತೆ ಸಂಸ್ಕೃತಿ ಬೆಳೆಯಬೇಕು. ವೀರಶೈವ ಧರ್ಮದ ಸಂವಿಧಾನದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಕ್ರಿಯಾಶೀಲ ಬದುಕು ಉಜ್ವಲ ಬಾಳಿಗೆ ಸ್ಫೂರ್ತಿಯಾಗಿವೆ ಎಂದರು.

ವಿಧಾನ ಪರಿಷತ್ತಿನ ಮಾಜಿ ಶಾಸಕ ಡಾ. ಎ.ಎಚ್. ಶಿವಯೋಗಿಸ್ವಾಮಿ ಮಾತನಾಡಿ, ಆಧ್ಯಾತ್ಮಿಕ ಮತ್ತು ಲೌಕಿಕ ಒಂದೇ ನಾಣ್ಯದ ಎರಡು ಮುಖಗಳು. ಧರ್ಮ ಆಧ್ಯಾತ್ಮಿಕತೆ ಆದರ್ಶ ಬದುಕಿಗೆ ಆಶಾಕಿರಣವಾಗಿವೆ. ಧರ್ಮದ ಆದರ್ಶ ಚಿಂತನಗಳು ಭಾರತೀಯರ ಬದುಕಿಗೆ ಸಜ್ಜನಿಕೆಯ ಜೀವ ತುಂಬಿದೆ. ಶ್ರೀ ರಂಭಾಪುರಿ ಜಗದ್ಗುರು ಅವರ ದೂರದೃಷ್ಠಿ ಮತ್ತು ಸಾಮಾಜಿಕ ಚಿಂತನೆಗಳು ಬದುಕಿನ ವಿಕಾಸಕ್ಕೆ ಅಡಿಪಾಯವಾಗಿದೆ ಎಂದರು.

ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಇಂತಹ ಧರ್ಮ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ತಂದೆ -ತಾಯಂದಿರು ತಮ್ಮ ಮಕ್ಕಳನ್ನು ಕರೆ ತರಬೇಕು. ಮಕ್ಕಳಲ್ಲಿಯೂ ಧಾರ್ಮಿಕ ಭಾವನೆಗಳನ್ನು ಬೆಳೆಸುವ ಕಾರ್ಯ ಮಾಡಬೇಕು. ಯುವ ಸಮೂಹ ಧರ್ಮ ಕಾರ್ಯಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳುವಂತಾಗಬೇಕು ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಜಿ. ಪುಟ್ಟಸ್ವಾಮಿ, ಅ.ಭಾ.ವೀ. ಮಹಾಸಭೆ ಜಿಲ್ಲಾಧ್ಯಕ್ಷ ಐಗೂರು ಚಂದ್ರಶೇಖರ ಅತಿಥಿಗಳಾಗಿದ್ದರು. ಕೈಗಾರಿಕೋದ್ಯಮಿ ಶಿವಗಂಗ ಶ್ರೀನಿವಾಸ ಇವರಿಗೆ ''''''''ಶ್ರಮ ಸೇವಾ ಸಂಜೀವಿನಿ'''''''' ಎಂಬ ಪ್ರಶಸ್ತಿಯಿತ್ತು ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.

ತಾವರಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಮನುಷ್ಯ ಜೀವನದಲ್ಲಿ ಧರ್ಮ ದೇವರು ಮತ್ತು ಗುರುವನ್ನು ಮರೆಯಬಾರದೆಂದರು.

ಈ ಪವಿತ್ರ ಸಮಾರಂಭದಲ್ಲಿ ಡಾ. ಎಸ್.ಎಸ್. ನೇತ್ರಾವತಿ, ಜಾನಪದ ಕಲಾವಿದ ಮಹೇಶ್ವರಗೌಡ ಲಿಂಗದಹಳ್ಳಿ, ಎಸ್.ಪರಮೇಶ್ವರಪ್ಪ ಬಣಕಾರ, ಜಿ.ಎಚ್. ನಾಗರಾಜಪ್ಪ, ವಿರೂಪಾಕ್ಷಪ್ಪ ಅಣಜಿ, ಕೆ.ವಿ. ಗುರುರಾಜ, ವೀರಮ್ಮ ಆವರಗೊಳ್ಳ, ಪುಷ್ಪ ಆವರಗೊಳ್ಳ ಪಾಲ್ಗೊಂಡು, ಗುರುರಕ್ಷೆ ಸ್ವೀಕರಿಸಿದರು.

ಮಳಲಿ ಡಾ.ನಾಗಭೂಷಣ ಶಿವಾಚಾರ್ಯರು, ಚನ್ನಗಿರಿ ಕೇದಾರ ಶಿವಶಾಂತವೀರ ಶಿವಾಚಾರ್ಯರು, ಹನುಮಾಪುರದ ಸೋಮಶೇಖರ ಶಿವಾಚಾರ್ಯರು, ನಂದಿತಾವರೆ ಸಿದ್ಧಲಿಂಗ ಶಿವಾಚಾರ್ಯರು ಉಪಸ್ಥಿತರಿದ್ದರು. ಟಿ.ಜಿ.ಸುರೇಶ ಸ್ವಾಗತಿಸಿದರೆ ಪಂಚಾಕ್ಷರಯ್ಯ ಶ್ರೀ ರಂಭಾಪುರಿ ಜಗದ್ಗುರುಗಳಿಗೆ ಗೌರವ ಮಾಲಾರ್ಪಣೆ ಮಾಡಿದರು. ಹರಿಹರದ ಕಾಂತರಾಜ-ವೀರೇಶ ಬಡಿಗೇರ ಸಂಗೀತ ಸೇವೆ ಸಲ್ಲಿಸಿದರು. ಪ್ರೊ.ಮಲ್ಲಯ್ಯ ನಿರೂಪಿಸಿದರು.

ಬೆಳಗಿನ ಸಂದರ್ಭ ಜಗದ್ಗುರು ಇಷ್ಟಲಿಂಗ ಮಹಾಪೂಜಾ ನೆರವೇರಿಸಿದರು. ಮುತೈದೆಯರಿಗೆ ಉಡಿ ತುಂಬುವ ಕಾರ್ಯವನ್ನು ಮಹಿಳೆಯರು ನೆರವೇರಿಸಿದರು. ಅನ್ನ ದಾಸೋಹ ಜರುಗಿತು.

- - - -2ಕೆಡಿವಿಜಿ44ಃ:

ದಾವಣಗೆರೆಯಲ್ಲಿ ನಡೆದ ಜನಜಾಗೃತಿ ಧರ್ಮ ಸಮಾವೇಶದಲ್ಲಿ ರಂಭಾಪುರಿ ಜಗದ್ಗುರು ಅವರು ಕೈಗಾರಿಕೋದ್ಯಮಿ ಶಿವಗಂಗ ಶ್ರೀನಿವಾಸ ಅವರಿಗೆ ''''''''ಶ್ರಮ ಸೇವಾ ಸಂಜೀವಿನಿ'''''''' ಪ್ರಶಸ್ತಿ ಪ್ರದಾನ ಮಾಡಿದರು.