-ಸಿಪಿಎಸ್ ಶಾಲಾ ಮೈದಾನದಲ್ಲಿ ತಾಲೂಕಾ ಆಡಳಿತದಿಂದ ಸ್ವಾತಂತ್ರ‍್ಯ ದಿನಾಚರಣೆ

---

ಕನ್ನಡಪ್ರಭ ವಾರ್ತೆ ಯಾದಗಿರಿ

ಸ್ವಾತಂತ್ರ‍್ಯ ಹೋರಾಟಗಾರರ ಆದರ್ಶಗಳು ನಮಗೆಲ್ಲರಿಗೂ ಸದಾ ಪ್ರೇರಣೆ, ಅವರ ತ್ಯಾಗ, ಬಲಿದಾನ ಮತ್ತು ದೇಶಭಕ್ತಿ ಸದಾ ಸ್ಮರಣೀಯ ಎಂದು ಮಾಜಿ ಸಚಿವ, ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಜಿಲ್ಲೆಯ ಶಹಾಪುರ ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ತಾಲೂಕಾ ಆಡಳಿತದಿಂದ ನಡೆದ ಸ್ವಾತಂತ್ರ‍್ಯ ಧ್ವಜಾರೋಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ‍್ಯ ಹೋರಾಟಗಾರರ ನೆನಪು ಸ್ವಾತಂತ್ರ‍್ಯೋತ್ಸವ ದಿನಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ, ನಾವೆಲ್ಲರೂ ಸತ್ಪ್ರಜೆಗಳಾಗಿ ಜೀವಿಸುವುದು ಹೋರಾಟಗಾರರಿಗೆ ನೀಡುವ ಗೌರವ ಎಂದು ತಿಳಿಸಿದರು.


ತಹಸೀಲ್ದಾರ್‌ ಸಿದ್ಧಾರೂಢ ಬನ್ನಿಕೊಪ್ಪಮಾತನಾಡಿ, ಯುವಕರು ದೇಶಾಭಿಮಾನ ಬೆಳೆಯಿಸಿಕೊಳ್ಳಬೇಕು ಎಂದರು.

ಸಿಪಿಎಸ್ ಶಾಲಾ ಮೈದಾನದಲ್ಲಿ ಆಕರ್ಷಕ ಪರೇಡ್ ನಡೆಯಿತು.

ಗೃಹರಕ್ಷಕ ದಳದ ಸಿಬ್ಬಂದಿ, ವಿವಿಧ ಶಾಲೆಗಳು ಪಾಲ್ಗೊಂಡು ಪ್ರಶಸ್ತಿ ಪಡೆದರು, ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಪುರಸ್ಕರಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು, ಪತ್ರಕರ್ತರಾದ ರಾಘವೇಂದ್ರ ಹಾರಣಗೇರಾ, ರಾಜಶೇಖರ ಪಾಟೀಲ ಅವರಿಗೆ ತಾಲೂಕಾ ಆಡಳಿತದಿಂದ ಸನ್ಮಾನಿಸಲಾಯಿತು. ಸ್ಕೌಟ್‌ಗೈಡ್ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದರು. ಮೀನುಗಾರಿಕೆ ಇಲಾಖೆಯಿಂದ ಮೀನುಗಾರರಿಗೆ ಜೀವ ರಕ್ಷಕ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸಿದ್ದು ಆರಬೋಳ, ತಾಪಂ ಇಒ ಬಸವರಾಜ ಶರಬೈ, ಖಜಾನಾಧಿಕಾರಿ ಮೋನಪ್ಪ ಶಿರವಾಳ, ಪೌರಾಯುಕ್ತ ಕೆ.ಜೀವನ್, ಕೃಷಿ ಇಲಾಖೆ ಸಹಾಯಕ ನಿರ್ಧೇಶಕ ಸುನೀಲ್‌ಕುಮಾರ, ಟಿಎಚ್‌ಒ ಡಾ.ರಮೇಶ ಗುತ್ತೇದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವುಕುಮಾರ ಪಾರಶೇಟ್ಟಿ, ಅಕ್ಷರ ದಾಸೋಹ ಅಧಿಕಾರಿ ಮಹಾದೇವಿ, ಪಿಐ ಎಸ್.ಎಂ ಪಾಟೀಲ್, ಚೆನ್ನಪ್ಪಗೌಡ ಚೌಧರಿ, ಡಾ. ಯಲ್ಲಪ್ಪ ಪಾಟೀಲ್, ಸರ್ವೇ ಅಧಿಕಾರಿ ನಂದಕುಮಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಶಿಕ್ಷಕ ಲ್ ಲಾಳಸೇರಿ ಕಾರ್ಯಕ್ರಮ ನಿರೂಪಿಸಿದರು, ವಿದ್ಯಾರ್ಥಿಗಳು ವಂದೇ ಮಾತರಂ, ನಾಡಗೀತೆ ಪ್ರಸ್ತುತ ಪಡಿಸಿದರು. ಸರ್ವ ದೈಹಿಕ ಶಿಕ್ಷಕರು, ವಿವಿಧ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕರು, ಪಾಲಕರು ಪಾಲ್ಗೊಂಡಿದ್ದರು.

-

15ವೈಡಿಆರ್19 :

ಶಹಾಪುರ ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ತಾಲೂಕಾ ಆಡಳಿತ ವತಿಯಿಂದ ನಡೆದ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಸಮಾರಂಭದಲ್ಲಿ ಮಾಜಿ ಸಚಿವ, ಶಹಾಪುರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿದರು.