ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ: ಅಪರ ಜಿಲ್ಲಾಧಿಕಾರಿ

| Published : Dec 15 2023, 01:30 AM IST

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ: ಅಪರ ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ: ಅಪರ ಜಿಲ್ಲಾಧಿಕಾರಿ

ವಿಜಯಪುರ: ನ್ಯಾಶನಲ್ ಪೋರ್ಟಲ್‌ನಲ್ಲಿ ನೋಂದಣಿಯಾದ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಗುರುತಿನ ಚೀಟಿ ವಿತರಿಸಿದರು.

ನ್ಯಾಶನಲ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡ ಜಿಲ್ಲೆಯ ಒಂದು ನೂರು ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುತಿನ ಚೀಟಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಮುಖ್ಯವಾಹಿನಿಯಲ್ಲಿ ತಮ್ಮ ಬದುಕು ಕಟ್ಟಿಕೊಳ್ಳಲು ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ ಅವರು, ಮಹಾನಗರ ಪಾಲಿಕೆಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಕಲ್ಪಿಸುವ ಕುರಿತು ಸಹ ಪರಿಶೀಲನೆ ನಡೆಸಿ, ಸಮುದಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ನಿರೀಕ್ಷಕ ವಿಠ್ಠಲ ಹೆರಕಲ್, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಗಳಾದ ಶಬ್ಬಿರ ಕಾಗಜಕೋಟೆ, ನವಸ್ಫೂರ್ತಿ ಸಂಘ, ಮಲ್ಲು ಕೆಎಸ್‌ಎಂಎಫ್, ಪ್ರಾರ್ಥನಾ, ಗುಲಾಬ, ಈರಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.