ಉಡುಪಿ ಜಿಲ್ಲಾ ವೆಲ್ಫೇರ್‌ ಪಾರ್ಟಿ ಅಧ್ಯಕ್ಷರಾಗಿ ಇದ್ರಿಸ್ ಹೂಡೆ ಆಯ್ಕೆ

| Published : Feb 05 2025, 12:32 AM IST

ಉಡುಪಿ ಜಿಲ್ಲಾ ವೆಲ್ಫೇರ್‌ ಪಾರ್ಟಿ ಅಧ್ಯಕ್ಷರಾಗಿ ಇದ್ರಿಸ್ ಹೂಡೆ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೀರ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಸಮಿತಿ ಸದಸ್ಯರ ಸಭೆಯಲ್ಲಿ ಈ ಚುನಾವಣಾ ಪ್ರಕ್ರಿಯೆ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿ

ವೆಲ್ಫೇರ್ ಪಾರ್ಟಿಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಇದ್ರಿಸ್ ಹೂಡೆ, ಜಿಲ್ಲಾ ಉಪಾಧ್ಯಕ್ಷರಾಗಿ ವಿಜಯ್ ಪಡುಕುದ್ರು, ಅಬ್ದುಲ್ ಅಝೀಜ್ ಉದ್ಯಾವರ, ಸಯ್ಯದ್ ಫರೀದ್ ಅವರನ್ನು ಆಯ್ಕೆ ಮಾಡಲಾಯಿತು.ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೀರ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಸಮಿತಿ ಸದಸ್ಯರ ಸಭೆಯಲ್ಲಿ ಈ ಚುನಾವಣಾ ಪ್ರಕ್ರಿಯೆ ನೆರವೇರಿತು.ಪ್ರಧಾನ ಕಾರ್ಯದರ್ಶಿಯಾಗಿ ಯಾಸೀನ್, ಕಾರ್ಯದರ್ಶಿಯಾಗಿ ಶಾಹಜಹಾನ್ ತೋನ್ಸೆ, ಮಮ್ತಾಝ್ ಬೇಗಮ್, ಖಜಾಂಚಿಯಾಗಿ ಆಸೀಫ್ ಜಿಡಿ, ಮಾಧ್ಯಮ ಕಾರ್ಯದರ್ಶಿಯಾಗಿ ಶಾರೂಕ್ ತೀರ್ಥಹಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ತೆರವುಗೊಂಡಿದ್ದ ಹೂಡೆ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಫ್ವಾನ್ ಹೂಡೆ, ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ಝೈನುಲ್ಲಾ ಹೂಡೆ ಅವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭ ರಾಜ್ಯ ಕಾರ್ಯದರ್ಶಿಗಳಾದ ಕೆ.ಟಿ. ಬಶೀರ್, ರಿಝ್ವಾನ್ ಹುಮ್ನಾಬಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.