ಇಂದಿನ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ಇದೆ. ತಾಯಿಯೇ ಮೊದಲ ಗುರು ತಾಯಿಯೇ ಮೊದಲು ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಮತ್ತು ಸಂಸ್ಕಾರ ಕಲ್ಪಿಸಿಕೊಟ್ಟಲ್ಲಿ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಒಬ್ಬ ಮಹಿಳೆ ಆರ್ಥಿಕವಾಗಿ ಸ್ವಾವಲಂಬನೆ ಆದರೆ ಆ ಕುಟುಂಬ ಕೂಡ ಆರ್ಥಿಕ ಅಭಿವೃದ್ಧಿ ಹೊಂದುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರ್ದೇಶಕ ಚನ್ನಕೇಶವ ಹೇಳಿದರು.
ಕನ್ನಡಪ್ರಭ ವಾರ್ತೆ ಬಾದಾಮಿ
ಇಂದಿನ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ಇದೆ. ತಾಯಿಯೇ ಮೊದಲ ಗುರು ತಾಯಿಯೇ ಮೊದಲು ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಮತ್ತು ಸಂಸ್ಕಾರ ಕಲ್ಪಿಸಿಕೊಟ್ಟಲ್ಲಿ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಒಬ್ಬ ಮಹಿಳೆ ಆರ್ಥಿಕವಾಗಿ ಸ್ವಾವಲಂಬನೆ ಆದರೆ ಆ ಕುಟುಂಬ ಕೂಡ ಆರ್ಥಿಕ ಅಭಿವೃದ್ಧಿ ಹೊಂದುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರ್ದೇಶಕ ಚನ್ನಕೇಶವ ಹೇಳಿದರು.ನಗರದ ಶ್ರೀ ವೀರಪುಲಕೇಶಿ ಸಂಸ್ಥೆಯ ಬಸವ ಭವನದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ನಡೆಯುವ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಸ್ತ್ರೀ ರೋಗ ತಜ್ಞೆ ಡಾ.ಕವಿತಾ ಶಿವನಾಯ್ಕರ ಮಾತನಾಡಿ, ಮಹಿಳೆಯರು ತಮ್ಮ ಮಕ್ಕಳ ಬಗ್ಗೆ ಆದಷ್ಟು ಮುಂಜಾಗ್ರತೆ ವಹಿಸಬೇಕು. ಮಕ್ಕಳ ಶಿಕ್ಷಣದ ಬಗ್ಗೆ ಕೂಡ ತಾಯಿಂದಿರು ಒಳ್ಳೆಯ ಸಂಸ್ಕೃತಿ ಮತ್ತು ಸಂಸ್ಕಾರ ನೀಡಬೇಕೆಂದರು. ಆರೋಗ್ಯ ಸಮಸ್ಯೆಗಳ ಆದ ಸಂದರ್ಭದಲ್ಲಿ ಜಾಗ್ರತೆ ವಹಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ.ಎಂ.ಜಿ.ಕಿತ್ತಲಿ ಮಾತನಾಡಿ, ಇಂದು ಪೂಜ್ಯರು ಜನರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಅಭಿವೃದ್ಧಿ ಹೊಂದುವಂತ ಸಾವಿರಾರು ಕೆಲಸಗಳನ್ನು ಮಾಡುತ್ತಿದ್ದಾರೆ ಎಲ್ಲರೂ ಅದರ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು. ತಾಲೂಕಿನ ಯೋನಾಧಿಕಾರಿ ನಾಗರಾಜ ಹದ್ಲಿ ಸ್ವಾಗತಿಸಿದರು. ಸಾಹಿತಿ ಜಯಶ್ರೀ ಆಲೂರ ಮಾತನಾಡಿದರು.
ಜ್ಞಾನವಿಕಾಸದ ಕೇಂದ್ರದ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮಮಾಡಿ ಸಂತಸ ವ್ಯಕ್ತಪಡಿಸಿದರು. ಮೇಲ್ವಿಚಾರಕ ಈಶ್ವರ ದೇಸಾಯಿ ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ರತ್ನಾ ಎಂ.ವಂದಿಸಿದರು. ಒಕ್ಕೂಟ ಅಧ್ಯಕ್ಷೆ ಚನ್ನಮ್ಮ ಅಬಕ್ಕನ್ನವರ, ಜಿಲ್ಲಾ ಜನಜಾಗೃತಿ ಸದಸ್ಯೆ ಜಯಶ್ರೀ ಹಿರೇಮಣಿ, ಜೆಲ್ಲಾ ನಿರ್ದೇಶಕ ಚನ್ನಕೇಶವ, ಒಕ್ಕೂಟದ ಅಧ್ಯಕ್ಷೆ ಅಂಬಿಕಾ ಹಂಚಾಟೆ, ಕೊಪ್ಪಳ ಪ್ರಾದೇಶಿಕ ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿ ಸುಧಾ, ಜಿಲ್ಲಾ ಜನಜಾಗೃತಿ ಸದಸ್ಯ ಹೇಮಂತ ದೊಡಮನಿ, ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಡಾ.ಎಂ.ಜಿ. ಕಿತ್ತಲಿ, ತಾಲೂಕು ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಕವಿತಾ ಶಿವನಾಯ್ಕರ ಇದ್ದರು.ಮೇಲ್ವಿಚಾರಕ ಉಮೇಶ ಜೇರೆ ವರ್ಗದ ತಾಲೂಕಿನ ಸೇವಾ ಪ್ರತಿನಿಧಿಗಳು, ಸೇವಾದಾರರು ಹಾಗೂ ತಾಲೂಕಿನ ಎಲ್ಲಾ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.