ಕನ್ನಡಪ್ರಭ ವಾರ್ತೆ ಬೆಳಗಾವಿಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಚಿಕ್ಕೋಡಿ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಗಣೇಶ ಹುಕ್ಕೇರಿ ಬಹಿರಂಗವಾಗಿ ಧ್ವನಿ ಎತ್ತಿದ್ದಾರೆ. ಬೆಳಗಾವಿ ಜಿಲ್ಲೆ ವಿಭಜನೆಯಾದರೆ ಚಿಕ್ಕೋಡಿ ಜಿಲ್ಲೆ ರಚನೆಯಾಗುವುದು ಖಚಿತ. ಮುಂದಿನ ಬಜೆಟ್ನಲ್ಲಿ ಚಿಕ್ಕೋಡಿ ಜಿಲ್ಲೆ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ಅವರು ನೀಡಿರುವ ಹೇಳಿಕೆ ಜಿಲ್ಲೆ ವಿಭಜನೆ ಚರ್ಚೆಗೆ ಮತ್ತಷ್ಟು ವೇಗ ನೀಡಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಚಿಕ್ಕೋಡಿ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಗಣೇಶ ಹುಕ್ಕೇರಿ ಬಹಿರಂಗವಾಗಿ ಧ್ವನಿ ಎತ್ತಿದ್ದಾರೆ. ಬೆಳಗಾವಿ ಜಿಲ್ಲೆ ವಿಭಜನೆಯಾದರೆ ಚಿಕ್ಕೋಡಿ ಜಿಲ್ಲೆ ರಚನೆಯಾಗುವುದು ಖಚಿತ. ಮುಂದಿನ ಬಜೆಟ್ನಲ್ಲಿ ಚಿಕ್ಕೋಡಿ ಜಿಲ್ಲೆ ಘೋಷಣೆಯಾಗುವ ನಿರೀಕ್ಷೆಯಿದೆ ಎಂದು ಅವರು ನೀಡಿರುವ ಹೇಳಿಕೆ ಜಿಲ್ಲೆ ವಿಭಜನೆ ಚರ್ಚೆಗೆ ಮತ್ತಷ್ಟು ವೇಗ ನೀಡಿದೆ.ಚಳಿಗಾಲದ ಅಧಿವೇಶನ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರತ್ಯೇಕ ಜಿಲ್ಲಾ ರಚನೆಯ ಬೇಡಿಕೆ ಮತ್ತೆ ಬಲವಾಗಿ ಕೇಳಿಬರುತ್ತಿದೆ. ಚಿಕ್ಕೋಡಿ, ಗೋಕಾಕ ಹಾಗೂ ಅಥಣಿ ಜಿಲ್ಲೆಗಳ ರಚನೆಗಾಗಿ ವಿವಿಧ ನಾಯಕರು ಪ್ರತ್ಯೇಕವಾಗಿ ಒತ್ತಾಯಿಸುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚೆಗೆ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಅಥಣಿ ಜಿಲ್ಲೆ ರಚನೆ ಕುರಿತು ನೀಡಿದ್ದ ಹೇಳಿಕೆ ಜಿಲ್ಲೆಯಲ್ಲಿ ರಾಜಕೀಯ ಚರ್ಚೆಗೆ ನಾಂದಿ ಹಾಡಿತ್ತು. ಅಧಿವೇಶನ ಮುಗಿದ ಬಳಿಕ ಅಥಣಿಯನ್ನು ಜಿಲ್ಲೆಯನ್ನಾಗಿ ಮಾಡುವ ಕುರಿತು ಚಿಂತನೆ ನಡೆಸಬಹುದು ಎಂಬ ಅವರ ಹೇಳಿಕೆಯ ಬೆನ್ನಲ್ಲೇ ಮಾಜಿ ಶಾಸಕ ಮಹೇಶ ಕುಮಟಳ್ಳಿ ಹೊಸ ಬೇಡಿಕೆ ಮುಂದಿಟ್ಟಿದ್ದಾರೆ. ಅಥಣಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಬೇಕು. ಇಲ್ಲವಾದರೆ ಅಥಣಿಯನ್ನು ವಿಜಯಪುರ ಜಿಲ್ಲೆಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಇತ್ತ ಚಿಕ್ಕೋಡಿ ಹಾಗೂ ಗೋಕಾಕ ಜಿಲ್ಲೆಗಳ ರಚನೆಗೂ ಬೇಡಿಕೆ ಹೆಚ್ಚಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರೂ ಚಿಕ್ಕೋಡಿ, ಗೋಕಾಕ ಮತ್ತು ಅಥಣಿ ಜಿಲ್ಲೆಗಳ ರಚನೆಯ ಬೇಡಿಕೆಗಳನ್ನು ಪ್ರಸ್ತಾಪಿಸಿದ್ದಾರೆ. ಆದರೆ, ಎಲ್ಲ ಪ್ರದೇಶಗಳ ಬೇಡಿಕೆಗಳನ್ನು ಪರಿಗಣಿಸಿ ಸರ್ಕಾರವೇ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ.
ಹೀಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಂದ ವಿಭಿನ್ನ ನಿಲುವುಗಳು ವ್ಯಕ್ತವಾಗುತ್ತಿದ್ದು, ಚಳಿಗಾಲದ ಅಧಿವೇಶನದಲ್ಲಿ ಈ ವಿಷಯ ಪ್ರಮುಖ ಚರ್ಚೆಯಾಗುವ ಸಾಧ್ಯತೆ ಇದೆ. ದಶಕಗಳಿಂದ ಪ್ರಸ್ತಾಪವಾಗುತ್ತಿರುವ ಜಿಲ್ಲೆ ವಿಭಜನೆ ಬೇಡಿಕೆಗೆ ಈ ಬಾರಿಯಾದರೂ ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸುತ್ತದೆಯೇ ಎಂಬ ಕುತೂಹಲ ಮೂಡಿದೆ.