ಹಾವು, ನಾಯಿ ಕಡಿದರೆ ಭಯಭೀತರಾಗದೇ ಆಸ್ಪತ್ರೆಗೆ ಭೇಟಿ ನೀಡಿ

| Published : Sep 25 2025, 01:00 AM IST

ಹಾವು, ನಾಯಿ ಕಡಿದರೆ ಭಯಭೀತರಾಗದೇ ಆಸ್ಪತ್ರೆಗೆ ಭೇಟಿ ನೀಡಿ
Share this Article
  • FB
  • TW
  • Linkdin
  • Email

ಸಾರಾಂಶ

ರೇಬಿಸ್ ಕಾಯಿಲೆಯ ಕುರಿತು ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಬಳ್ಳಾರಿ: ಹಾವು, ನಾಯಿ, ಇತರೆ ಪ್ರಾಣಿ ಕಡಿತ ಸಂಭವಿಸಿದಾಗ ರೋಗಿಯನ್ನು ಭಯಭೀತರಾಗದಂತೆ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಮೇರೆಗೆ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂ ಬಿ.ವಿ.ಕೆ. ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ರಾಷ್ಟ್ರೀಯ ಹಾವು ಕಡಿತ ನಿಯಂತ್ರಣ ಕಾರ್ಯಕ್ರಮ ಮತ್ತು ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದಡಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ “ಅಂತರಾಷ್ಟ್ರೀಯ ಹಾವು ಕಡಿತ ಜಾಗೃತಿ ದಿನ” ಮತ್ತು “ವಿಶ್ವ ರೇಬಿಸ್ ದಿನಾಚರಣೆ” ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೇಬಿಸ್ ಕಾಯಿಲೆಯ ಕುರಿತು ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ನಾಯಿ ಕಡಿತದ ಮೂಲಕ ಹರಡುವ ರೇಬಿಸ್ ಖಾಯಿಲೆಯನ್ನು 2030 ರ ವೇಳೆಗೆ ಸಂಭವಿಸುವ ಸಾವಿನ ಸಂಖ್ಯೆಯನ್ನು ಶೂನ್ಯ ಪ್ರಮಾಣಕ್ಕಿಳಿಸುವ ಗುರಿ ಹೊಂದಲಾಗಿದೆ ಎಂದರು.

ರೇಬಿಸ್ ಒಂದು ಮಾರಾಣಾಂತಿಕ ಕಾಯಿಲೆಯಾಗಿದ್ದು, ನಾಯಿ ಕಚ್ಚಿದ ನಂತರ ಗಾಯವನ್ನು ಸ್ವಚ್ಚ ನೀರಿನಲ್ಲಿ 15 ನಿಮಿಷಗಳ ಕಾಲ ತೊಳೆಯುವುದರಿಂದ ಶೇ.50 ರಿಂದ 70 ರಷ್ಟು ರೇಬಿಸ್ ಕಾಯಿಲೆಗೆ ತುತ್ತಾಗುವುದನ್ನು ತಡೆಯಬಹುದು. ನಂತರ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆದು ರೋಗನಿರೋಧಕ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಹಾವು ಕಡಿತ ಉಂಟಾದ ಸಂದರ್ಭದಲ್ಲಿ ರೋಗಿಯನ್ನು ಭಯಬೀತರಾಗದಂತೆ ನೋಡಿಕೊಳ್ಳಬೇಕು. ಹಾವು ಕಡಿತದ ಜಾಗದಲ್ಲಿ ಸಾಧ್ಯವಾದಷ್ಟು ಕಚ್ಚಿದ ಜಾಗದಿಂದ ಕಾಲು ಅಲುಗಾಡುದಂತೆ ಕಾಲಿನ ಮೇಲ್ಭಾಗದವರೆಗೆ ಗಟ್ಟಿಯಾಗಿ ಚೆಕ್ಕೆಯಿಂದ ಕಟ್ಟಿ, ಚಿಕಿತ್ಸೆಗೆ ಹತ್ತಿರದ ಆಸ್ಪತ್ರ‍್ರೆಗೆ ತೆರಳಿ ಎ.ಎಸ್.ವಿ ಚುಚ್ಚುಮದ್ದು ಹಾಕಿಸಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪ್ರಹ್ಲಾದ್ ಚೌದ್ರಿ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಸಹಾಯಕ ಪ್ರಾಧ್ಯಾಪಕಿ ಡಾ.ಪಲ್ಲವಿ, ಎನ್.ಸಿ.ಡಿ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ.ಜಬೀನ್‌ತಾಜ್, ಜಿಲ್ಲಾ ಮೈಕ್ರೋಬಯಾಲಾಜಿಸ್ಟ್ ಶರತ್ ಬಾಬು, ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಐಇಸಿ ವಿಭಾಗದ ಪ್ರಶಾಂತ್, ಜಿಲ್ಲಾ ತಂಬಾಕು ಸಲಹೆಗಾರರು, ಜಿಲ್ಲಾ ಸರ್ವೇಕ್ಷಣಾ ಘಟಕದ ಸಿಬ್ಬಂದಿ, ಜಿಲ್ಲಾ ಕಾಲರಾ ನಿಯಂತ್ರಣ ತಂಡದ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.