ಇಲ್ಲಿನ ಕೆನರಾ ಶಿಕ್ಷಣ ಪ್ರಸಾರಕ ಮಂಡಳದ ಭದ್ರಕಾಳಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕ ಹಾಗೂ ಗೋಕರ್ಣ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಆವಾರದಲ್ಲಿ ವನಮಹೋತ್ಸವ ನಡೆಯಿತು.
ಗೋಕರ್ಣ ಭದ್ರಕಾಳಿ ಕಾಲೇಜಿನಲ್ಲಿ ವನಮಹೋತ್ಸವ
ಕನ್ನಡಪ್ರಭ ವಾರ್ತೆ ಗೋಕರ್ಣಇಲ್ಲಿನ ಕೆನರಾ ಶಿಕ್ಷಣ ಪ್ರಸಾರಕ ಮಂಡಳದ ಭದ್ರಕಾಳಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕ ಹಾಗೂ ಗೋಕರ್ಣ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಆವಾರದಲ್ಲಿ ವನಮಹೋತ್ಸವ ನಡೆಯಿತು.
ಕೆನರಾ ಶಿಕ್ಷಣ ಪ್ರಸಾರಕ ಮಂಡಳದ ಚೇರ್‌ಮನ್ ಪಿ.ಎಂ.ಜೆ.ಎಫ್. ಗಣಪತಿ ನಾಯಕ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ತಿಳಿಸಿ, ಸಮಾಜ ಜೀವಿಯಾಗಿರುವ ಮನುಷ್ಯ ತನ್ನೆಲ್ಲ ಅವಶ್ಯಕತೆಗಳನ್ನು ಪೂರೈಸಿಕೊಳ್ಳುವ ಭರಾಟೆಯಲ್ಲಿ ಪ್ರಕೃತಿಯನ್ನು ಮಾಲಿನ್ಯಗೊಳಿಸುತ್ತ, ತನ್ಮೂಲಕ ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿ ದೈನಂದಿನ ಬದುಕಿನಲ್ಲಿ ಅದರ ಪರಿಣಾಮ ಎದುರಿಸುತ್ತಿದ್ದಾನೆ. ಶಬ್ದ ಮಾಲಿನ್ಯ, ಜಲ ಮಾಲಿನ್ಯ, ವಾಯು ಮಾಲಿನ್ಯಗಳಿಂದ ವಿವಿಧ ರೋಗಗಳಿಗೆ ಆಹ್ವಾನ ನೀಡುತ್ತಾ ನೈಸರ್ಗಿಕ ಪ್ರಕೃತಿಯಲ್ಲಿ ಅಸಮತೋಲನಕ್ಕೆ ಕಾರಣನಾಗುತ್ತಿದ್ದಾನೆ. ಇದು ಹೀಗೆ ಮುಂದುವರಿದಲ್ಲಿ ನಮ್ಮ ಮುಂದಿನ ತಲೆಮಾರು ಬಹುದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದರು.ಲಯನ್ಸ್ ಕ್ಲಬ್ ಅಧ್ಯಕ್ಷ ಮಹೇಶ ನಾಯಕ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಹಂತದಲ್ಲಿ ಇರುವಾಗಲೇ ಸಸ್ಯಗಳು ಹಾಗೂ ಅವುಗಳ ಪ್ರಯೋಜನಗಳ ಬಗ್ಗೆ ತಿಳಿದುಕೊಂಡು ಅವುಗಳಲ್ಲಿ ಆಸಕ್ತಿಯನ್ನು ಹೊಂದಿ ಗಿಡಗಳ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.
ಲಯನ್ಸ್ ಕ್ಲಬ್‌ನ ಸದಸ್ಯ ಎಂ.ಜೆ.ಎಫ್. ಆರ್.ಎಚ್. ನಾಯಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಎನ್.ಎಸ್. ಲಮಾಣಿ, ಖಚಾಂಚಿ ದೀಪಕ ರಮಾನಂದ ಅಡಪೇಕರ್, ಸದಸ್ಯರಾದ ಡಾ. ರಾಮಚಂದ್ರ ಮಲ್ಲನ್, ಕಾಲೇಜಿನ ಪ್ರಾಚಾರ್ಯ ಎಸ್.ಸಿ. ನಾಯ್ಕ, ಉಪನ್ಯಾಸಕರಾದ ರಾಮಮೂರ್ತಿ ನಾಯಕ, ರಾಜಶೇಖರ ಬಾಗೇವಾಡಿ, ಸಾವಿತ್ರಿ ಗೌಡ, ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪಲ್ಲವಿ ಹೆಗಡೆ ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಆವಾರದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.