ಸಮಾನತೆಗೆ ಧಕ್ಕೆಯಾದರೆ ಮಾನವ ಹಕ್ಕು ಉಲ್ಲಂಘಿಸಿದಂತೆ

| Published : Dec 14 2023, 01:30 AM IST

ಸಮಾನತೆಗೆ ಧಕ್ಕೆಯಾದರೆ ಮಾನವ ಹಕ್ಕು ಉಲ್ಲಂಘಿಸಿದಂತೆ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾನತೆಗೆ ಧಕ್ಕೆಯಾದರೆ ಮಾನವ ಹಕ್ಕು ಉಲ್ಲಂಘಿಸಿದಂತೆವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿದ ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಅಭಿಮತ

ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿದ ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಅಭಿಮತಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಯಾವುದೇ ಒಬ್ಬ ವ್ಯಕ್ತಿಗೆ ಜೀವನ ಮಾಡಲು ಮೂಲಭೂತ ಸೌಕರ್ಯಗಳ ಕೊರತೆಯುಂಟಾದರೆ, ಸಂವಿಧಾನ ನೀಡಿರುವ ಸಮಾನತೆ ಹಾಗೂ ಸ್ವಾತಂತ್ರ್ಯಗಳಿಗೆ ಧಕ್ಕೆಯಾದರೆ ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ, ಕೆಂಪೇಗೌಡ ಕಾನೂನು ಕಾಲೇಜು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ-2023” ಉದ್ಘಾಟಿಸಿ ಮಾನತಾಡಿದರು.

ಸಂವಿಧಾನಾತ್ಮಕ ಆಯೋಗ

ಸಂವಿಧಾನದಡಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಚನೆಯಾಗಿದೆ. ಒಬ್ಬ ಮನುಷ್ಯ ಮತ್ತೊಬ್ಬರನ್ನು ಯಾವ ರೀತಿ ಗೌರವಿಸಬೇಕು ಹಾಗೂ ತಮಗಿರುವ ಮಾನವ ಹಕ್ಕುಗಳು ಇತರರಿಂದ ಉಲ್ಲಂಘನೆಯಾಗದಂತೆ ಹೇಗೆ ಸಂರಕ್ಷಿಸಿಕೊಳ್ಳಬೇಕು. ಒಂದು ವೇಳೆ ಉಲ್ಲಂಘನೆಯಾದರೆ ಯಾವ ರೀತಿಯಲ್ಲಿ ನ್ಯಾಯ ಪಡೆದುಕೊಳ್ಳಬೇಕು ಎಂಬುದನ್ನು ಮಾನವ ಹಕ್ಕುಗಳ ಆಯೋಗ ಹಲವು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದೆ ಎಂದರು.

ಹಕ್ಕುಗಳ ಜತೆ ಕರ್ತವ್ಯ ಪಾಲಿಸಿ

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನತಾಡಿ, ನಮಗಿರುವ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಎಲ್ಲರೂ ಪಾಲಿಸಿದರೆ ಮಾನವ ಹಕ್ಕುಗಳ ಉಲ್ಲಂಘನೆ ತಪ್ಪುತ್ತದೆ. ಎಲ್ಲ ಭಾರತೀಯರ ಮಹಾನ್ ಗ್ರಂಥ ಸಂವಿಧಾನವಾಗಿದ್ದು, ಎಲ್ಲರೂ ಸಂವಿಧಾನವನ್ನು ಓದುವಂತಾಗಬೇಕು, ಅದರ ಆಶಯದಂತೆ ಸರ್ವರೂ ಬಾಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಮಾತನಾಡಿ, ಮಾನವ ಹಕ್ಕುಗಳ ಸಂರಕ್ಷಣೆಗೆ ದೇಶವು ತನ್ನದೇ ಆದ ರೀತಿಯಲ್ಲಿ ಯುಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯಾವುದೇ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಹಾಗೂ ಅವುಗಳನ್ನು ಹೇಗೆ ಸಂರಕ್ಷಿಸಿಕೊಳ್ಳಬೇಕು ಎನ್ನುವ ದಿಸೆಯಲ್ಲಿ ನಾವೆಲ್ಲರೂ ಜವಾಬ್ದಾರಿಯನ್ನು ಅರಿತು ನಡೆದುಕೊಳ್ಳಬೇಕು ಎಂದರು.

ಗುಡಿಬಂಡೆಯ ಉನ್ನತಿ ಮಾನವ ಹಕ್ಕುಗಳ ರಕ್ಷಣ ಸಂಘದ ಸಂಸ್ಥಾಪಕ ಅಧ್ಯಕ್ಷ ಜಿ.ವಿ. ವಿಶ್ವನಾಥ್ ಅವರು ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರು ಹಾಗೂ ಗಣ್ಯರು ಮಾನವ ಹಕ್ಕುಗಳ ಜಾಗೃತಿ ಕುರಿತು ರಾಜ್ಯ ಮಾನವ ಹಕ್ಕುಗಳ ಆಯೋಗ ಹೊರತಂದಿರುವ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಅರುಣಾ ಕುಮಾರಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಜಿಪಂ ಉಪಕಾರ್ಯದರ್ಶಿ ಡಾ.ಎನ್. ಭಾಸ್ಕರ್, ಎಸಿ ಡಿ.ಎಚ್. ಅಶ್ವಿನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಸ್.ಎಂ.ಮುರಳಿ ಮೋಹನ್, ರಾಷ್ಟ್ರೀಯ ಮಾನವ ಹಕ್ಕುಗಳು ಜಿಲ್ಲಾ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಚಂದ್ರಯ್ಯ, ಕೆಂಪೇಗೌಡ ಕಾನೂನು ಕಾಲೇಜಿನ ಪ್ರಾಂಶುಪಾಲೆ ಶೋಭಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಸಿಕೆಬಿ-2 ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಹೊರತಂದಿರುವ ಕಿರುಹೊತ್ತಿಗೆಯನ್ನು ಗಣ್ಯರು ಬಿಡುಗಡೆ ಮಾಡಿದರು.