ಸಂಸತ್ ಚುನಾವಣೆಯಲ್ಲಿ ಕೈ ಸೋತರೆ ಗ್ಯಾರಂಟಿ ರದ್ದು?: ಬಾಲಕೃಷ್ಣ

| Published : Jan 31 2024, 02:20 AM IST / Updated: Jan 31 2024, 02:21 AM IST

ಸಂಸತ್ ಚುನಾವಣೆಯಲ್ಲಿ ಕೈ ಸೋತರೆ ಗ್ಯಾರಂಟಿ ರದ್ದು?: ಬಾಲಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂಬ ಅರ್ಥದಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂಬ ಅರ್ಥದಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ಮಾಗಡಿ ತಾಲೂಕು ಕುದೂರು ಹೋಬಳಿಯ ಶ್ರೀಗಿರಿಪುರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಸಂಸತ್ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಮತ ನೀಡಬೇಕು. ಹಾಗೊಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದರು.

ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂಬ ಅರ್ಥ ಬರುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.

ನಿಮ್ಮ ಮತ ಅಕ್ಷತೆ ಕಾಳಿಗಾ ಅಥವಾ ಐದು ಗ್ಯಾರಂಟಿ ಯೋಜನೆಗಳಿಗಾ ಎಂಬುದನ್ನು ಮತದಾರರು ಯೋಜನೆ ಮಾಡಿ ಮತ ಚಲಾಯಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಗ್ಯಾರಂಟಿ ಯೋಜನೆಗಳು ಮುಂದುವರೆಸುತ್ತೇವೆ. ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ತಿರಸ್ಕಾರ ಮಾಡಿದ್ದಾರೆ ಅಂತ ಅಲ್ಲವೇ ಎಂದು ಬಾಲಕೃಷ್ಣ ಪ್ರಶ್ನಿಸಿದರು.