ನಾನು ಹಾಸನಕ್ಕೆ ಹೋಗದಿದ್ದರೆ ನೀರು ಬರುತ್ತಿರಲಿಲ್ಲ

| Published : Oct 09 2024, 01:42 AM IST

ಸಾರಾಂಶ

ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಳ್ಳದಿದ್ದರೆ ಇನ್ನೂ ಐವತ್ತು ವರ್ಷ ಕಳೆದರೂ ನಮ್ಮ ಭಾಗಕ್ಕೆ ಎತ್ತಿನ ಹೊಳೆ ನೀರು ಬರುತ್ತಿರಲಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

ಕನ್ನಡಪ್ರಭವಾರ್ತೆ ಮಧುಗಿರಿ

ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಳ್ಳದಿದ್ದರೆ ಇನ್ನೂ ಐವತ್ತು ವರ್ಷ ಕಳೆದರೂ ನಮ್ಮ ಭಾಗಕ್ಕೆ ಎತ್ತಿನ ಹೊಳೆ ನೀರು ಬರುತ್ತಿರಲಿಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

ತಾಲೂಕಿನ ಬಿಜವರ ಕೆರೆ ಕೋಡಿ ಪರಿಶೀಲಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಆಧಿಕಾರ ವಹಿಸಿಕೊಂಡ ಬಳಿಕ ಅಲ್ಲಿನ ವಸ್ತು ಸ್ಥಿತಿ ನನಗೆ ಅರ್ಥವಾಗಿದ್ದು, ಅಲ್ಲಿನ ರಾಜಕೀಯ ಪರಿಸ್ಥಿತಿಯೇ ಬೇರೆ. ದಕ್ಷ ,ಪ್ರಮಾಣಿಕ ಅಧಿಕಾರಿಗಳಿಗೆ ಅಲ್ಲಿನ ರಾಜಕೀಯ ವ್ಯವಸ್ಥೆ ಕೆಲಸ ಮಾಡಲು ಬಿಡಲ್ಲ, ಹಾಸನ ಡಿಸಿ ಸತ್ಯಭಾಮ ಹಾಗೂ ನಾನು ಇಲ್ಲದಿದ್ದರೆ ನಮ್ಮ ಭಾಗಕ್ಕೆ ಎತ್ತಿನಹೊಳೆ ನೀರು ತರಲು ಆಗುತ್ತಿರಲಿಲ್ಲ ಎಂದರು.

ಡಿಸಿ ಸತ್ಯಭಾಮ ಎತ್ತಿನ ಹೊಳೆ ಯೋಜನೆ ಅನುಷ್ಠಾನಕ್ಕೆ ಹೆಚ್ಚು ಶ್ರಮ ವಹಿಸಿದ್ದು ಅಲ್ಲಿನ ಎಲ್ಲ ಎಂಜಿನಿಯರ್‌ಗಳು ಸಹ ಮುತುವರ್ಜಿ ವಹಿಸಿ ಕೆಲಸ ಮಾಡಿದ್ದಾರೆ. ಅವರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರಸ್ತುತ ನೀರು ಲಿಪ್ಟ್‌ ಮಾಡಲು ರೆಡಿ ಇದೆ. ಆದರೆ ಕಾಲುವೆಗಳ ದುರಸ್ತಿ ಆಗಬೇಕು. ಸರ್ಕಾರ ಕಾಲುವೆಗಳ ದುರಸ್ಥಿಗೆ ಈಗಾಗಲೇ 300 ಕೋಟಿ ಅನುದಾನ ಬಿಡುಗಡೆ ಮಾಡಿದೆ .ಮುಂದಿನ ಮಳೆಗಾಲದ ವೇಳೆಗೆ ಮಧುಗಿರಿ ಮತ್ತು ಕೊರಟೆಗೆರೆ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ನೀರು ತುಂಬಿಸುವ ಕಾಮಗಾರಿಗೆ ಸರ್ಕಾರ 575 ಕೋಟಿ ಹಣ ಬಿಡುಗಡೆ ಮಾಡಿದ್ದು, ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ರಾಜಣ್ಣ, ಜಿಪಂಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಎಸಿ ಶಿವಪ್ಪ, ತಹಸೀಲ್ದಾರ್‌ ಶಿರೀನ್‌ತಾಜ್‌, ತಾಪಂಇಓ ಲಕ್ಷ್ಮಣ್‌, ಮಧುಸೂದನ್‌, ಪುರಸಭೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್‌, ಉಪಾಧ್ಯಕ್ಷೆ ಸುಜಾತ ಶಂಕರನಾರಾಯಣ್‌, ಮುಖಂಡರಾದ ತುಂಗೋಟಿ ರಾಮಣ್ಣ,ಸುವರ್ಣಮ್ಮ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಬಿ.ನಾಗೇಶ್‌ಬಾಬು, ಪುರಸಭೆ ಸದಸ್ಯರಾದ ಎಂ.ವಿ.ಗೋವಿಂದರಾಜು, ಶೋಭರಾಣಿ, ಶ್ರೀಧರ್‌, ಮುಖ್ಯಾಧಿಕಾರಿ ಸುರೇಶ್‌ ಸೇರಿದಂತೆ ಅನೇಕರಿದ್ದರು.