ಪ್ರಧಾನಿ ಮೋದಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು: ಸಿ.ಟಿ. ರವಿ

| Published : Jun 22 2024, 12:47 AM IST

ಪ್ರಧಾನಿ ಮೋದಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು: ಸಿ.ಟಿ. ರವಿ
Share this Article
  • FB
  • TW
  • Linkdin
  • Email

ಸಾರಾಂಶ

ಕೊಪ್ಪ, ವಿಪಕ್ಷಗಳ ಅಪಪ್ರಚಾರದ ನಡುವೆಯೂ ನರೇಂದ್ರ ಮೋದಿಯವರು ೩ನೇ ಬಾರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಕನ್ನಡಪ್ರಭ ವಾರ್ತೆ, ಕೊಪ್ಪ

ವಿಪಕ್ಷಗಳ ಅಪಪ್ರಚಾರದ ನಡುವೆಯೂ ನರೇಂದ್ರ ಮೋದಿಯವರು ೩ನೇ ಬಾರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ಕೋಟಾ ಶ್ರೀನಿವಾಸ್ ಪೂಜಾರಿ, ಡಾ. ಧನಂಜಯ ಸರ್ಜಿ, ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡರು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಪುರಭವನದಲ್ಲಿ ಶುಕ್ರವಾರ ಕೊಪ್ಪ ಬಿಜೆಪಿ ಮಂಡಲದಿಂದ ಆಯೊಜಿಸಿದ್ದ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಎಲ್ಲಾ ೮ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದೀರ. ಕಳೆದ ವಿಧಾನಸಭಾ ಚುನಾವಣೆಯಲ್ಲಿಯೇ ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಾಗಿದ್ದರೆ ಮೈತ್ರಿ ಪಕ್ಷವೇ ಅಧಿಕಾರಕ್ಕೆ ಬರುತ್ತಿತ್ತು. ಕಾಂಗ್ರೆಸ್ ೫೦ ಸೀಟುಗಳನ್ನು ಮೀರುತ್ತಿರಲಿಲ್ಲ ಎಂದು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದ ೧೩ ತಿಂಗಳಾದರೂ ಮುಖ್ಯಮಂತ್ರಿಯಿಂದ ಮರಿಪುಡಾರಿವರೆಗೂ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ ಕೂಡಲೇ ಅಬಕಾರಿ ಸುಂಕ, ರೆವಿನ್ಯೂ ಸ್ಟ್ಯಾಂಪ್ , ಪೆಟ್ರೋಲ್ ಡೀಸೆಲ್ ಸೆಸ್ ಅನ್ನು ಹೆಚ್ಚಳ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿ ದ್ದಾರೆ ಎಂದರು. ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಕಷ್ಟವಿದೆ ಎಂದು ಪ್ರಚಾರ ಮತ್ತು ಅಪಪ್ರಚಾರ ನಡೆದಿತ್ತು. ಆದರೆ ಬಿಜೆಪಿ ಕಾರ್ಯಕರ್ತರು ಇದನ್ನು ಸುಳ್ಳಾಗಿಸಿದ್ದಾರೆ. ರಾಜ್ಯ ಸರ್ಕಾರ ದಲಿತರಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಂಡಿದ್ದು ಈ ಬಗ್ಗೆ ಬಿಜೆಪಿ ಹೋರಾಟ ಮಾಡಿದ್ದರೂ ದಲಿತರು ಯಾರೂ ಈ ಬಗ್ಗೆ ಮಾತನಾಡುತ್ತಿಲ್ಲ. ಪ್ರಧಾನಿ ಮೋದಿ ಅಧಿಕಾರ ಸ್ವೀಕರಿಸಿ ರೈತರಿಗೆ ಅನುಕೂಲವಾಗುವಂತೆ ಪ್ರಧಾನಮಂತ್ರಿ ಕಿಸಾನ್ ಯೋಜನೆ ಹಣ ಬಿಡುಗಡೆ ಮಾಡಿದ್ದಾರೆ. ಆದರೆ ಕರ್ನಾಟಕ ಸರ್ಕಾರ ಹಿಂದೆ ಯಡಿಯೂರಪ್ಪ ನೀಡುತ್ತಿದ್ದ ಹಣ ಸ್ಥಗಿತಗೊಳಿಸಿದೆ. ಕೊಪ್ಪದ ಹಿರಿಕೆರೆ ಬಳಿ ನಿರ್ಮಾಣವಾಗುತ್ತಿರುವ ಹೊಸ ಲೇಔಟ್ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಧಿಕಾರಿಯೊಂದಿಗೆ ಮಾತನಾಡುವ ಭರವಸೆ ನೀಡಿದರು. ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾದ ಡಾ. ಧನಂಜಯ ಸರ್ಜಿ ಮಾತನಾಡಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಶ್ರಮದಿಂದ ಮುಂದಿನ ತಾಪಂ, ಜಿಪಂ ಚುನಾವಣೆಯಲ್ಲಿಯೂ ಗೆಲುವು ಸಾಧಿಸುವ ಭರವಸೆ ವ್ಯಕ್ತಪಡಿಸಿದರು. ಮಾಜಿ ಶಾಸಕ ಡಿ.ಎನ್.ಜೀವರಾಜ್ ಮಾತನಾಡಿ ಅದೃಷ್ಟದ ಕೊರತೆಯಿಂದ ನಾವು ವಿಧಾನಸಭೆಯಲ್ಲಿ ಸೋತಿದ್ದೇವೆ. ಅದರೆ ಲೋಕಸಭೆ, ವಿಧಾನಪರಿಷತ್ ಸೇರಿದಂತೆ ನಾಲ್ಕು ಸ್ಥಾನಗಳನ್ನು ಜಿಲ್ಲೆಯಲ್ಲಿ ಗೆಲ್ಲಿಸುವ ಮೂಲಕ ಜನ ನಮ್ಮನ್ನು ಆಶೀರ್ವದಿಸಿದ್ದಾರೆ. ಮುಂದಿನ ೩ ತಿಂಗಳಲ್ಲಿ ತಾಪಂ, ಜಿಪಂ. ಚುನಾವಣೆಗೆ ನಾವು ಹಿಂದೂ ಮತಗಳನ್ನು ಒಗ್ಗೂಡಿಸ ಬೇಕಾಗಿದೆ ಎಂದರು.ಕೊಪ್ಪ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಕೆ.ದಿನೇಶ್ ಹೊಸೂರು ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷದ ಮುಖಂಡರು, ಮುಖಂಡರು, ಕಾರ್ಯಕರ್ತರು ಇದ್ದರು.