ಸಾರಾಂಶ
ಸುಲ್ತಾನ್ ಬತ್ತೇರಿ- ಬೆಂಗ್ರೆ ನಡುವೆ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಈ ಸೇತುವೆ ನಿರ್ಮಾಣವಾದ ಬಳಿಕ ತಣ್ಣೀರುಬಾವಿ ಬ್ಲೂಫ್ಲ್ಯಾಗ್ ಬೀಚ್‌ಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ತಣ್ಣೀರುಬಾವಿ ಬೀಚ್ ಅಭಿವೃದ್ಧಿ ಮತ್ತು ನಿರ್ವಹಣೆಯ ಟೆಂಡರ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಸುಲ್ತಾನ್ ಬತ್ತೇರಿ- ಬೆಂಗ್ರೆ ನಡುವೆ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಈ ಸೇತುವೆ ನಿರ್ಮಾಣವಾದ ಬಳಿಕ ತಣ್ಣೀರುಬಾವಿ ಬ್ಲೂಫ್ಲ್ಯಾಗ್ ಬೀಚ್‌ಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ತಣ್ಣೀರುಬಾವಿ ಬೀಚ್ ಅಭಿವೃದ್ಧಿ ಮತ್ತು ನಿರ್ವಹಣೆಯ ಟೆಂಡರ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಬೀಚ್ ಅಭಿವೃದ್ಧಿಪಡಿಸುವ ಕೆಲಸಗಳು ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ಸರ್ಕಾರದಿಂದ ಶೇ.90ರಷ್ಟು ಪೂರ್ಣಗೊಂಡಿದೆ. ಇದರ ನಿರ್ವಹಣೆಯ ಟೆಂಡರ್ ವಹಿಸಿಕೊಂಡವರು ಬ್ಲೂ ಫ್ಲ್ಯಾಗ್‌ನ ಪರಿಸರ ಸ್ನೇಹಿ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಬೀಚ್ ಸೌಂದರ್ಯಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಿರ್ವಹಣಾ ಸಂಸ್ಥೆಯ ಬಿಡ್ ಒಪ್ಪಂದ ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.ಬಿಡ್‌ಗೆ ಅರ್ಜಿ ಸಲ್ಲಿಸಲು ನ.8ಕ್ಕೆ ಕೊನೆಯ ದಿನವಾಗಿದ್ದು, ಮುಂಬೈ ಸೇರಿದಂತೆ ರಾಜ್ಯದ ವಿವಿಧೆಡೆಯವರು ಆಸಕ್ತರಾಗಿದ್ದಾರೆ ಎಂದರು.
ತಣ್ಣೀರುಬಾವಿಯ ಮೊದಲನೇ ಬೀಚ್‌ನಲ್ಲಿ ರಾತ್ರಿ 9.30ರವರೆಗೆ ಸಾರ್ವಜನಿಕರಿಗೆ ವಿಹರಿಸಲು ಅವಕಾಶವಿದೆ. ಆದರೆ ಬ್ಲೂಪ್ಲ್ಯಾಗ್ ಬೀಚ್‌ನಲ್ಲಿ 6.30ರವರೆಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಈ ಬೀಚ್‌ನಲ್ಲೂ ಅವಧಿ ಹೆಚ್ಚಿಸಬೇಕು. ಪಾರ್ಕಿಂಗ್ ಸ್ಥಳ ವಿಸ್ತರಿಸಬೇಕು. ರಸ್ತೆ ಸಂಪರ್ಕ ವ್ಯವಸ್ಥೆ ಉತ್ತಮಪಡಿಸಬೇಕು ಮೊದಲಾದ ಬೇಡಿಕೆಗಳನ್ನು ಈಡೇರಿಸುವಂತೆ ಬಿಡ್ಡುದಾರರು ಮನವಿ ಮಾಡಿದರು.ಪೊಬ್ರೆಷನರಿ ಜಿಲ್ಲಾಧಿಕಾರಿ ಶ್ರವಣ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಾಣಿಕ್ಯ ಇದ್ದರು.