ಶಿಕ್ಷಕರು ವಿದ್ಯಾರ್ಥಿಗಳಿಗೆ ಗಟ್ಟಿ ಬುನಾದಿ ಹಾಕಿದರೆ ಉತ್ತಮ ಫಲಿತಾಂಶ

| Published : Jul 07 2025, 12:34 AM IST

ಶಿಕ್ಷಕರು ವಿದ್ಯಾರ್ಥಿಗಳಿಗೆ ಗಟ್ಟಿ ಬುನಾದಿ ಹಾಕಿದರೆ ಉತ್ತಮ ಫಲಿತಾಂಶ
Share this Article
  • FB
  • TW
  • Linkdin
  • Email

ಸಾರಾಂಶ

ಸಿದ್ದಾಪುರ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಏರ್ಪಡಿಸಿದ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಸರ್ವಸಾಧಾರಣ ಸಭೆಯನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಡಿ.ಆರ್. ನಾಯ್ಕ ಉದ್ಘಾಟಿಸಿದರು.

ಸಿದ್ದಾಪುರ: ತಾಲೂಕು ಪ್ರತಿವರ್ಷವೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುತ್ತಿದ್ದು, ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಬುನಾದಿ ಹಾಕಿಕೊಟ್ಟಾಗ ಇಂತಹ ಸಾಧನೆ ಸಾಧ್ಯವಾಗುತ್ತದೆ ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಡಿ.ಆರ್. ನಾಯ್ಕ ಹೇಳಿದರು. ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಏರ್ಪಡಿಸಿದ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಸರ್ವಸಾಧಾರಣ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಮಾತನಾಡಿ, ನಮ್ಮಲ್ಲಿರುವ ಒಳ್ಳೆಯ ಭಾವನೆಗಳಿಂದ ಎಲ್ಲರ ಮನಸ್ಸನ್ನು ಗೆಲ್ಲಲು ಸಾಧ್ಯ. ಉತ್ತಮ ಶೈಕ್ಷಣಿಕ ವ್ಯವಸ್ಥೆಗೆ ನಾವೆಲ್ಲರೂ ಕಟಿಬದ್ಧರಾಗಿ ಕರ್ತವ್ಯ ನಿರ್ವಹಿಸುವ ಮೂಲಕ ತಾಲೂಕಿನ ಸಾಧನೆಯನ್ನು ಇನ್ನಷ್ಟು ಎತ್ತರಿಸೋಣ ಎಂದರು. ಸಂಘದ ಅಧ್ಯಕ್ಷ ಸತೀಶ ಹೆಗಡೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕಾರ್ಯ ಚಟುವಟಿಕೆ ವಿವರಿಸಿದರು. ಜಿಲ್ಲಾ ಸಂಘದ ಕಾರ್ಯದರ್ಶಿ ಬಾಲಚಂದ್ರ ಪಟಗಾರ, ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ ಕೆ.ಎಂ., ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವಿ. ನಾಯ್ಕ, ಪಿ. ಎಂ. ಪೋಷಣ ಸಹಾಯಕ ನಿರ್ದೇಶಕ ಉದಯ ಮೇಸ್ತ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಂಘದ ವಾರ್ಷಿಕ ಜಮಾ-ಖರ್ಚು ವಿವರ ಸಲ್ಲಿಸಲಾಯಿತು. ನಿವೃತ್ತ ಶಿಕ್ಷಕರು, ಶಿಕ್ಷಕರ ಸಾಧಕ ಮಕ್ಕಳು ಹಾಗೂ ಸಾಧಕ ಶಿಕ್ಷಕರನ್ನು ಅಭಿನಂದಿಸಲಾಯಿತು. ಶಿಕ್ಷಕರೊಂದಿಗೆ ಪ್ರಶ್ನೋತ್ತರ ಮತ್ತು ಸಮಾಲೋಚನೆ ನಡೆಸಲಾಯಿತು.

ನಾಗರಾಜ ಮಡಿವಾಳ ಸ್ವಾಗತಿಸಿದರು. ನಮ್ರತಾ ವಿ. ವಂದಿಸಿದರು. ಕವಿತಾ ಶೇಟ್ ಕಾರ್ಯಕ್ರಮ ನಿರ್ವಹಿಸಿದರು.