ಬಿಜೆಪಿ ಅಭ್ಯರ್ಥಿ ಗೆದ್ದರೆ ಕ್ಷೇತ್ರಕ್ಕೆ ಅನುಕೂಲ

| Published : Apr 24 2024, 02:25 AM IST

ಸಾರಾಂಶ

ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್‌.ಬಾಲರಾಜು ಗೆದ್ದರೆ ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ಅನುಕೂಲವಾಗಲಿದ್ದು, ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದು ಬಿಜೆಪಿ ರೈತ ಮುಖಂಡ ಮಲ್ಲೇಶ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್‌.ಬಾಲರಾಜು ಗೆದ್ದರೆ ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ಅನುಕೂಲವಾಗಲಿದ್ದು, ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದು ಬಿಜೆಪಿ ರೈತ ಮುಖಂಡ ಮಲ್ಲೇಶ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್‌. ಬಾಲರಾಜು ಅವರು ಒಳ್ಳೆಯ ಅಭ್ಯರ್ಥಿಯಾಗಿದ್ದು, ಮಾಜಿ ಸಚಿವ ದಿ.ರಾಜಶೇಖರ್‌ ಅವರ ಶಿಷ್ಯರಾಗಿದ್ದು, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಅರಿತಿದ್ದಾರೆ. ಆದ್ದರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜು ಗೆದ್ದರೆ ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ಅನುಕೂಲವಾಗಲಿದೆ ಎಂದರು.

ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರು ಯಾವ ರೀತಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದೇ ರೀತಿಯಲ್ಲಿ ಚಾಮರಾಜನಗರದಲ್ಲಿ ಎಸ್‌.ಬಾಲರಾಜು ಅವರು ಅಭಿವೃದ್ಧಿ ಕೆಲಸ ಮಾಡಲಿದ್ದಾರೆ ಎಂದರು. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಅಭಿವೃದ್ಧಿ ದೃಷ್ಠಿಯಿಂದ ಮತದಾರರು ಬಿಜೆಪಿ ಪಕ್ಷಕ್ಕೆ ಮತ ಚಲಾಯಿಸಿಬೇಕು. ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಕೊರತೆ ಇದ್ದು, ರಾಹುಲ್‌ ಗಾಂಧಿ ಅವರಿಗೆ ಮಾನಸಿಕ ಪ್ರಭುದ್ಧತೆ ಇಲ್ಲ, ಅನುಭವಿ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದಲ್ಲಿದ್ದರೂ ಅವರನ್ನು ದಲಿತರು ಎಂಬ ಕಾರಣಕ್ಕೆ ಪ್ರಧಾನಿ ಮಾಡಲು ಒಪ್ಪುತ್ತಿಲ್ಲ. ದಲಿತ ಜನಾಂಗದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿದೆ. ಕಾಂಗ್ರೆಸ್‌ ಪಕ್ಷ ದಲಿತರು ಹಾಗೂ ಹಿಂದುಳಿದ ವರ್ಗದ ಪರ ಇಲ್ಲ ಎಂದರು.

ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸಿ ಬಿಜೆಪಿ ಪಕ್ಷಕ್ಕೆ ಮತ ನೀಡುವ ಮೂಲಕ ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿ ಪರ್ವಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನಟರಾಜು, ಶಿವರಾಜ್‌, ಪರಮೇಶ್ವರ, ಸುರೇಶ್‌, ಪ್ರಸಾದ್‌, ಸತೀಶ್‌ ಇದ್ದರು.