ಕಾಂಗ್ರೆಸ್‌ ಸರ್ಕಾರ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಲು ಕ್ರಮ

| Published : May 02 2024, 12:18 AM IST

ಕಾಂಗ್ರೆಸ್‌ ಸರ್ಕಾರ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಲು ಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಕಾಗವಾಡ: ಈ ಬಾರಿ ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಕಾಗವಾಡಈ ಬಾರಿ ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಭರವಸೆ ನೀಡಿದರು.

ಐನಾಪುರ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ನಡೆಸಿ ಮತಯಾಚಿಸಿದ ಅವರು, ಈ ಭಾಗದ ರೈತರ ಮಹತ್ವದ ನೀರಾವರಿ ಯೋಜನೆಯಾದ ಆಲಮಟ್ಟಿ ಜಲಾಶಯದ ಎತ್ತರವನ್ನು 524.6 ಎತ್ತರಿಸಿ ನೀರಾವರಿಗೆ ಆದ್ಯತೆ ನೀಡಬೇಕಿತ್ತು. ಆದರೆ, ಆಲಮಟ್ಟಿ ವ್ಯಾಪ್ತಿಯ ಮೂರು ಸಂಸದರು ಕಳೆದ 10 ವರ್ಷಗಳ ಅವಧಿಯಲ್ಲಿ ಒಂದು ಬಾರಿಯೂ ಅಧಿವೇಶನದಲ್ಲಿ ಚರ್ಚಿಸಲೇ ಇಲ್ಲ. ಇದರಿಂದ ಬೇಸಿಗೆ ಅವಧಿಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಕೊರತೆಯುಂಟಾಗಿ ಕುಡಿಯುವ ನೀರಿಗೆ ಮತ್ತು ಕೃಷಿಗೆ ನೀರಿನ ಅಭಾವ ಉಂಟಾಗುತ್ತಿದೆ ಎಂದು ಆರೋಪಿಸಿದರು.

ಕೇಂದ್ರದ ಮೋದಿ ಸರ್ಕಾರ ಕೃಷಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಅಲ್ಲದೇ ರಸಗೊಬ್ಬರಗಳ ದರಗಳನ್ನು ಕೂಡ ಹೆಚ್ಚಿಸಿದ್ದಾರೆ. ಹೀಗಾಗಿ ಕೃಷಿ ಸಂಕಷ್ಟಕ್ಕಿಡಾಗಿದೆ. ಆದರೂ ರೈತರ ಆದಾಯ ದ್ವಿಗುಣಗೊಳಿಸುತ್ತೇವೆಂದು ಕಳೆದ 10 ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿಗೊಳಿಸಿದ್ದೇವೆಂದು ಹೇಳುತ್ತಿದ್ದಾರೆ. ಆದರೆ, ಸಾಮಾನ್ಯ ಜನರಿಂದ ನೂರಾರು ಕೋಟಿ ಹಣವನ್ನು ಟೋಲ್ ಮೂಲಕ ದರೋಡೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನಾವು ಪಂಚ ಗ್ಯಾರಂಟಿಗಳ್ನು ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ. ದೇಶದಲ್ಲಿ 10 ವರ್ಷ ಆಡಳಿತ ಮಾಡಿದ ಬಿಜೆಪಿ ನೀರಾವರಿ, ಕೃಷಿ, ಕೈಗಾರಿಕೆ ಸೇರಿದಂತೆ ಯಾವ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಮಾಡಿಲ್ಲ. ಇದರ ಪರಿಣಾಮ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ ಮತ್ತು ನಿರುದ್ಯೋಗದ ಪ್ರಮಾಣ ಉಲ್ಬಣಿಸಿದೆ ಎಂದು ದೂರಿದರು.

ಲೋಕಸಭಾ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ದೇಶದ ಅಭಿವೃದ್ಧಿಗೆ ಬದಲಾವಣೆ ಅವಶ್ಯವಾಗಿದೆ. ಅದಕ್ಕಾಗಿ Sunflower ನನಗೆ ಒಂದು ನಿಮ್ಮ ಸೇವೆ ಮಾಡಲು ಅವಕಾಶ ಕೊಡುವಂತೆ ಮನವಿ ಮಾಡಿದರು.

ಈ ವೇಳೆ ಬ್ಲಾಕ್‌ ಅಧ್ಯಕ್ಷ ವಿಜಯ ಅಕಿವಾಟೆ, ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಪುಂಜಪ್ಪಗೊಳ, ಪಟ್ಟಣ ಪಂಚಾಯತಿ ಸದಸ್ಯರಾದ ಪ್ರವೀಣ ಗಾಣಿಗೇರ, ಅರುಣ ಗಾಣಿಗೇರ, ಸಂಜಯ ಬಿರಡಿ, ಸಂಜಯ ಕುಚನೂರೆ, ದಿಗ್ವಿಜಯ ಪವಾರ, ಸುಭಾಸ ಪಾಟೀಲ, ಚಮನರಾವ ಪಾಟೀಲ, ವಿಶ್ವನಾಥ ಪಾಟೀಲ, ರಾಜು ಮದನೆ, ಬಾಹುಬಲಿ ಕುಸನಾಳೆ, ಸುರೇಶ ಗಾಣಿಗೇರ, ಪ್ರಕಾಶ ಗಾಣಿಗೇರ, ಪ್ರಕಾಶ ಚಿನಗಿ, ಅರವಿಂದ ಕಾರ್ಚಿ, ಗುರುರಾಜ ಮಡಿವಾಳರ, ವಿಶ್ವನಾಥ ನಾಮದಾರ, ಸಹದೇವ ನಾಯಿಕ ಸೇರಿದಂತೆ ಅನೇಕರು ಇದ್ದರು.ಕಾಂಗ್ರೆಸ್‌ಗೆ ಸೇರ್ಪಡೆ:

ಬಿಜೆಪಿ ಬಿಟ್ಟು ಶಾಸಕ ರಾಜು ಕಾಗೆ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಕೃಷ್ಣಾ ಕಿತ್ತೂರ ಗ್ರಾಮದ ಅಶೋಕ ಇಚಲಕರಂಜಿ, ಮಲ್ಲಿಕಾರ್ಜುನ ಸತ್ತಿಕರ, ಆದರ್ಶ ಇಚಲಕರಂಜಿ, ಮಾರುತಿ ಜಂಬಗಿ, ಸಿದ್ದು ಇಚಲಕರಂಜಿ, ಸಚಿನ ತೊರವಿ, ಮಲ್ಲು ಸಾವಂತ್ರಿ, ಸದಾಶಿವ ಇಚಲಕರಂಜಿ, ಮಹಾದೇವ ಮುಧೋಳ, ರಮೇಶ ಇಚಲಕರಂಜಿ ಸೇರಿದಂತೆ ಅನೇಕರು ಕಾಂಗ್ರೆಸ್ ಸೇರ್ಪಡೆಗೊಂಡರು.ಕೋಟ್‌...

ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಈ ಸಂಬಂಧ ಬಿಜೆಪಿಯ ಅನೇಕ ಸಂಸದರು, ಮುಖಂಡರು ಕೂಡ ವಿರೋಧಿಸಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಜಾತೀಯ ವಿಷ ಬೀಜ ಬಿತ್ತಿ ಬಿಜೆಪಿ ಲಾಭ ಮಾಡಿಕೊಳ್ಳುತ್ತಿದ್ದು, ಈ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು.

-ರಾಜು ಕಾಗೆ, ಶಾಸಕ.