ಗ್ಯಾರಂಟಿ ನಿಲ್ಲಿಸಿದರೆ ಜನರೇ ಬಡಿಗೆ ತೆಗೆದುಕೊಂಡು ಬಡಿಯುತ್ತಾರೆ‌

| Published : Apr 22 2024, 02:04 AM IST

ಸಾರಾಂಶ

ಚುನಾವಣೆ ಮುಗಿದ ಮೇಲೆ ನಲಪಾಡ್ ಹಾಗೂ ಕಾಂಗ್ರೆಸ್ ನಾಯಕರಿಗೆ ಅದೇ ಪರಿಸ್ಥಿತಿ ಬರಲಿದೆ. ಫಲಿತಾಂಶ ಬಂದ ನಂತರ ಅವರು ಚೊಂಬು ಹಿಡಿದುಕೊಂಡು ಹೋಗುವ ಸ್ಥಿತಿ ಬರುತ್ತದೆ ಎಂದು ತಿರುಗೇಟು

ಕನ್ನಡಪ್ರಭ ವಾರ್ತೆ ಮೈಸೂರು

ಗ್ಯಾರಂಟಿ ನಿಲ್ಲಿಸಿದರೆ ಜನರೇ ಬಡಿಗೆ ತೆಗೆದುಕೊಂಡು ಸರ್ಕಾರವನ್ನ ಬಡಿಯುತ್ತಾರೆ‌ ಎಚ್ಚರವಿರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಹೆಸರು ಹೇಳಿಕೊಂಡ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಾನು ಕೇಳುತ್ತಿರುವುದು ಈ ಸರ್ಕಾರದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಹೇಳಿ? ಒಂದೇ ಒಂದು ನಯಾ ಪೈಸೆ ಬಿಡುಗಡೆಯಾಗಿದ್ಯಾ ಎಂದು ಪ್ರಶ್ನಿಸಿದರು.

ಚೊಂಬು ಪ್ರದರ್ಶನಕ್ಕೆ ತಿರುಗೇಟು

ಮೋದಿ ರಾಜ್ಯ ಭೇಟಿ ವೇಳೆ ರಸ್ತೆಗಿಳಿದು ನಲಪಾಡ್ ಚೊಂಬು ಪ್ರದರ್ಶನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಮುಗಿದ ಮೇಲೆ ನಲಪಾಡ್ ಹಾಗೂ ಕಾಂಗ್ರೆಸ್ ನಾಯಕರಿಗೆ ಅದೇ ಪರಿಸ್ಥಿತಿ ಬರಲಿದೆ. ಫಲಿತಾಂಶ ಬಂದ ನಂತರ ಅವರು ಚೊಂಬು ಹಿಡಿದುಕೊಂಡು ಹೋಗುವ ಸ್ಥಿತಿ ಬರುತ್ತದೆ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಜಾಹೀರಾತು, ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಅವರು ಏನಾದರೂ ಜಾಹೀರಾತು ಕೊಟ್ಟಿಕೊಳ್ಳಲಿ. ಈ ಬಾರಿ ಜನ ಮತ್ತೆ ಮೋದಿ ಅವರನ್ನು ಪ್ರಧಾನಿ‌ಮಾಡುತ್ತಾರೆ ಎಂದರು.

ರೈತ ಸಾಲ ಮನ್ನಾ ಹಾಗೂ ಕಾಂಗ್ರೆಸ್ ಹೊಸ ಗ್ಯಾರಂಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಯಾವುದನ್ನು ಪೂರೈಸಲ್ಲ. ಅವರು ಅಧಿಕಾರಕ್ಕೆ ಬಂದರೆ ತಾನೇ ಮಾಡುವುದು. ದೇಶದಲ್ಲಿ ಕಾಂಗ್ರೆಸ್ 50 ಸೀಟ್ ಸಹ ದಾಟಲ್ಲ. ಹೀಗಾಗಿ, ಪ್ರಣಾಳಿಕೆ ಗ್ಯಾರಂಟಿ ಯಾವುದು ಜಾರಿಯಾಗಲ್ಲ ಎಂದು ಅವರು ತಿಳಿಸಿದರು.