ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿ ಕೋಲ್ ಮಂದ್‌ನ ಅಭಿವೃದ್ಧಿಗೆ ಶ್ರಮಿಸಿರುವುದು ಶ್ಲಾಘನೀಯ. ಜಿಲ್ಲೆಯ ಎಲ್ಲ ಕೊಡವ ಸಮಾಜಗಳು ತಮ್ಮ ವ್ಯಾಪ್ತಿಯ ಮಂದ್‌ಗಳ ಅಭಿವೃದ್ಧಿಗೆ ಮುಂದಾಗಬೇಕು. ಜನಾಂಗದ ಭಾಷೆ ಉಳಿದರೆ ಮಾತ್ರ ಜನಾಂಗದ ಅಸ್ತಿತ್ವ ಉಳಿಯಲು ಸಾಧ್ಯ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಹೇಳಿದರು.

ಮಡಿಕೇರಿ : ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿ ಕೋಲ್ ಮಂದ್‌ನ ಅಭಿವೃದ್ಧಿಗೆ ಶ್ರಮಿಸಿರುವುದು ಶ್ಲಾಘನೀಯ. ಜಿಲ್ಲೆಯ ಎಲ್ಲ ಕೊಡವ ಸಮಾಜಗಳು ತಮ್ಮ ವ್ಯಾಪ್ತಿಯ ಮಂದ್‌ಗಳ ಅಭಿವೃದ್ಧಿಗೆ ಮುಂದಾಗಬೇಕು. ಜನಾಂಗದ ಭಾಷೆ ಉಳಿದರೆ ಮಾತ್ರ ಜನಾಂಗದ ಅಸ್ತಿತ್ವ ಉಳಿಯಲು ಸಾಧ್ಯ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಹೇಳಿದರು.

ಅವರು ಮಡಿಕೇರಿಯ ಜನರಲ್ ತಿಮ್ಮಯ್ಯ ಮೈದಾನ ಸಮೀಪ ನವೀಕರಣಗೊಂಡ ಕೋಲ್ ಮಂದ್‌ನ ಉದ್ಘಾಟಿಸಿ ಮಾತನಾಡಿದರು.

ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಮಾತನಾಡಿ, ಕೊಡಗಿನ ಮೂಲ ಜನಾಂಗವಾದ ಕೊಡವರ ಮೂಲ ನೆಲೆ ಮಂದ್‌ಗಳಾಗಿವೆ. ವಿಶೇಷ ಆಚಾರ-ವಿಚಾರ, ಸಂಪ್ರದಾಯಗಳ ನೆಲೆಯಾಗಿರುವ ಮಂದ್‌ಗಳ ಪಾವಿತ್ರ್ಯ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಇತಿಹಾಸ ಮತ್ತು ಸಂಸ್ಕೃತಿಯನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು. ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಮಾತನಾಡಿ, ಕೊಡವ ಸಂಸ್ಕೃತಿ, ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಒಂದಾಗಬೇಕು. ಕೊಡವರ ವಿಶಿಷ್ಟ ಪರಂಪರೆ ಯಾದ ಮಂದ್ ಮಾನಿಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು ಎಂದು ಕರೆ ನೀಡಿದರು.ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ. ಮುತ್ತಪ್ಪ, ಕೊಡವ ನ್ಯಾಷನಲ್ ಸಂಘಟನೆಯ ಸಂಚಾಲಕ ನಾಚಪ್ಪ, ಯುಕೋ ಸಂಘಟನೆಯ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಮಾತನಾಡಿದರು. ಕೋಲ್ ಮಂದ್‌ನ ಅಭಿವೃದ್ಧಿ ಕಾರ್ಯದಲ್ಲಿ ವಿಶೇಷವಾಗಿ ಶ್ರಮಿಸಿದ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಶಾಂತೆಯಂಡ ವಿಶಾಲ್ ಕಾರ್ಯಪ್ಪ ಅವರನ್ನು ಗೌರವಿಸಲಾಯಿತು. ನಿರ್ದೇಶಕಿ ಕನ್ನಡ ಕವಿತ ಬೊಳ್ಳಪ್ಪ ಸನ್ಮಾನಿತರ ಪರಿಚಯ ಮಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ, ಕೊಡವ ಏಕೀಕರಣ ರಂಗದ ಅಜ್ಜಿನಂಡ ತಮ್ಮು ಪೂವಯ್ಯ, ತಲಕಾವೇರಿ ಕೊಡವ ಅಮ್ಮಕೊಡವ ಟ್ರಸ್ಟ್ ಅಧ್ಯಕ್ಷ ಮುದ್ದಂಡ ಬಿ. ದೇವಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮತ್ತಿತರರಿದ್ದರು.