ಸಾರಾಂಶ
ಕನ್ನಡಪ್ರಭ ವಾರ್ತೆ ಬಂಟ್ವಾಳ
ದೇಶ ಬಲಿಷ್ಟವಾಗಬೇಕಾದರೆ ವಿದ್ಯಾರ್ಥಿ ಸಮೂಹ ಬಲಿಷ್ಟವಾಗಬೇಕು ಎಂದು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.ಮಾಣಿ ಸೋಶಿಯಲ್ ಇಖ್ವಾ ಫೆಡರೇಶನ್‌ನ ಇಖ್ವಾ ಎಜುಕೇಶನಲ್ ರಿಸರ್ಚ್ ಆ್ಯಂಡ್ ಡೆವಲಪ್ಮೆಂಟ್ ಸೆಂಟರ್ ಕಚೇರಿ ಉದ್ಘಾಟನೆಯ ಬಳಿಕ ನೇರಳಕಟ್ಟೆಯ ಇಂಡಿಯನ್ ಆಡಿಟೋರಿಯಂನಲ್ಲಿ ನಡೆದ ಸನ್ಮಾನ ಹಾಗೂ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಎಸ್. ಮುಹಮ್ಮದ್, ಮುಸ್ಲಿಂ ಸೆಂಟ್ರಲ್ ಕಮಿಟಿ ಸದಸ್ಯ ಹನೀಫ್ ಖಾನ್ ಕೊಡಾಜೆ, ಸಾಮಾಜಿಕ ಹೋರಾಟಗಾರ್ತಿ ನಜ್ಮಾ ಚಿಕ್ಕನೇರಳೆ, ಅಜಿಲಮೊಗರು ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಬಿ. ಅಬ್ದುಲ್ ಹಮೀದ್, ಬರಾಕ ಇಂಟರ್ ನ್ಯಾಷನಲ್ ಸ್ಕೂಲ್ ಚೇರ್ಮನ್ ಮೊಹಮ್ಮದ್ ಅಶ್ರಫ್, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲು, ಬೆಂಗಳೂರು ಬ್ಯಾರೀಸ್ ಸೆಂಟ್ರಲ್ ಕಮಿಟಿ ಅಧ್ಯಕ್ಷ ಶಬೀರ್ ಬ್ರಿಗೇಡ್, ದ.ಕ.ಮಸ್ಲಿಂ ಜಸ್ಟಿಸ್ ಫಾರಂ ಅದ್ಯಕ್ಷ ಇರ್ಷಾದ್ ಯು.ಟಿ., ಉಮರ್ ಹಾಜಿ ರಾಜ್ ಕಮಲ್, ಹಾಜಿ ಅಹಮದ್ ಖಾನ್ ಕೊಡಾಜೆ, ಹಾಜಿ ಮೊಹಮ್ಮದ್ ರಫೀಕ್ ಸುಲ್ತಾನ್, ಪತ್ರಕರ್ತ ಲತೀಫ್ ನೇರಳಕಟ್ಟೆ, ದ.ಕ. ಜಿಲ್ಲಾ ಮದರಸ ಮ್ಯಾನೇಜ್ಮೈಂಟ್ ಕಾರ್ಯದರ್ಶಿ ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ ಅತಿಥಿಗಳಾಗಿ ಭಾಗವಹಿಸಿದ್ದರು. ವಿವಿಧ ಮಸೀದಿ ಅಧ್ಯಕ್ಷರು ಉಪಸ್ಥಿತರಿದ್ಧರು.ಇದೇ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಹೈಕೋರ್ಟ್ ವಕೀಲ ಮುಝಫರ್ ಅಹ್ಮದ್, ಯುವ ಉದ್ಯಮಿ ಅಬ್ದುಲ್ ಲತೀಫ್ ಗುರುಪುರ, ಇಖ್ವಾ ಆಂಬುಲೆನ್ಸ್ ಚಾಲಕ ಸಂಶೀರ್ ಶೇರಾ ಅವರನ್ನು ಸನ್ಮಾನಿಸಲಾಯಿತು.ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ತಮೀಮ್ ಕೆ., ಯುಪಿಎಸ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಶಬೀರ್ ಪಾಟ್ರಕೋಡಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಸೋಶಿಯಲ್ ಇಖ್ವಾ ಫೆಡರೇಶನ್ ಅಧ್ಯಕ್ಷ ಅಬ್ದುಲ್ ರಹೀಂ ಸುಲ್ತಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಜೈನುಲ್ ಅಕ್ಬರ್ ಕಡೇಶ್ವಾಲ್ಯ ಪ್ರಸ್ತಾವನೆಗೈದು ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ನವಾಝ್ ಭಗವಂತಕೋಡಿ ವಂದಿಸಿದರು. ಅಬ್ದುಲ್ ಅಝೀಝ್ ಗಡಿಯಾರ ಕಾರ್ಯಕ್ರಮ ನಿರೂಪಿಸಿದರು.