ಸಾರಾಂಶ
ಕನಕಪುರ: ಆಧುನಿಕ ಸಮಾಜದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾದಕರ ಸಂಗತಿ ಎಂದು ಕನಕಪುರ ನ್ಯಾಯಾಲಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಹೆಚ್.ಎನ್.ಕುಮಾರ್ ತಿಳಿಸಿದರು.
ಕನಕಪುರ: ಆಧುನಿಕ ಸಮಾಜದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾದಕರ ಸಂಗತಿ ಎಂದು ಕನಕಪುರ ನ್ಯಾಯಾಲಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಹೆಚ್.ಎನ್.ಕುಮಾರ್ ತಿಳಿಸಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶವನ್ನು ತಂಬಾಕು ಮುಕ್ತ ಮಾಡಲು ಜನತೆಯಲ್ಲಿ ತಂಬಾಕು ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.ದೇಶಾದ್ಯಂತ ಪ್ರತಿ ವರ್ಷ ಲಕ್ಷಾಂತರ ಜನರು ತಂಬಾಕು ಚಟಕ್ಕೆ ಬಲಿಯಾಗುತ್ತಿದ್ದು ಇದರ ವಿರುದ್ಧ ಸಂಘ-ಸಂಸ್ಥೆ ಗಳು, ಎನ್‌ಜಿಒಗಳು ಕೈ ಜೋಡಿಸಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜನತೆಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಸರ್ಕಾರಗಳು ಮಾಡಬೇಕಾಗಿದೆ. ಸಮಾಜದಲ್ಲಿ ಕೂಲಿ ಕಾರ್ಮಿಕರು, ರೈತರು, ಯುವಕರು ಈ ಚಟಕ್ಕೆ ಬಿದ್ದು ಅನಾರೋಗ್ಯಕ್ಕೆ ಬಲಿಯಾಗುತ್ತಿದ್ದಾರೆ. ಇದರ ಜೊತೆಗೆ ತಂಬಾಕು ಪದಾರ್ಥಗಳಿಂದ ಪ್ರಾಣಿ, ಪಕ್ಷಿಗಳಿಗೂ ತೊಂದರೆಯಾಗುವುದರ ಜೊತೆಗೆ ಪರಿಸರದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಸರ್ಕಾರಗಳು ಇದರ ಕಡೆಗೆ ಹೆಚ್ಚಿನ ಮಹತ್ವ ನೀಡಿ ಜನರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎ.ಸಿ.ಚನ್ನೇಗೌಡ, ನ್ಯಾಯಾಧೀಶರಾದ ಕೆ.ಎ.ನಾಗೇಶ್, ಸುರೇಶ್ ಅಣ್ಣಪ್ಪ ಸವದಿ, ಎಸ್.ರಾಧಾ, ಸವಿತಾ ರುದ್ರೇಗೌಡ ಚಿಕ್ಕನ್ ಗೌಡರ್, ಕು.ವಿ.ಪಾರ್ವತಿ, ನಗರಸಭೆ ಆಯುಕ್ತ ಮಹದೇವ್, ತಾಲೂಕು ವೈದ್ಯಾಧಿಕಾರಿ ರಾಜು, ಸರ್ಕಾರಿ ಅಭಿಯೋಜಕ ಮಮತಾ ಬಿ.ಕೆ.ಗಂಗಾಧರ, ವಕೀಲರ ಸಂಘದ ಉಪಾಧ್ಯಕ್ಷ ಸಿದ್ದಾರ್ಥ್, ಕಾರ್ಯದರ್ಶಿ ನಾರಾಯಣ್, ಖಜಾಂಚಿ ಟಿ.ಎಸ್.ಸಾಗರ್, ಹಿರಿಯ ವಕೀಲರಾದ ರಾಮಚಂದ್ರ, ಕೆ.ಸಿ.ಗೋಪಾಲಗೌಡ, ಕಾಮೇಶ್, ಬಿ.ನಂದೀಶ್ ಕುಮಾರ್, ಆಶಾ ಕಾರ್ಯಕರ್ತೆಯರು, ವಕೀಲರು ಹಾಗೂ ಸರ್ಕಾರಿ ಇಲಾಖೆ ಸಿಬ್ಬಂದಿ ಹಾಜರಿದ್ದರು. ಕೆ ಕೆ ಪಿ ಸುದ್ದಿ 01:ಕನಕಪುರದ ಜೆಎಂಎಫ್ ನ್ಯಾಯಾಲಯದ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.