ಸಾರಾಂಶ
ಕೆರೆ, ಕಟ್ಟೆ, ಬಾವಿ ನದಿ ಸೇರಿದಂತೆ ಇನ್ನಿತರ ಜಲಮೂಲಗಳನ್ನು ಉಳಿಸುವ ಮೂಲಕ ಮುಂದಿನ ತಲೆಮಾರಿಗೆ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿನೀರಿಗೆ ಸಾಕಷ್ಟು ಸಮಸ್ಯೆ ಉಂಟಾಗಲಿದೆ. ಜಲ ಮೂಲಗಳನ್ನು ಉಳಿಸದಿದ್ದರೆ ಭವಿಷ್ಯದಲ್ಲಿ ನೀರಿಗೆ ಸಾಕಷ್ಟು ತತ್ವಾರ ಉಂಟಾಗಲಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಜಲ ಮೂಲಗಳನ್ನು ಉಳಿಸದಿದ್ದರೆ ಭವಿಷ್ಯದಲ್ಲಿ ನೀರಿಗೆ ಸಾಕಷ್ಟು ತತ್ವಾರ ಉಂಟಾಗಲಿದೆ. ಈ ನಿಟ್ಟಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆಗಳ ಅಭಿವೃದ್ಧಿಗೆ ಮುಂದಾಗಿರುವುದು ಪ್ರಶಂಸನೀಯ ಎಂದು ಕೆಂಗೇರಿ ವಿಶ್ವಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಿಶ್ಚಲಾನಂದನಾಥ ಸ್ವಾಮಿಜಿ ಮೆಚ್ಚುಗೆ ವ್ಯಕ್ತಪಡಿಸಿದರು.ತಾಲೂಕಿನ ಮರಳಿಗ ಗ್ರಾಪಂ ವ್ಯಾಪ್ತಿಗೆ ಸೇರಿದ ಮರಳಿಗ ಕೆರೆ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಕೆರೆ ಹಸ್ತಾಂತರ ಹಾಗೂ ನಾಮಫಲಕ ಅನಾವರಣಗೊಳಿಸಿ ಮಾತನಾಡಿ, ಕೆರೆ, ಕಟ್ಟೆ, ಬಾವಿ ನದಿ ಸೇರಿದಂತೆ ಇನ್ನಿತರ ಜಲಮೂಲಗಳನ್ನು ಉಳಿಸುವ ಮೂಲಕ ಮುಂದಿನ ತಲೆಮಾರಿಗೆ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿನೀರಿಗೆ ಸಾಕಷ್ಟು ಸಮಸ್ಯೆ ಉಂಟಾಗಲಿದೆ ಎಂದು ಕಳವಳ ವ್ಯಕ್ತಡಿಸಿದರು.
ಯುವ ಮುಖಂಡ ಸಚಿನ್ ಚಲುವರಾಯಸ್ವಾಮಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮದಿಂದಾಗಿ ಬಡ ಹಾಗೂ ಹಳ್ಳಿ ರೈತ ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.ವಕೀಲ ಜಿ.ಸತ್ಯಪ್ಪ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳದ ನಮ್ಮೂರು ನಮ್ಮ ಕೆರೆ ಯೋಜನೆಯಿಂದ ಬಹಳ ವರ್ಷಗಳಿಂದ ಹೂಳು ತುಂಬಿಕೊಂಡು ಬರಿದಾಗಿದ್ದ ಕೆರೆಯನ್ನು ಹೂಳೆತ್ತುವ ಮುಖಾಂತರ ಈ ವರ್ಷ ನೀರು ತುಂಬಿರುವುದು ಸಂತೋಷದ ವಿಷಯ ಎಂದರು.
ಈ ವೇಳೆ ಸಂಘದ ಜಿಲ್ಲಾ ನಿರ್ದೇಶಕಿ ಚೇತನ, ತಾಲೂಕು ಯೋಜನಾಧಿಕಾರಿ ಬಿ.ಆರ್.ಯೋಗೇಶ್, ಗ್ರಾಪಂ ಅಧ್ಯಕ್ಷೆ ಸುನಿತಾ ಶ್ರೀನಿವಾಸ್, ಉಪಾಧ್ಯಕ್ಷ ಸಿದ್ದಲಿಂಗಯ್ಯ, ಮರಳಿಗ ಕೆರೆ ಸಮಿತಿ ಗೌರವ ಅಧ್ಯಕ್ಷ ಯೋಗಾನಂದ, ಮುಖಂಡರಾದ ಹಾಲಪ್ಪ, ಪುಷ್ಪರಾಜ್, ಸ್ವಾಮಿ, ಲಕ್ಷ್ಮಣ್ ಇದ್ದರು.ಬಿಜಿಎಸ್ ಪಬ್ಲಿಕ್ ಶಾಲೆಗೆ ಶೇ.100 ರಷ್ಟು ಫಲಿತಾಂಶ
ಕೆ.ಆರ್.ಪೇಟೆ: ತಾಲೂಕಿನ ಹೇಮಗಿರಿ ಬಿಜಿಎಸ್ ಪಬ್ಲಿಕ್ ಶಾಲೆ 10ನೇ ತರಗತಿ ಐಸಿಎಸ್‌ಇ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿದೆ. ಸಂಸ್ಥೆ 17 ವಿದ್ಯಾರ್ಥಿಗಳು 5 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ, 12 ಮಂದಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಕೆ.ಎಂ.ಸುಹಾನ್ ಶೇ.94, ಎಂ.ಸೋಹನ್ ಶೇ.92, ಬಿ.ಬಿ.ದೀಕ್ಷಿತಾ ಶೇ.90, ಬಿ.ಡಿ.ಅಂಕಿತ ಶೇ.88 ಮತ್ತು ಹಿತನ್ ಪಿ.ಗೌಡ ಶೇ.85 ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಕಳೆದ 5 ವರ್ಷಗಳ ಹಿಂದಿನಿಂದಲೂ ಸಂಸ್ಥೆ ಐಸಿಎಸ್‌ಸಿ ಪರೀಕ್ಷೆಯಲ್ಲಿ ಸತತವಾಗಿ ಶೇ.100 ಫಲಿತಾಂಶ ಪಡೆಯುತ್ತಿದೆ. ಉತ್ತಮ ಫಲಿತಾಂಶ ತಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದವನ್ನು ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಅಭಿನಂದಿಸಿದ್ದಾರೆ.