ಮಹಿಳೆಯರು ಆರೋಗ್ಯವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ: ರಮೇಶ್‌ ಬಂಡಿಸಿದ್ದೇಗೌಡ

| Published : Oct 26 2025, 02:00 AM IST

ಮಹಿಳೆಯರು ಆರೋಗ್ಯವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ: ರಮೇಶ್‌ ಬಂಡಿಸಿದ್ದೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರ ಮಹಿಳೆಯರಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಮಾಸಿಕ ಋತು ಸಮಯದಲ್ಲಿ ಒಂದು ದಿನ ರಜೆಯನ್ನು ಕೂಡ ಜಾರಿಗೆ ತಂದಿದೆ. ಆದ್ದರಿಂದ ಇಂತಹ ಜನಪರ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಮಹಿಳೆಯರು ಆರೋಗ್ಯ ಕಡೆ ಹೆಚ್ಚು ಗಮನ ಹರಿಸಿದರೆ ಇಡೀ ಕುಟುಂಬವೇ ಆರೋಗ್ಯಕರವಾಗಿರುತ್ತದೆ ಎಂದು ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದರು.

ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಮುಟ್ಟಿನ ಕಪ್ ಬಳಕೆ ಕುರಿತು ಮಾಸ್ಟರ್ ಟ್ರೈನರ್ ಗಳಿಗೆ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಸರ್ಕಾರ ಮಹಿಳೆಯರಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಮಾಸಿಕ ಋತು ಸಮಯದಲ್ಲಿ ಒಂದು ದಿನ ರಜೆಯನ್ನು ಕೂಡ ಜಾರಿಗೆ ತಂದಿದೆ. ಆದ್ದರಿಂದ ಇಂತಹ ಜನಪರ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

ಇದಕ್ಕೂ ಮುನ್ನ ತಹಸೀಲ್ದಾರ್ ಚೇತನಾ ಯಾದವ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ನಂತರ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಎಂ.ಸವಿತಾ ತರಬೇತಿ ನೀಡಿ, ಮುಟ್ಟಿನ ಕಪ್ ಬಳಸುವ ಮಹಿಳೆಯರು ಮುಜುಗರ ಪಡುವುದು ಬೇಡ ಎಂದು ಸಮಗ್ರ ತರಬೇತಿ ನೀಡಿದರು.

ಕಾರ್ಯಾಗಾರದಲ್ಲಿ ತಾಪಂ ಇಒ ವೇಣು ಎ.ಬಿ., ತಾಲೂಕು ಆರೋಗ್ಯ ಅಧಿಕಾರಿ ಡಾ.ಗಣೇಶ್ ಪ್ರಸಾದ್, ಸಮಾಜ ಕಲ್ಯಾಣ ಅಧಿಕಾರಿ ಪ್ರೀತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ವೇಣುಗೋಪಾಲ್, ತಾಲೂಕು ಯೋಜನಾಧಿಕಾರಿ ತ್ರಿವೇಣಿ ಎಂ.ಎಂ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಜಿ.ಬಿ.ಹೇಮಂತ್ ಹಾಗೂ ಶಾಲಾ ಶಿಕ್ಷಕರು, ಅಂಗನವಾಡಿ ಮೇಲ್ವಿಚಾರಕರು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಎನ್‌ಆರ್‌ಎಲ್‌ಎಂ ಪದಾಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.

ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿಗೆ ಸಾಲು ಮರದ ನಾಗರಾಜು ಆಯ್ಕೆ

ಮಳವಳ್ಳಿ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸುವರ್ಣ ಮಹೋತ್ಸವದ ಅಂಗವಾಗಿ ನೀಡುತ್ತಿರುವ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿಗೆ ಪಟ್ಟಣದ ಪರಿಸರ ಪ್ರೇಮಿ ಸಾಲು ಮರದ ನಾಗರಾಜು ಆಯ್ಕೆಯಾಗಿದ್ದಾರೆ.

ಅ.28ರಂದು ಮಂಡ್ಯ ವಿಶ್ವವಿದ್ಯಾನಿಲಯದ ಮೈದಾನದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಸ್ಥಾಪನೆಗೊಂಡು 50 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ನರೆವೇರಲಿದೆ.

ತಾಲೂಕಿನಾಧ್ಯಂತ ಕಳೆದ 2 ದಶಕಗಳಿಂದ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸುತ್ತಿರುವುದರ ಜೊತೆಗೆ ಹಲವು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿರುವ ಸಾಲು ಮರದ ನಾಗರಾಜು ಅವರಿಗೆ ಪ್ರಗತಿಪರ ಸಂಘಟನೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.