ಅಧಿಕಾರಿಗಳು ಲಂಚ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಿ: ಎಸ್.ಪಿ.ಕೌಲಾಪುರೆ

| Published : Nov 14 2025, 03:15 AM IST

ಅಧಿಕಾರಿಗಳು ಲಂಚ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಿ: ಎಸ್.ಪಿ.ಕೌಲಾಪುರೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕರು ಸರ್ಕಾರಿ ಇಲಾಖೆಗಳ ಕೆಲಸಗಳನ್ನು ಮಾಡಿಸಿಕೊಳ್ಳುವಾಗ ಅಥವಾ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಾಗ ಯಾವುದೇ ಸರ್ಕಾರಿ ನೌಕರರು ಸಾರ್ವಜನಿಕರಿಂದ ಯಾವುದೇ ರೀತಿಯ ಬೇಡಿಕೆಗಳನ್ನು ಇಟ್ಟರೆ ಸಾರ್ವಜನಿಕರು ನೇರವಾಗಿ ಲೋಕಾಯುಕ್ತ ಇಲಾಖೆಗೆ ಬಂದು ದೂರು ನೀಡಬಹುದು ಎಂದು ಲೋಕಾಯುಕ್ತ ಎಸ್.ಪಿ. ಎಸ್.ಎಂ.ಕೌಲಾಪುರೆ ಹೇಳಿದ್ದಾರೆ.

ಚನ್ನಗಿರಿ: ಸಾರ್ವಜನಿಕರು ಸರ್ಕಾರಿ ಇಲಾಖೆಗಳ ಕೆಲಸಗಳನ್ನು ಮಾಡಿಸಿಕೊಳ್ಳುವಾಗ ಅಥವಾ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಾಗ ಯಾವುದೇ ಸರ್ಕಾರಿ ನೌಕರರು ಸಾರ್ವಜನಿಕರಿಂದ ಯಾವುದೇ ರೀತಿಯ ಬೇಡಿಕೆಗಳನ್ನು ಇಟ್ಟರೆ ಸಾರ್ವಜನಿಕರು ನೇರವಾಗಿ ಲೋಕಾಯುಕ್ತ ಇಲಾಖೆಗೆ ಬಂದು ದೂರು ನೀಡಬಹುದು ಎಂದು ಲೋಕಾಯುಕ್ತ ಎಸ್.ಪಿ. ಎಸ್.ಎಂ.ಕೌಲಾಪುರೆ ಹೇಳಿದರು.

ಬುಧುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿಕೊಂಡು ಮಾತನಾಡಿದ ಅವರು, ಸಾರ್ವಜನಿಕರಿಗೆ ನ್ಯಾಯ ಮತ್ತು ಭ್ರಷ್ಟಾಚಾರ ನಿರ್ಮೂಲನೆ ನಮ್ಮ ಇಲಾಖೆ ಜವಾಬ್ದಾರಿಯಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.

ಚನ್ನಗಿರಿ ತಾಲೂಕಿನ ವಿವಿಧ ಭಾಗಗಳಿಂದ 11 ದೂರುಗಳು ಸಲ್ಲಿಕೆಯಾಗಿದ್ದು, ಎಲ್ಲ ದೂರುಗಳು ಜಮೀನುಗಳಿಗೆ ಸಂಬಂಧಿಸಿದವಾಗಿವೆ. ಇವುಗಳಲ್ಲಿ 6 ದೂರುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗಿದ್ದು, ಇನ್ನುಳಿದ 5 ದೂರುಗಳನ್ನು ಇತ್ಯರ್ಥಪಡಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ನ್ಯಾಯಾಲಯದಲ್ಲಿ ಇರುವ ವ್ಯಾಜ್ಯಗಳನ್ನು ಲೋಕಾಯುಕ್ತ ಇಲಾಖೆ ಇತ್ಯರ್ಥಪಡಿಸಲು ಬರುವುದಿಲ್ಲ. ಆದ್ದರಿಂದ ನ್ಯಾಯಾಲಯದಲ್ಲಿರುವ ವ್ಯಾಜ್ಯಗಳ ಬಗ್ಗೆ ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಬಾರದು. ನಿಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ಮಾಡುತ್ತಿದ್ದರೆ ಅಥವಾ ಆಮಿಷಗಳನ್ನು ಇಟ್ಟರೆ ನಮಗೆ ದೂರು ನೀಡಿ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ, ಮಧುಸೂಧನ್, ಪ್ರಭು, ತಹಸೀಲ್ದಾರ್ ಎನ್.ಜೆ.ನಾಗರಾಜ್, ತಾಪಂ ಇಒ ಪ್ರಕಾಶ್, ಪಿಡಬ್ಲ್ಯೂಡಿ ಅಭಿಯಂತರ ರವಿಕುಮಾರ್, ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಭಿಯಂತರ ಲೋಹಿತ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಅಶೋಕ್, ತಾಲೂಕುಮಟ್ಟದ ಅಧಿಕಾರಿಗಳು ಹಾಜರಿದ್ದರು.

- - -

-12ಕೆಸಿಎನ್ಜಿ1):