ಮದ್ಯಪಾನದಿಂದ ಮುಕ್ತರಾದರೆ ಉತ್ತಮ ಜೀವನ ನಡೆಸಲು ಸಾಧ್ಯ

| Published : Dec 18 2024, 12:47 AM IST

ಮದ್ಯಪಾನದಿಂದ ಮುಕ್ತರಾದರೆ ಉತ್ತಮ ಜೀವನ ನಡೆಸಲು ಸಾಧ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮದ್ಯಪಾನದಿಂದ ಮುಕ್ತವಾದ ಕುಟುಂಬಗಳು ಆರ್ಥಿಕವಾಗಿ ಅಭಿವೃದ್ಧಿಯಾಗುತ್ತವೆ ಎಂದು ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ್ ನೆಲ್ಲಿತ್ತಾಯ ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮದ್ಯಪಾನದಿಂದ ಮುಕ್ತವಾದ ಕುಟುಂಬಗಳು ಆರ್ಥಿಕವಾಗಿ ಅಭಿವೃದ್ಧಿಯಾಗುತ್ತವೆ ಎಂದು ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ್ ನೆಲ್ಲಿತ್ತಾಯ ಹೇಳಿದರು.

ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುಟುಂಬದ ಸದಸ್ಯ ಮದ್ಯದ ದಾಸನಾದರೆ ಕುಟುಂಬದ ನೆಮ್ಮದಿ ಹಾಳಾಗುತ್ತದೆ. ದುಡಿಮೆಯನ್ನು ಉಳಿಸದೆ ಎಲ್ಲವನ್ನೂ ಕುಡಿತಕ್ಕೆ ಸುರಿಯುತ್ತಾರೆ. ಇದರಿಂದಾಗಿ ಕುಟುಂಬ ನಡೆಸುವುದೇ ಕಷ್ಟವಾಗುತ್ತದೆ. ಮನೆಗಳಲ್ಲಿರುವ ಇತರರಿಗೆ ನೆಮ್ಮದಿಯೇ ಇಲ್ಲದಂತಾಗುತ್ತದೆ ಎಂದರು.ಮದ್ಯವ್ಯಸನಿಗಳ ಚಿತ್ರ ವಿಚಿತ್ರ ನಡವಳಿಕೆಯಿಂದ ಬೇಸತ್ತು ಹೋಗುತ್ತಾರೆ. ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಕುಟುಂಬದವರಷ್ಟೇ ಅಲ್ಲದೆ ಇಡೀ ಸಮಾಜಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆ ಮದ್ಯವರ್ಜನ ಶಿಬಿರಗಳನ್ನು ನಡೆಸಿ ಲಕ್ಷಾಂತರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿದೆ ಎಂದು ತಿಳಿಸಿದರು. ಪುರಸಭಾ ಅಧ್ಯಕ್ಷೆ ಕೆ.ಎಸ್.ಬನಶಂಕರಿ ರಘು ಮಾತನಾಡಿ, ತಂತ್ರಜ್ಞಾನ ಬೆಳೆದಂತೆ ಇಂದಿನ ಯುವ ಜನಾಂಗದಲ್ಲಿ ಧಾರ್ಮಿಕ ನಂಬಿಕೆಗಳು, ಆಚರಣೆಗಳು ಕಡಿಮೆಯಾಗುತ್ತಿದೆ. ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಸಂಸ್ಕಾರಯುತ ಜೀವನ ಮೌಲ್ಯಗಳ ಬಗ್ಗೆ ತಿಳಿವಳಿಕೆ ನೀಡುವಲ್ಲಿ ಪಾಲಕರ ಪಾತ್ರ ಮಹತ್ವವದ್ದು ಎಂದರು.ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಸಿ.ಎನ್.ಅಶೋಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ್ ದೇವಾಂಗ, ತಾಲೂಕು ಘಟಕದ ಯೋಜನಾಧಿಕಾರಿ ಕೆ.ಪ್ರಸಾದ್, ಜನಜಾಗೃತಿ ವೇದಿಕೆಯ ಸದಸ್ಯರಾದ ಸಿ.ಎನ್.ಮನೋಹರ್, ಉಮೇಶ್, ಮೇಲ್ವಿಚಾರಕ ರಾಘವೇಂದ್ರ ಪೂಜಾರಿ, ಸೇವಾ ಪ್ರತಿನಿಧಿಗಳು, ಶ್ರೀ ಸತ್ಯನಾರಾಯಣಸ್ವಾಮಿ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಸಬಾ ಬಿ ವಲಯದ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು.