ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಫೈನಲ್‌ನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ 2ನೇ ಬಾರಿಗೆ ವಿಜೇತರಾದರೆ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಲು ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಫೈನಲ್‌ನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ 2ನೇ ಬಾರಿಗೆ ವಿಜೇತರಾದರೆ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಲು ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.ಐಪಿಎಲ್ ಫೈನಲ್‌ಗೆ ಸತತ ಎರಡನೇ ಬಾರಿ ಆರ್‌ಸಿಬಿ ಪ್ರವೇಶಿಸಿ, ಭಾನುವಾರ ಫೈನಲ್ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರಿಗೆ ಪೊಲೀಸರು ಕೆಲ ಸೂಚನೆಗಳನ್ನು ನೀಡಿದ್ದಾರೆ. ಕಳೆದ ಬಾರಿಯ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳ ಸಾವಿನ ಕರಾಳ ದುರಂತ ಹಿನ್ನಲೆಯಲ್ಲಿ ಮುಂಜಾಗ್ರತೆವಹಿಸಿರುವ ಪೊಲೀಸರು, ಪ್ರಸಕ್ತ ಸಾಲಿನಲ್ಲಿ ಐಪಿಎಲ್ ಗೆದ್ದರೆ ಆರ್‌ಸಿಬಿ ಅಭಿಮಾನಿಗಳ ಸಡಗರಕ್ಕೆ ಬ್ರೇಕ್ ಹಾಕಿದ್ದಾರೆ.
ಸಾರ್ವಜನಿಕರಿಗೆ ಪೊಲೀಸರ ಸೂಚನೆಗಳುಫೈನಲ್ ಪಂದ್ಯದ ಫಲಿತಾಂಶ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಸಂಭ್ರಮಾಚರಣೆ ಇಲ್ಲ ರಸ್ತೆಗಳಿಗೆ ಮುಖಮಾಡಿರುವ ಎಲ್‌ಇಡಿ ವಾಲ್‌ಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಇಲ್ಲದೆ ಅಳವಡಿಸಬಾರದು. ಪಟಾಕಿ ಸಿಡಿಸಬಾರದು, ಅಪಾಯಕಾರಿ ವಸ್ತುಗಳನ್ನು ಬಳಸಬಾರದು. ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಶಾಂತಿ ಮತ್ತು ಶಿಸ್ತು ಕಾಪಾಡುವುದು. ಸಂಚಾರ ಪೊಲೀಸರ ನೀಡುವ ಸಲಹೆ-ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.ಬೈಕ್ ರ್‍ಯಾಲಿ, ಅತಿವೇಗ ಚಾಲನೆ, ಸ್ಟಂಟ್, ಹಾರ್ನ್ ದುರುಪಯೋಗ ಮತ್ತು ರಸ್ತೆ ತಡೆ ನಿಷೇಧಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಅಶಾಂತಿ ಸೃಷ್ಟಿಸುವುದು, ಜಗಳವಾಡುವುದು ಅಥವಾ ಅಸಭ್ಯ ವರ್ತನೆಗೆ ತಡೆ
ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್, ದ್ವೇಷಪೂರಿತ ಸಂದೇಶ ಅಥವಾ ವದಂತಿಗಳಿಗೆ ಬ್ರೇಕ್ ಪಂದ್ಯ ಫಲಿತಾಂಶದ ಹೆಸರಿನಲ್ಲಿ ಇತರ ತಂಡದ ಅಭಿಮಾನಿಗಳನ್ನು ಪ್ರಚೋದಿಸುವುದು, ನಿಂದಿಸುವುದು ಅಥವಾ ಜಗಳಕ್ಕೆ ಕಾರಣವಾಗುವಂತೆ ವರ್ತಿಸಬಾರದುಕಾನೂನು-ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂಬುದನ್ನು ಮರೆಯಬಾರದು