ಸಾರಾಂಶ
ಮಾನವ ಕಳ್ಳ ಸಾಗಾಣಿಕೆ ಹಕ್ಕುಗಳ ಉಲ್ಲಂಘನೆಯಾಗಿದೆ. ಇದರಿಂದ ಜನರು ಬಲವಂತವಾಗಿ, ಮೋಸದಿಂದ ಅಥವಾ ಬಲತ್ಕಾರದಿಂದ ದುಡಿಮೆ, ಲೈಂಗಿಕ ಶೋಷಣೆಗಾಗಿ ಸಾಗಿಸಲ್ಪಡುತ್ತಾರೆ.
ಕೊಪ್ಪಳ:
ಮಾನವ ಕಳ್ಳ ಸಾಗಾಣಿಕೆ ಗಂಭೀರ ಅಪರಾಧವಾಗಿದ್ದು, ಸಾಗಾಣಿಕೆ ಕಂಡುಬಂದರೆ ದೂರು ದಾಖಲಿಸಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದ ಹೇಳಿದರು.ನಗರದ ತಾಲೂಕು ಪಂಚಾಯಿತಿಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯ್ದೆ ಹಾಗೂ ಕಾಯಂ ಜನತಾ ನ್ಯಾಯಾಲಯ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನವ ಕಳ್ಳ ಸಾಗಾಣಿಕೆ ಹಕ್ಕುಗಳ ಉಲ್ಲಂಘನೆಯಾಗಿದೆ. ಇದರಿಂದ ಜನರು ಬಲವಂತವಾಗಿ, ಮೋಸದಿಂದ ಅಥವಾ ಬಲತ್ಕಾರದಿಂದ ದುಡಿಮೆ, ಲೈಂಗಿಕ ಶೋಷಣೆಗಾಗಿ ಸಾಗಿಸಲ್ಪಡುತ್ತಾರೆ. ಈ ಸಮಸ್ಯೆಯ ವಿರುದ್ಧ ಜಾಗೃತಿ ಮೂಡಿಸಲು ಮತ್ತು ಇಂತಹ ಪ್ರಕರಣಗಳಿಗೆ ಸಿಲುಕಿಕೊಂಡವರಿಗೆ ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಎಲ್ಲ ಹಂತದಲ್ಲೂ ಕ್ರಮವಹಿಸಬೇಕು ಎಂದರು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯ್ದೆ ಮತ್ತು ಕಾಯಂ ಜನತಾ ನ್ಯಾಯಾಲಯ ಕುರಿತು ವಿವರವಾದ ಮಾಹಿತಿ ನೀಡಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಟರಾಜ್ ಮಾತನಾಡಿ, ಮಾನವ ಸಾಗಾಣಿಕೆ ಹಳ್ಳಿ, ನಗರದಲ್ಲಿ ಕಂಡುಬಂದರೆ ದೂರು ದಾಖಲಿಸಬೇಕು ಎಂದು ಹೇಳಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಾಹಾಂತಯ್ಯ ಸ್ವಾಮಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಕಾವಲು ಸಮಿತಿ ರಚಿಸಿದ್ದು ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಮಿತಿಯಲ್ಲಿ ಚರ್ಚಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣ ಕುಬಕಡ್ಡಿ, ಪ್ರತಿಜ್ಞಾ ವಿಧಿ ಬೋಧಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ್ ವೈ. ಶೆಟ್ಟಪ್ಪನವರ್ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸಹಾಯಕ ನಿರ್ದೇಶಕ ಮಹೇಶ್, ಮೇಲ್ವಿಚಾರಕಿ ಚಂದ್ರಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪ ಗಂದಧ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿ ಹಾಜರಿದ್ದರು.