ಸಾರಾಂಶ
ಶಿರಸಿ:
ಕಮಲದ ಚಿಹ್ನೆಗೆ ಮತ ಹಾಕಿದರೆ ಪ್ರಭು ಶ್ರೀರಾಮನಿಗೆ ಮತ್ತು ನರೇಂದ್ರ ಮೋದಿಗೆ ಮತ ನೀಡಿದಂತೆ ಎಂದು ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಶಿರಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಟಿಕಲ್ 370 ರದ್ದು, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.50 ಸ್ಥಾನ ಏರಿಕೆ ಮಾಡಿರುವುದು, ಸಾವಿರಾರು ವರ್ಷಗಳ ನಮ್ಮ ಮಹನೀಯರ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದೆ. ಭಾರತೀಯರ ಸಾವಿರಾರು ವರ್ಷಗಳ ಕನಸು ಈಡೇರಿಸಿದ್ದಾರೆ ಎಂದರು.ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಅಭಿವೃದ್ಧಿ ಕೆಲಸವನ್ನು ಜಗತ್ತು ಮೆಚ್ಚಿಕೊಂಡಿದ್ದು, ಜನಸಾಮಾನ್ಯರಿಗೆ ಹಿಂದೆಂದೂ ಯಾವ ಸರ್ಕಾರವೂ ನೀಡದ ಯೋಜನೆಗಳನ್ನು ಬಡವರಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪಿದೆ. ಉಜ್ವಲ ಯೋಜನೆ, ಆಯುಷ್ಮಾನ ಭಾರತ್, ಮನೆ ಮನೆ ಗಂಗೆ, ಕಿಸಾನ್ ಸಮ್ಮಾನ್, ಆತ್ಮನಿರ್ಭರ ಭಾರತ್ ಸೇರಿದಂತೆ ಹಲವಾರು ಯೋಜನೆಗಳನ್ನು ಜನಸಾಮಾನ್ಯರಿಗೆ ನೀಡಿದೆ. ಯೋಜನೆಯನ್ನು ಮೆಚ್ಚಿನ ಜನರು ಈ ಬಾರಿ ಮತ್ತೊಮ್ಮೆ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ೪.೮೦ ಲಕ್ಷ ಮತಗಳ ಅಂತರದಿಂದ ದಾಖಲೆಯ ಜಯ ಗಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ದಾಖಲೆ ಮುರಿದು ಇನ್ನೂ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿಜಯ ಸಾಧಿಸಲಿದ್ದಾರೆ ಎಂದು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಉತ್ತರಕನ್ನಡ ಕ್ಷೇತ್ರದಲ್ಲಿ ನಮ್ಮ ದಾಖಲೆಯನ್ನು ನಾವೇ ಮುರಿದು ಹೊಸ ದಾಖಲೆ ನಿರ್ಮಾಣ ಮಾಡಲಿದ್ದೇವೆ. ನಮ್ಮ ಅಭ್ಯರ್ಥಿ ಕಮಲದ ಹೂವು ವ್ಯಕ್ತಿಯಾರು ಅಂತ ವರಿಷ್ಠರು ನಿರ್ಧರಿಸುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿ ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
;Resize=(128,128))
;Resize=(128,128))
;Resize=(128,128))
;Resize=(128,128))