ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿ ಕೃಷಿಸಿರಿ ಆವರಣದಲ್ಲಿ ೨೩ನೇ ವರ್ಷದ ಇಫ್ತಾರ್ ಕೂಟವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ಸೇರಿದಂತೆ ಸುಮಾರು ೬,೦೦೦ಕ್ಕೂ ಅಧಿಕ ಮಂದಿ ಭಾಗವಹಿಸಿ ಸೌಹಾರ್ದತೆ ಮತ್ತು ಸಹೋದರತ್ವದ ಸಂದೇಶ ಸಾರಿದರು.ರಮ್ಜಾನ್ ಸಂದೇಶ ನೀಡಿದ ರಾಜ್ಯ ವಕ್ಫ್ ಕೌನ್ಸಿಲ್ ಸದಸ್ಯ ಅನೀಸ್ ಕೌಸರ್, ಇಂದಿನ ಸಮಾಜದಲ್ಲಿ ಹೆಚ್ಚುತ್ತಿರುವ ಭಿನ್ನಾಭಿಪ್ರಾಯಗಳ ನಡುವೆ ಇಫ್ತಾರ್‌ನಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿವೆ. ಇವು ವಿವಿಧ ಧರ್ಮಗಳ ನಡುವೆ ಪರಸ್ಪರ ಗೌರವ ಮತ್ತು ಸಾಮರಸ್ಯವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.ಎಲ್ಲ ಧರ್ಮಗಳೂ ಮೂಲತಃ ಕರುಣೆ, ದಯೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಾರುತ್ತವೆ. ಮಾನವನು ಮಾನವ ಕುಲವನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಎಂ.ಎ. ಗಫೂರ್, ಟ್ರಸ್ಟಿಗಳಾದ ವಿವೇಕ್ ಆಳ್ವ ಹಾಗೂ ಡಾ ವಿನಯ ಆಳ್ವ, ಬಿಲ್ಡರ್ ಮುಸ್ತಫಾ, ಎಂಎಸ್ ಸೈಫುದ್ದೀನ್ ಮತ್ತಿತರರಿದ್ದರು.ನಮಾಜ್ ಪ್ರಾರ್ಥನೆಗಾಗಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಸಮೂಹ ಭೋಜನದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.ಇಫ್ತಾರ್ ಸೌಹಾರ್ದತೆ ಬೆಳೆಸುವ ವೇದಿಕೆ: ಅನೀಸ್ ಕೌಸರ್
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿ ಕೃಷಿಸಿರಿ ಆವರಣದಲ್ಲಿ ೨೩ನೇ ವರ್ಷದ ಇಫ್ತಾರ್ ಕೂಟವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ಸೇರಿದಂತೆ ಸುಮಾರು ೬,೦೦೦ಕ್ಕೂ ಅಧಿಕ ಮಂದಿ ಭಾಗವಹಿಸಿ ಸೌಹಾರ್ದತೆ ಮತ್ತು ಸಹೋದರತ್ವದ ಸಂದೇಶ ಸಾರಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.