ಕನ್ನಡಪ್ರಭ ವಾರ್ತೆ ಇಳಕಲ್ಲ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ ಭೇಟಿ ನೀಡಿ, ಠಾಣೆಗಳ ಕಾರ್ಯವೈಖರಿ ಹಾಗೂ ಕಾನೂನು ಸುವ್ಯವಸ್ಥೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಇಳಕಲ್ಲ

ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ ಭೇಟಿ ನೀಡಿ, ಠಾಣೆಗಳ ಕಾರ್ಯವೈಖರಿ ಹಾಗೂ ಕಾನೂನು ಸುವ್ಯವಸ್ಥೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

ಠಾಣೆಗೆ ಆಗಮಿಸಿದ ಐಜಿಪಿ ಸಂದೀಪ್ ಪಾಟೀಲ್ ಅವರನ್ನು ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಿಕಾರ್ಜುನ ಸತ್ತಿಗೌಡರ ಸ್ವಾಗತಿಸಿದರು.ಬಳಿಕ ನಗರ ಹಾಗೂ ಗ್ರಾಮೀಣ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಪ್ರಗತಿ, ಬಾಕಿ ಪ್ರಕರಣಗಳ ತನಿಖೆ, ಕಾನೂನು ಸುವ್ಯವಸ್ಥೆ ಸ್ಥಿತಿ ಹಾಗೂ ಪ್ರಮುಖ ಕಡತಗಳ ನಿರ್ವಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಮಾರ್ಗದರ್ಶನ ನೀಡಿದರು.

ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುರಕ್ಷತೆ, ಅಪರಾಧ ನಿಯಂತ್ರಣ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಐಜಿಪಿ ಮಾಹಿತಿ ಪಡೆದರು. ಸಾರ್ವಜನಿಕರಿಗೆ ಉತ್ತಮ ಹಾಗೂ ತ್ವರಿತ ಪೊಲೀಸ್ ಸೇವೆ ಒದಗಿಸುವುದರ ಜತೆಗೆ, ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು ಮತ್ತು ವೃತ್ತಿಪರತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಠಾಣೆ ಆವರಣ ವೀಕ್ಷಿಸಿದ ಅವರು, ಸ್ವಚ್ಛತೆ, ದಾಖಲೆಗಳ ನಿರ್ವಹಣೆ ಹಾಗೂ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಿದರು.ಈ ವೇಳೆ ಡಿವೈಎಸ್ಪಿ ಸಂತೋಷ ಬನ್ನಟ್ಟಿ, ಸಿಪಿಐ ಸಂತೋಷ ಅಜೂರ, ಪಿಎಸ್ಐ ಮಂಜುನಾಥ ಪಾಟೀಲ, ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಎಸ್.ಆರ್.ನಾಯಕ, ಸಿಬ್ಬಂದಿ ಹಾಜರಿದ್ದರು.