ಕನ್ನಡಪ್ರಭ ವಾರ್ತೆ ಇಳಕಲ್ಲ
ಬಾಗಲಕೋಟ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ ಭೇಟಿ ನೀಡಿ ಪರಿಶೀಲಿಸಿದರು.ಮೊದಲಿಗೆ ತಾಲೂಕಿನ ಗೋರಬಾಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿಯ ಎಲ್ಲ ಕಡತಗಳನ್ನು ಪರಿಶೀಲಿಸಿದರು. ನಂತರ ಗೋರಬಾಳ ಗ್ರಾಮ ಪಂಚಾಯಿತಿ ಅಡಿ ಬರುವ ಗೋರಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯ ಸ್ವಚ್ಛತೆ ಹಾಗು ಶಿಕ್ಷಣದ ಬಗ್ಗೆ ವಿಚಾರಿಸಿ ಅಲ್ಲಿಯ ಮಕ್ಕಳ ಜತೆ ಮಾತನಾಡಿದರು.
ನಂತರ ಅವರು ಇಳಕಲ್ಲ ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆ ಪರಿಶೀಲಿಸಿದರು. ನಂತರ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ವೈದ್ಯರಿಗೆ ಸೂಚಿಸಿದರು. ಇಲ್ಲಿನ ಆಸ್ಪತ್ರೆಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಭೇಟಿ ನೀಡುತ್ತಿದ್ದೇವೆ. ವೈದ್ಯರು ಹಾಗೂ ಸಿಬ್ಬಂದಿ ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಯಾರಾದರೂ ಕರ್ತವ್ಯ ಲೋಪ ವೆಸಗಿದರೆ ಅಂತವರ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಿಇಒ ಇವರ ಜತೆ ಇಳಕಲ್ಲ ತಾಪಂ ಅಧಿಕಾರಿಗಳು ಸಿಬ್ಬಂದಿ ಇದ್ದರು.