ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ತಲೆತಗ್ಗಿಸುವ ವಿಚಾರ: ಸೈಯದ್

| Published : Jun 21 2024, 01:01 AM IST

ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ತಲೆತಗ್ಗಿಸುವ ವಿಚಾರ: ಸೈಯದ್
Share this Article
  • FB
  • TW
  • Linkdin
  • Email

ಸಾರಾಂಶ

ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ರದ್ದುಗೊಳಿಸಲಾಗಿದೆ. ಈ ಬೆಳವಣಿಗೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿರುವುದು ದೇಶವೇ ತಲೆತಗ್ಗಿಸುವ ವಿಚಾರ ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಘಟಕದ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ದಾವಣಗೆರೆ: ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ರದ್ದುಗೊಳಿಸಲಾಗಿದೆ. ಈ ಬೆಳವಣಿಗೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಿರುವುದು ದೇಶವೇ ತಲೆತಗ್ಗಿಸುವ ವಿಚಾರ ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಘಟಕದ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ ವರದಿ ನೀಡಿದ ಆಧಾರದ ಮೇಲೆ ಪರೀಕ್ಷೆ ರದ್ದುಗೊಳಿಸಲಾಗಿದೆ. ಇದಕ್ಕೆ ಯಾರು ಹೊಣೆ? ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಯುಜಿಸಿ ನೆಟ್ ಪರೀಕ್ಷೆಯಲ್ಲಿ ಉನ್ನತಮಟ್ಟದ ಪಾರದರ್ಶಕತೆ ಹಾಗೂ ಪಾವಿತ್ರ‍್ಯತೆ ಕಾಯ್ದುಕೊಂಡಿಲ್ಲ. ಹೊಸದಾಗಿ ಪರೀಕ್ಷೆ ನಡೆಸಲು ನಿರ್ಧರಿಸಿರುವುದು ಸ್ವಾಗತಾರ್ಹ. ಇಂಥ ಅತ್ಯುನ್ನತ ಪರೀಕ್ಷೆ ಅಕ್ರಮವಾಗಿ ನಡೆದಿರುವುದು ದುರಂತ ಎಂದು ಆಗ್ರಹಿಸಿದ್ದಾರೆ.

11 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು. ಆದರೆ, ಕಿರಿಯ ಸಂಶೋಧನಾ ಫೆಲೋಶಿಪ್, ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಹಾಗೂ ವಿಶ್ವವಿದ್ಯಾನಿಲಯಗಳ ಪಿಎಚ್.ಡಿ ಪ್ರವೇಶಕ್ಕೆ ನೆಟ್ ಪರೀಕ್ಷೆ ನಡೆಸಲಾಗುತ್ತದೆ. ವೈದ್ಯಕೀಯ ಪ್ರವೇಶಕ್ಕೆ ನಡೆಸಲಾಗುವ ನೀಟ್‌ನಲ್ಲಿಯೇ ಅಕ್ರಮ ನಡೆದಿದೆ ಎಂದಾದರೆ, ಯಾವ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಸೈಯದ್ ಖಾಲಿದ್ ಅಹ್ಮದ್ ಪ್ರಶ್ನಿಸಿದ್ದಾರೆ.

- - - -20ಕೆಡಿವಿಜಿ34ಃ: ಸೈಯದ್ ಖಾಲಿದ್ ಅಹ್ಮದ್